ಪ್ರಥಮ ಟೆಸ್ಟ್ ಗೆದ್ದ ಬೆನ್ನಲ್ಲೇ 2ನೇ ಪಂದ್ಯಕ್ಕೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐ; ಯಾರೆಲ್ಲಾ ಇನ್, ಯಾರೆಲ್ಲಾ ಔಟ್?-bcci announces indias squad for 2nd test against bangladesh in kanpur after win first test in chennai chepauk prs ,ಕ್ರಿಕೆಟ್ ಸುದ್ದಿ
ಕನ್ನಡ ಸುದ್ದಿ  /  ಕ್ರಿಕೆಟ್  /  ಪ್ರಥಮ ಟೆಸ್ಟ್ ಗೆದ್ದ ಬೆನ್ನಲ್ಲೇ 2ನೇ ಪಂದ್ಯಕ್ಕೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐ; ಯಾರೆಲ್ಲಾ ಇನ್, ಯಾರೆಲ್ಲಾ ಔಟ್?

ಪ್ರಥಮ ಟೆಸ್ಟ್ ಗೆದ್ದ ಬೆನ್ನಲ್ಲೇ 2ನೇ ಪಂದ್ಯಕ್ಕೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐ; ಯಾರೆಲ್ಲಾ ಇನ್, ಯಾರೆಲ್ಲಾ ಔಟ್?

Indias squad for 2nd Test: ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್, ರವೀಂದ್ರ ಜಡೇಜಾ, ಶುಭ್ಮನ್ ಗಿಲ್ ಮತ್ತು ರಿಷಭ್ ಪಂತ್ ಉತ್ತಮ ಪ್ರದರ್ಶನ ನೀಡಿದ ಕಾರಣ ಭಾರತ, 280 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರ ಬೆನ್ನಲ್ಲೇ 2ನೇ ಟೆಸ್ಟ್​​ಗೆ ಬಿಸಿಸಿಐ, ಭಾರತ ತಂಡವನ್ನು ಪ್ರಕಟಿಸಿದೆ.

ಪ್ರಥಮ ಟೆಸ್ಟ್ ಗೆದ್ದ ಬೆನ್ನಲ್ಲೇ 2ನೇ ಪಂದ್ಯಕ್ಕೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐ
ಪ್ರಥಮ ಟೆಸ್ಟ್ ಗೆದ್ದ ಬೆನ್ನಲ್ಲೇ 2ನೇ ಪಂದ್ಯಕ್ಕೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐ

Indias squad for 2nd Test: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ, 280 ರನ್​ಗಳ ಭರ್ಜರಿ ಜಯ ದಾಖಲಿಸಿದೆ. ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಆಲ್​​ರೌಂಡ್ ಆಟ ಹಾಗೂ ಶುಭ್ಮನ್ ಗಿಲ್-ರಿಷಭ್ ಪಂತ್ ಶತಕದಾಟದ ನೆರವಿನಿಂದ ಅಮೋಘ ಜಯ ಸಾಧಿಸಿದ ಟೀಮ್ ಇಂಡಿಯಾ, ಎರಡು ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಪಂದ್ಯ ಗೆದ್ದ ಬೆನ್ನಲ್ಲೇ ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್​ಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದ್ದು, ಅದೇ ತಂಡವನ್ನು ಉಳಿಸಿಕೊಂಡಿದೆ.

ಸೆ 27ರ ಶುಕ್ರವಾರ ಕಾನ್ಪುರದ ಗ್ರೀನ್ ಪಾರ್ಕ್‌ನಲ್ಲಿ ನಡೆಯುವ 2ನೇ ಟೆಸ್ಟ್​ಗೆ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಗೆಲುವಿನ ತಂಡವನ್ನೇ ಉಳಿಸಿಕೊಂಡಿದೆ. ಎರಡೂ ಇನ್ನಿಂಗ್ಸ್‌ಗಳಲ್ಲಿ ಅಗ್ರ ಕ್ರಮಾಂಕದ ಆಟಗಾರರು ಎಡವಿದರೂ ಅವರೇ ಆರಂಭಿಕರಾಗಿ ಕಣಕ್ಕಿಳಿಯುವುದು ಖಚಿತ. ಆಸ್ಟ್ರೇಲಿಯಾದಲ್ಲಿ ಐದು ಪಂದ್ಯಗಳು ಸೇರಿದಂತೆ ಇನ್ನೂ 9 ಪಂದ್ಯಗಳು ಬಾಕಿಯಿರುವ ಕಾರಣ, ಬಾಂಗ್ಲಾ 2ನೇ ಟೆಸ್ಟ್​ಗೆ ಪ್ಲೇಯಿಂಗ್​ 11ರಲ್ಲಿ ಬುಮ್ರಾ, ಸಿರಾಜ್ ಅಥವಾ ಆಕಾಶ್ ದೀಪ್ ಅವರಲ್ಲಿ ಒಬ್ಬರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ಪ್ಲೇಯಿಂಗ್​ 11ನಲ್ಲಿ ಒಂದೆರಡು ಬದಲಾವಣೆ

ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ಲೇಯಿಂಗ್​ 11ನಲ್ಲಿ ಒಂದೆರಡು ಬದಲಾವಣೆ ಕಾಣುವ ಸಾಧ್ಯತೆ ಇದೆ. ಆರಂಭಿಕರಾಗಿ ರೋಹಿತ್​ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಕಣಕ್ಕಿಳಿಯಲಿದ್ದು, ಮೊದಲ ಟೆಸ್ಟ್​ನ 2ನೇ ಇನ್ನಿಂಗ್ಸ್​​​​ನಲ್ಲಿ ತಲಾ ಶತಕ ಸಿಡಿಸಿದ ಗಿಲ್ ಮತ್ತು ಪಂತ್​ ತಮ್ಮ ಸ್ಥಾನ ಉಳಿಸಿಕೊಳ್ಳಲಿದ್ದಾರೆ. ವೈಫಲ್ಯ ಅನುಭವಿಸಿದ ವಿರಾಟ್ ಕೊಹ್ಲಿ ಮತ್ತೆ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ. ಆದರೆ ಕೆಎಲ್ ರಾಹುಲ್ ಬದಲಿಗೆ ಸರ್ಫರಾಜ್ ಖಾನ್​ಗೆ ಅವಕಾಶ ನೀಡಬಹುದು ಎಂಬ ವರದಿ ಇದೆ. ಜತೆಗೆ ಅಶ್ವಿನ್, ಜಡೇಜಾ ಸ್ಥಾನದಲ್ಲೂ ಬದಲಾವಣೆ ಇರುವುದಿಲ್ಲ. ಆದರೆ, ಬುಮ್ರಾ, ಸಿರಾಜ್, ಆಕಾಶ್ ದೀಪ್ ಒಬ್ಬರಲ್ಲಿ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ಭಾರತಕ್ಕೆ ಭರ್ಜರಿ ಗೆಲುವು

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ಅಶ್ವಿನ್ (117) ಮತ್ತು ಜಡೇಜಾ (86) ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಮೊದಲ ಇನ್ನಿಂಗ್ಸ್​​ನಲ್ಲಿ 376 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾ 149 ರನ್ ಗಳಿಸಿ ಆಲೌಟ್ ಆಯಿತು. ಇದರಿಂದ 227 ರನ್​ಗಳ ಹಿನ್ನಡೆ ಅನುಭವಿಸಿತು. ಈ ರನ್​ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾ 4 ವಿಕೆಟ್ ನಷ್ಟಕ್ಕೆ 287 ರನ್ ಪೇರಿಸಿತು. ಒಟ್ಟಾರೆ ಬಾಂಗ್ಲಾಗೆ 515 ರನ್​ಗಳ ಟಾರ್ಗೆಟ್ ನೀಡಿತು. ಗಿಲ್ 117* ಮತ್ತು ಪಂತ್ 109 ರನ್ ಗಳಿಸಿ ಮಿಂಚಿದರು. 515 ರನ್​ಗಳ ಗುರಿ ಬೆನ್ನತ್ತಿದ ಬಾಂಗ್ಲಾ, 234 ರನ್ ಗಳಿಸಿ ಆಲೌಟ್ ಆಯಿತು. ರವಿಚಂದ್ರನ್ ಅಶ್ವಿನ್ 6 ವಿಕೆಟ್ ಉರುಳಿಸಿ ಗಮನ ಸೆಳೆದರು. ಇದರೊಂದಿಗೆ ಬಾಂಗ್ಲಾ 280 ರನ್​ಗಳಿಂದ ಶರಣಾಯಿತು.

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್​), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆರ್​ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಲ್​.

mysore-dasara_Entry_Point