ಪಾಕಿಸ್ತಾನ ವಿರುದ್ಧ ಗೆದ್ದು ಚರಿತ್ರೆ ಸೃಷ್ಟಿಸಿದ್ದ ತಂಡವನ್ನೇ ಭಾರತ ಪ್ರವಾಸಕ್ಕೂ ಪ್ರಕಟಿಸಿದ ಬಾಂಗ್ಲಾದೇಶ-bangladesh squad for india tests najmul shanto leads 16 member squad jaker replaces shoriful prs ,ಕ್ರಿಕೆಟ್ ಸುದ್ದಿ
ಕನ್ನಡ ಸುದ್ದಿ  /  ಕ್ರಿಕೆಟ್  /  ಪಾಕಿಸ್ತಾನ ವಿರುದ್ಧ ಗೆದ್ದು ಚರಿತ್ರೆ ಸೃಷ್ಟಿಸಿದ್ದ ತಂಡವನ್ನೇ ಭಾರತ ಪ್ರವಾಸಕ್ಕೂ ಪ್ರಕಟಿಸಿದ ಬಾಂಗ್ಲಾದೇಶ

ಪಾಕಿಸ್ತಾನ ವಿರುದ್ಧ ಗೆದ್ದು ಚರಿತ್ರೆ ಸೃಷ್ಟಿಸಿದ್ದ ತಂಡವನ್ನೇ ಭಾರತ ಪ್ರವಾಸಕ್ಕೂ ಪ್ರಕಟಿಸಿದ ಬಾಂಗ್ಲಾದೇಶ

India vs Bangladesh Test 2024: ಟೀಮ್ ಇಂಡಿಯಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್​ ಸರಣಿಗೆ ಬಾಂಗ್ಲಾದೇಶ ತನ್ನ 16 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಯಾರಿಗೆಲ್ಲಾ ಅವಕಾಶ ಸಿಕ್ಕಿದೆ ನೋಡಿ.

ಪಾಕಿಸ್ತಾನ ವಿರುದ್ಧ ಗೆದ್ದು ಚರಿತ್ರೆ ಸೃಷ್ಟಿಸಿದ್ದ ತಂಡವನ್ನೇ ಭಾರತ ಪ್ರವಾಸಕ್ಕೂ ಪ್ರಕಟಿಸಿದ ಬಾಂಗ್ಲಾದೇಶ
ಪಾಕಿಸ್ತಾನ ವಿರುದ್ಧ ಗೆದ್ದು ಚರಿತ್ರೆ ಸೃಷ್ಟಿಸಿದ್ದ ತಂಡವನ್ನೇ ಭಾರತ ಪ್ರವಾಸಕ್ಕೂ ಪ್ರಕಟಿಸಿದ ಬಾಂಗ್ಲಾದೇಶ

India vs Bangladesh Test 2024: ಇತ್ತೀಚೆಗಷ್ಟೇ ಪಾಕಿಸ್ತಾನ ವಿರುದ್ಧ ಐತಿಹಾಸಿಕ ಟೆಸ್ಟ್​ ಸರಣಿಯನ್ನು ಗೆದ್ದುಕೊಂಡು ಚರಿತ್ರೆ ಸೃಷ್ಟಿಸಿದ್ದ ಬಾಂಗ್ಲಾದೇಶ, ಇದೀಗ ಟೀಮ್ ಇಂಡಿಯಾ ಬೇಟೆಗೆ ಸಜ್ಜಾಗಿದೆ. ಅದರಂತೆ, ರೋಹಿತ್ ಪಡೆಯ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್​​ ಸರಣಿಗೆ ಇಂದು (ಗುರುವಾರ, ಸೆಪ್ಟೆಂಬರ್​ 12) 16 ಸದಸ್ಯರ ಬಾಂಗ್ಲಾದೇಶ ತಂಡವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಪ್ರಕಟಿಸಿದೆ. ಆದರೆ, ಇತ್ತೀಚೆಗಷ್ಟೇ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ವೇಗಿ ಶೋರಿಫುಲ್ ಇಸ್ಲಾಂ ಗಾಯದಿಂದ ಸರಣಿಯಿಂದ ಹೊರಗುಳಿದಿದ್ದಾರೆ.

ಪಾಕಿಸ್ತಾನದ ತವರು ನೆಲದಲ್ಲಿ ಬಾಂಗ್ಲಾದೇಶ ಎರಡೂ ಟೆಸ್ಟ್​ ಪಂದ್ಯಗಳನ್ನು ಗೆದ್ದು ಸರಣಿಯನ್ನು ವಶಪಡಿಸಿಕೊಂಡಿತ್ತು. ಆ ಮೂಲಕ ಟೆಸ್ಟ್​ ಕ್ರಿಕೆಟ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಪಾಕ್ ಎದುರು ಟೆಸ್ಟ್ ಸಿರೀಸ್​ ಗೆದ್ದ ಚರಿತ್ರೆ ಸೃಷ್ಟಿಸಿತ್ತು. ಇದೀಗ ಅದೇ ಆತ್ಮ ವಿಶ್ವಾಸದಲ್ಲಿ ಭಾರತದ ಪ್ರವಾಸ ಕೈಗೊಳ್ಳಲಿದ್ದು, ದಂಡಯಾತ್ರೆ ನಡೆಸಲು ಸಜ್ಜಾಗಿದೆ. ಭಾರತ ಮತ್ತು ಬಾಂಗ್ಲಾ ನಡುವೆ ಮೊದಲ ಟೆಸ್ಟ್ ಪಂದ್ಯ ಸೆಪ್ಟೆಂಬರ್ 19ರಿಂದ ಪ್ರಾರಂಭವಾಗಲಿದೆ. ಈ ಪಂದ್ಯ ಚೆನ್ನೈನ ಎಂ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ಜರುಗಲಿದೆ. ಎರಡನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ಸೆಪ್ಟೆಂಬರ್ 27 ರಂದು ನಡೆಯಲಿದೆ.

ರಾವಲ್ಪಿಂಡಿಯಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 3 ವಿಕೆಟ್ ಕಬಳಿಸಿದ 23ರ ಹರೆಯದ ಶೋರಿಫುಲ್ ಪಾಕ್ ಬ್ಯಾಟ್ಸ್​​ಮನ್​ಗಳಿಗೆ ಸವಾಲಾಗಿದ್ದರು. ಆದರೆ ಗಾಯದ ಸಮಸ್ಯೆಯಿಂದಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಹಾಗಾಗಿ ಅವರು ಇನ್ನೂ ಚೇತರಿಸಿಕೊಳ್ಳದ ಕಾರಣ ಟೀಮ್ ಇಂಡಿಯಾ ಸರಣಿಯಿಂದ ಹೊರಬಿದ್ದಿದ್ದಾರೆ. ಅವರು ತೊಡೆಸಂದು ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಆದ್ದರಿಂದ ಅವರನ್ನು ಸರಣಿಗೆ ಆಯ್ಕೆ ಮಾಡಲಾಗಿಲ್ಲ ಎಂದು ಬಿಸಿಬಿ ಸ್ಪಷ್ಟಪಡಿಸಿದೆ.

ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಮ್ಯಾಚ್ ವಿನ್ನಿಂಗ್ ಶತಕ ಸಿಡಿಸಿದ್ದ ಲಿಟನ್ ದಾಸ್ ಸಾಮಾನ್ಯ ವಿಕೆಟ್ ಕೀಪರ್ ಆಗಿ ತಂಡದಲ್ಲಿದ್ದರೂ, ಝಾಕರ್ ಅಲಿ ಅನಿಕ್ ಅವರನ್ನು ಬಾಂಗ್ಲಾದೇಶ ತಂಡಕ್ಕೆ ಎರಡನೇ ವಿಕೆಟ್ ಕೀಪರ್ ಆಗಿ ಕರೆತರಲಾಗಿದೆ. ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಮ್ಯಾಚ್ ವಿನ್ನಿಂಗ್ ಶತಕ ಸಿಡಿಸಿದ್ದ ಲಿಟನ್ ದಾಸ್ ಮೊದಲ ಆಯ್ಕೆಯ ವಿಕೆಟ್ ಕೀಪರ್​ ಆಗಿದ್ದರೆ, ಝಾಕರ್ ಅಲಿ ಅನಿಕ್ ಅವರನ್ನು ಬಾಂಗ್ಲಾದೇಶ ತಂಡಕ್ಕೆ ಎರಡನೇ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.

ಬಾಂಗ್ಲಾದೇಶ ಟೆಸ್ಟ್ ತಂಡ

ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಮಹಮದುಲ್ಲಾ ಹಸನ್ ಜಾಯ್, ಜಾಕಿರ್ ಹಸನ್, ಶದ್ಮನ್ ಇಸ್ಲಾಂ, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟ್ಟನ್ ದಾಸ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ನಯೀಮ್ ಹಸನ್, ನಹೀದ್ ರಾಣಾ, ಹಸನ್ ತಸ್ಕಿನ್ ಅಹ್ಮದ್, ಸೈಯದ್ ಖಾಲಿದ್ ಅಹ್ಮದ್, ಜಾಕರ್ ಅಲಿ ಅನಿಕ್ (ವಿಕೆಟ್ ಕೀಪರ್).

ಯಶ್​ ದಯಾಳ್​ಗೆ ಚೊಚ್ಚಲ ಕರೆ

ನಾಲ್ಕು ದಿನಗಳ ಹಿಂದಷ್ಟೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೂಡ 16 ಸದಸ್ಯರ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಮಾತ್ರ ತಂಡವನ್ನು ಪ್ರಕಟಿಸಲಾಗಿದೆ. ಯಶ್ ದಯಾಳ್ ಇದೇ ಮೊದಲ ಬಾರಿಗೆ ತಂಡದಲ್ಲಿ ಅವಕಾಶ ಪಡೆದರೆ, ರಿಷಭ್ ಪಂತ್ ದೀರ್ಘಕಾಲದ ನಂತರ ತಂಡಕ್ಕೆ ಮರಳಿದ್ದಾರೆ. ಅಲ್ಲದೆ, ಧ್ರುವ್ ಜುರೆಲ್, ಸರ್ಫರಾಜ್ ಖಾನ್ ತಮ್ಮ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಶ್ರೇಯಸ್ ಅಯ್ಯರ್​ಗೆ ಅವಕಾಶ ಸಿಕ್ಕಿಲ್ಲ.

ಭಾರತೀಯ ಟೆಸ್ಟ್ ತಂಡ (ಮೊದಲ ಟೆಸ್ಟ್​ ಪಂದ್ಯಕ್ಕೆ)

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ , ಸರ್ಫರಾಜ್ ಖಾನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಆಕಾಶ್ ಸಿರಾಜ್, ಮೊಹಮ್ಮದ್ ಸಿರಾಜ್, ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.

mysore-dasara_Entry_Point