ಕನ್ನಡ ಸುದ್ದಿ  /  ಕ್ರಿಕೆಟ್  /  ಟಿ20 ವಿಶ್ವಕಪ್: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ

ಟಿ20 ವಿಶ್ವಕಪ್: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ

India vs Australia: ಟಿ20 ವಿಶ್ವಕಪ್‌ನಲ್ಲಿ ಜೂನ್‌ 24ರ ಸೋಮವಾರ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿವೆ. ನಿರ್ಣಾಯಕ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ ಆಸಿಸ್‌ ಚೇಸಿಂಗ್‌ ಆಯ್ಕೆ ಮಾಡಿದೆ. ಭಾರತ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಇಳಿಸಿದೆ.

ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ
ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ (REUTERS)

ಸೇಂಟ್ ಲೂಸಿಯಾದ ಡೇರನ್‌ ಸೆಮ್ಮಿ ಕ್ರೀಡಾಂಗಣದಲ್ಲಿ ಜೂನ್‌ 24ರ ಸೋಮವಾರ ನಡೆಯುತ್ತಿರುವ ಟಿ20 ವಿಶ್ವಕಪ್‌ 2024ರ ಸೂಪರ್ 8 ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿವೆ. ಟೂರ್ನಿಯಲ್ಲಿ ಅಮೋಘ ಫಾರ್ಮ್‌ನಲ್ಲಿರುವ ಭಾರತ ತಂಡವು ಅಜೇಯ ಯಾತ್ರೆಯನ್ನು ಮುಂದುವರೆಸುವ ನಿರೀಕ್ಷೆಯಲ್ಲಿದೆ. ಇಂದು ಭಾರತ ಗೆದ್ದರೆ ಸೆಮಿಫೈನಲ್‌ಗೆ ಮುನ್ನಡೆಯಲ್ಲಿದೆ. ಒಂದು ವೇಳೆ ಸಣ್ಣ ಅಂತರದಿಂದ ಸೋತರೂ ಭಾರತಕ್ಕೆ ಸಮಸ್ಯೆ ಇಲ್ಲ. ಆದರೆ ಆಸೀಸ್‌ ದೊಡ್ಡ ಅಅಂತರದಿಂದ ಗೆದ್ದರೆ ಮಾತ್ರ ಸೆಮೀಸ್‌ ಟಿಕೆಟ್‌ ಖಚಿತವಾಗಲಿದೆ. ಮಹತ್ವದ ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಟ್ರೆಂಡಿಂಗ್​ ಸುದ್ದಿ

ಮಹತ್ವದ ಪಂದ್ಯಕ್ಕೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅತ್ತ ಆಸೀಸ್‌ ತಂಡ ಒಂದು ಬದಲಾವಣೆ ಮಾಡಿದೆ. ಆಷ್ಟನ್‌ ಅಗರ್‌ ಬದಲಿಗೆ ಮಿಚೆಲ್‌ ಸ್ಟಾರ್ಕ್‌ ಆಡುವ ಬಳಗ ಸೇರಿಕೊಂಡಿದ್ದಾರೆ.

ಭಾರತ-ಆಸ್ಟ್ರೇಲಿಯಾ ಮುಖಾಮುಖಿ ದಾಖಲೆ

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಟಿ20 ಸ್ವರೂಪದಲ್ಲಿ ಈವರೆಗೆ 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 19 ಪಂದ್ಯಗಳಲ್ಲಿ ಗೆದ್ದಿದೆ. ಅತ್ತ ಆಸ್ಟ್ರೇಲಿಯಾ 11 ಪಂದ್ಯಗಳಲ್ಲಿ ಗೆದ್ದಿದೆ. ಕಳೆದ ಐದು ಮುಖಾಮುಖಿಗಳಲ್ಲಿಯೂ ಭಾರತ ಹಿಡಿತ ಕಾಯ್ದುಕೊಂಡಿದೆ.

ಕೊನೆಯ 5 ಪಂದ್ಯಗಳ ಫಲಿತಾಂಶ

ತಂಡಫಲಿತಾಂಶ
ಭಾರತW W W A W
ಆಸ್ಟ್ರೇಲಿಯಾW W W W W

ಭಾರತ ಆಡುವ ಬಳಗ 

ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್‌ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ ಆಡುವ ಬಳಗ

ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯ್ನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್‌ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹೇಜಲ್‌ವುಡ್.

ಟಿ20 ವಿಶ್ವಕಪ್‌ ಕುರಿತ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ