ಬಾಂಗ್ಲಾದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ: ಸ್ಥಳಾಂತರವಾಗುತ್ತಾ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2024?-bangladesh violence icc womens t20 world cup 2024 in question after army takes over bangladesh as pm hasina flees vbt ,ಕ್ರಿಕೆಟ್ ಸುದ್ದಿ
ಕನ್ನಡ ಸುದ್ದಿ  /  ಕ್ರಿಕೆಟ್  /  ಬಾಂಗ್ಲಾದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ: ಸ್ಥಳಾಂತರವಾಗುತ್ತಾ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2024?

ಬಾಂಗ್ಲಾದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ: ಸ್ಥಳಾಂತರವಾಗುತ್ತಾ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2024?

Bangladesh Violence: ಬಾಂಗ್ಲಾದೇಶದಲ್ಲಿ ಸರ್ಕಾರದ ಪತನದ ನಂತರ ರಾಜಕೀಯ ಮತ್ತು ರಾಜತಾಂತ್ರಿಕ ಅಸ್ಥಿರತೆ ಉದ್ವಿಗ್ನಗೊಂಡಿದೆ. ಇದು ಬಾಂಗ್ಲಾದೇಶದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅದರಲ್ಲೂ ಅಕ್ಟೋಬರ್‌ನಲ್ಲಿ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್‌ಗೆ ಸಂಬಂಧಿಸಿದಂತೆ ಆತಂಕ ಹೆಚ್ಚುತ್ತಿವೆ.

ಬಾಂಗ್ಲಾದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ: ಸ್ಥಳಾಂತರವಾಗುತ್ತಾ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2024?
ಬಾಂಗ್ಲಾದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ: ಸ್ಥಳಾಂತರವಾಗುತ್ತಾ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2024?

ಭಾರತದ ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅವ್ಯವಸ್ಥೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಕಳೆದ ಕೆಲವು ವಾರಗಳಿಂದ ಬಾಂಗ್ಲಾದಲ್ಲಿ ವಿಶೇಷವಾಗಿ ರಾಜಧಾನಿ ಢಾಕಾದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಹಿಂಸಾತ್ಮಕ ಚಳುವಳಿ ನಡೆಯುತ್ತಿದೆ. ಇದರಲ್ಲಿ ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಪ್ರಧಾನಿ ಶೇಖ್ ಹಸೀನಾ ಅವರು ಹಠಾತ್ತನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಮತ್ತು ದೇಶ ತೊರೆದಿದ್ದಾರೆ.

ಸರ್ಕಾರದ ಪತನದ ನಂತರ ರಾಜಕೀಯ ಮತ್ತು ರಾಜತಾಂತ್ರಿಕ ಅಸ್ಥಿರತೆ ಉದ್ವಿಗ್ನಗೊಂಡಿದೆ. ಇದು ಬಾಂಗ್ಲಾದೇಶದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅದರಲ್ಲೂ ಅಕ್ಟೋಬರ್‌ನಲ್ಲಿ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್‌ಗೆ ಸಂಬಂಧಿಸಿದಂತೆ ಆತಂಕ ಹೆಚ್ಚುತ್ತಿವೆ. ಈಗ ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯಿದ್ದು ಪ್ರಸ್ತುತ ಅಲ್ಲಿ ಸರ್ಕಾರವಿಲ್ಲ. ಅಲ್ಲಿನ ಸೇನೆ ದೇಶದ ಆಡಳಿತವನ್ನು ತನ್ನ ಕೈಗೆ ತೆಗೆದುಕೊಂಡಿದೆ.

ಟಿ20 ವಿಶ್ವಕಪ್ ಆಯೋಜನೆಯಾಗುತ್ತಾ?

ರಾಜಧಾನಿ ಢಾಕಾದಲ್ಲಿರುವ ಪ್ರಧಾನಿ ನಿವಾಸಕ್ಕೆ ಪ್ರತಿಭಟನಾಕಾರರು ನುಗ್ಗಿ ಲೂಟಿ ಮಾಡುತ್ತಿರುವ ಚಿತ್ರಗಳು ವೈರಲ್ ಆಗುತ್ತಿವೆ. ಇದರಿಂದಾಗಿ ಎರಡು ತಿಂಗಳ ನಂತರ ನಡೆಯಲಿರುವ ಟಿ20 ವಿಶ್ವಕಪ್ ಅನ್ನು ಬಾಂಗ್ಲಾದೇಶ ಆಯೋಜಿಸಲು ಸಾಧ್ಯವಾಗುವುದೇ ಎಂಬ ಪ್ರಶ್ನೆಗಳು ಎದ್ದಿವೆ. ವಿಶ್ವಕಪ್ ಪಂದ್ಯಗಳು ರಾಜಧಾನಿ ಢಾಕಾ ಮತ್ತು ಸಿಲ್ಹೆಟ್‌ನಲ್ಲಿ ನಡೆಯಲಿವೆ. ಭಾರತ, ಬಾಂಗ್ಲಾದೇಶ ಸೇರಿದಂತೆ 10 ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿದ್ದು, ಒಟ್ಟು 23 ಪಂದ್ಯಗಳು ಆಯೋಜಿಸಲಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಐಸಿಸಿ ಇಲ್ಲಿನ ಪರಿಸ್ಥಿತಿಯ ಮೇಲೆ ಕಣ್ಣಿಟ್ಟಿದ್ದು, ಟೂರ್ನಿ ಸಮಯವನ್ನು ಪರಿಗಣಿಸಿದೆ ಎಂದು ವರದಿಯಾಗಿತ್ತು. ಆದರೆ, ಸಮಯದಲ್ಲಿ ಪರಿಸ್ಥಿತಿ ಈಗಿನ ರೀತಿ ಇರಲಿಲ್ಲ. ಈಗ ಪರಿಸ್ಥಿತಿ ಬದಲಾಗಿದೆ ಮತ್ತು ದೇಶದ ಪ್ರಧಾನಿ ಪಲಾಯನ ಮಾಡಿದ್ದಾರೆ. ಇಂತಹ ಬದಲಾದ ಪರಿಸ್ಥಿತಿಯಲ್ಲಿ ಐಸಿಸಿಯ ನಿಲುವು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಈಗಾಗಲೇ ನಿರ್ಧರಿಸಲಾದ ವೇಳಾಪಟ್ಟಿಯ ಪ್ರಕಾರ, ಬಾಂಗ್ಲಾದೇಶವು ಅಕ್ಟೋಬರ್ 3 ರಿಂದ 20 ರವರೆಗೆ ಮಹಿಳಾ ಟಿ20 ವಿಶ್ವಕಪ್ ಅನ್ನು ಆಯೋಜಿಸಲಿದೆ.

ಮಾರ್ಚ್ 2022 ರಲ್ಲಿ ಶ್ರೀಲಂಕಾದಲ್ಲಿ ಭ್ರಷ್ಟಾಚಾರ ಮತ್ತು ಹಣದುಬ್ಬರವನ್ನು ಉಲ್ಲೇಖಿಸಿ ಪ್ರತಿಭಟನಾಕಾರರು ಮಾಜಿ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ನುಗ್ಗಿದಾಗ ಇದೇ ರೀತಿಯ ಅಶಾಂತಿಯ ಪರಿಸ್ಥಿತಿ ಇತ್ತು ಎಂದು ಐಸಿಸಿ ಮೂಲ ತಿಳಿಸಿದೆ. ಈ ಘಟನೆಯ ನಂತರ, ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಜೂನ್‌ನಲ್ಲಿ ದ್ವಿಪಕ್ಷೀಯ ಸರಣಿಗಾಗಿ ಅಲ್ಲಿಗೆ ಪ್ರಯಾಣ ಬೆಳೆಸಿತು. ಹೀಗಾಗಿ ಬಾಂಗ್ಲಾದೇಶದಲ್ಲಿ ಅಸಾಧ್ಯ ಎಂದು ಹೇಳಲಾಗದು.

ಆದರೆ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಮ್ಮ ಮಹಿಳಾ ತಂಡಗಳನ್ನು ಭದ್ರತಾ ಪರಿಸ್ಥಿತಿ ದುರ್ಬಲವಾಗಿರುವ ದೇಶಕ್ಕೆ ಕಳುಹಿಸುತ್ತದೆಯೇ ಎಂಬುದು ನೋಡಬೇಕು. ಅತ್ತ ಐಸಿಸಿಯು ಅನಿವಾರ್ಯ ಸಂದರ್ಭಗಳಲ್ಲಿ ವಿಶೇಷ ಯೋಜನೆಗಳನ್ನು ಹೊಂದಿದೆ. ಬಾಂಗ್ಲಾದಲ್ಲಿ ಟಿ20 ಮಹಿಳಾ ವಿಶ್ವಕಪ್ ನಡೆಸಲು ಸಾಧ್ಯವಾಗದಿದ್ದರೆ ಶ್ರೀಲಂಕಾ ಒಂದು ಆಯ್ಕೆಯಾಗಿರಬಹುದು. ಶ್ರೀಲಂಕಾ 2012ರ ಪುರುಷರ ಟಿ20 ವಿಶ್ವಕಪ್ ಅನ್ನು ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಡುವೆ ಅಲ್ಲಿ ಆಯೋಜಿಸಿತ್ತು.