Asian Games Cricket: ಏಷ್ಯನೇ ಗೇಮ್ಸ್ ಕ್ರಿಕೆಟ್; ನೇಪಾಳ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ನೇಪಾಳದ ವಿರುದ್ಧದ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನೇತೃತ್ವದ ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಹ್ಯಾಂಗ್‌ಝೌ (ಚೀನಾ): ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರಿಕೆಟ್‌ನ ಮೊದಲ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಐಸಿಸಿ ಶ್ರೇಯಾಂಕದಲ್ಲಿ ಉತ್ತಮ ಅಂಕಗಳನ್ನು ಹೊಂಡಿರುವ ಟೀಂ ಇಂಡಿಯಾ ಅಗ್ರ ಸ್ಥಾನದಲ್ಲಿದೆ. ಈ ಅಂಶಗಳನ್ನು ಆಧಾರಿಸಿ ಏಷ್ಯನ್ ಗೇಮ್ಸ್ ಕ್ರಿಕೆಟ್‌ನಲ್ಲಿ ನೇರವಾಗಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿತ್ತು.
ಇಂದಿನ (ಅಕ್ಟೋಬರ್ 3, ಮಂಗಳವಾರ) ಪಂದ್ಯದಲ್ಲಿ ಸಾಯಿ ಕಿಶೋರ್ ಆಡುವ 11ರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಜಿತೇಶ್ ಶರ್ಮಾ ವಿಕೆಟ್ ಕೀಪರ್ ಆಗಿದ್ದರೆ, ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ.
ಭಾರತದ ಆಡುವ 11ರ ಬಳಗ
ರುತುರಾಜ್ ಗಾಯಕ್ವಾಡ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಶ್ರೀನಿವಾಸನ್ ಸಾಯಿ ಕಿಶೋರ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಷದೀಪ್ ಸಿಂಗ್,
ನೇಪಾಳ ಆಡುವ 11ರ ಬಳಗ
ರೋಹಿತ್ ಪೌಡೆಲ್ (ನಾಯಕ), ಕುಶಾಲ್ ಭುರ್ಟೆಲ್, ಆಸಿಫ್ ಶೇಕ್ (ವಿಕೆಟ್ ಕೀಪರ್), ಸಂದೀಪ್ ಜೋರಾ, ಗುಲ್ಸನ್ ಝಾ, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಸೋಂಪಾಲ್ ಕಾಮಿ, ಕರಣ್ ಕೆಸಿ, ಭಿನಾಶ್ ಬೋಹರಾ, ಸಂದೀಪ್ ಲಮಿಚಾನೆ