ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ; ಇಬ್ಬರು ಸ್ಟಾರ್ ಆಟಗಾರರಿಗೆ ಕೊಕ್
ಕನ್ನಡ ಸುದ್ದಿ  /  ಕ್ರಿಕೆಟ್  /  ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ; ಇಬ್ಬರು ಸ್ಟಾರ್ ಆಟಗಾರರಿಗೆ ಕೊಕ್

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ; ಇಬ್ಬರು ಸ್ಟಾರ್ ಆಟಗಾರರಿಗೆ ಕೊಕ್

Indias squad: ಅಕ್ಟೋಬರ್ 16ರಿಂದ ಪ್ರಾರಂಭವಾಗುವ ಕಿವೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಗೆ ಬಲಿಷ್ಠ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಆದರೆ ಮೊಹಮ್ಮದ್ ಶಮಿ ಇನ್ನೂ ಫಿಟ್ ಆಗಿಲ್ಲ. ಶ್ರೇಯಸ್ ಅಯ್ಯರ್ ಅವಕಾಶ ಪಡೆಯಲು ವಿಫಲರಾಗಿದ್ದಾರೆ.

ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ
ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ

Indian Cricket Team: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಶುಕ್ರವಾರ (ಅಕ್ಟೋಬರ್ 11) ಪ್ರಕಟಿಸಿದೆ. ಅ. 16ರಿಂದ ಪ್ರಾರಂಭವಾಗುವ ಕಿವೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಗೆ ಭಾರತದ ಟೆಸ್ಟ್ ತಂಡಕ್ಕೆ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ 2-0 ಅಂತರದಲ್ಲಿ ಟೆಸ್ಟ್ ಗೆಲುವು ಸಾಧಿಸಿದ್ದ ಭಾರತ, ಇದೀಗ ಕಿವೀಸ್ ಸಿರೀಸ್​ಗೆ ಒಂದು ಬದಲಾವಣೆ ಮಾಡಿದೆ. ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್‌ಗಳಲ್ಲಿ ಆಡುವ 11ರ ಬಳಗದಲ್ಲಿ ಅವಕಾಶ ಪಡೆಯಲು ವಿಫಲವಾದ ಯುವ ವೇಗಿ ಯಶ್ ದಯಾಲ್ ಅವರನ್ನು ಕೈಬಿಡಲಾಗಿದೆ.

ಗಮನಾರ್ಹವಾಗಿ, ಭಾರತವು ಅವರನ್ನು ಹೊಸ ಮುಖದೊಂದಿಗೆ ಬದಲಾಯಿಸದಿರಲು ನಿರ್ಧರಿಸಿದೆ. ನ್ಯೂಜಿಲೆಂಡ್ ಸರಣಿಗೆ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಅವರನ್ನು ಮೂರು ವಿಶೇಷ ವೇಗದ ಬೌಲರ್‌ಗಳಾಗಿ ಹೆಸರಿಸಿದೆ. ಆದರೆ ಅನುಭವಿ ಬೌಲರ್ ಮೊಹಮ್ಮದ್ ಶಮಿ ಅವರು, ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳಲು ವಿಫಲರಾದ ಕಾರಣ ಮತ್ತೆ ಅವಕಾಶ ಕಳೆದುಕೊಂಡಿದ್ದಾರೆ. ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಮತ್ತು ಅಭಿಮನ್ಯು ಈಶ್ವರನ್ ಅವರಂತಹವರು ಭಾರತದ ಬಲಿಷ್ಠ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ನಾಲ್ವರು ಮೀಸಲು​ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ಮಯಾಂಕ್ ಯಾದವ್ ಮೀಸಲು ಬೌಲರ್​

ಉದಯೋನ್ಮುಖ ವೇಗದ ಬೌಲರ್ ಮಯಾಂಕ್ ಯಾದವ್ ಅವರು ರಿಸರ್ವ್​ ಸ್ಥಾನಕ್ಕೆ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಟಿ20ಐಗೆ ಪದಾರ್ಪಣೆ ಮಾಡಿದರು. ಇದೀಗ ಮೀಸಲು ಆಟಗಾರರನಾಗಿ ಆಯ್ಕೆಯಾಗಿದ್ದು ಮುಂದಿನ ದಿನಗಳಲ್ಲಿ ಪ್ರಮುಖ ತಂಡಕ್ಕೆ ಎಂಟ್ರಿಕೊಟ್ಟರೂ ಅಚ್ಚರಿ ಇಲ್ಲ. ಮೀಸಲುಗಳಲ್ಲಿ ಅಚ್ಚರಿಯ ಆಯ್ಕೆಯಾಗಿದ್ದಾರೆ. ನಿತೀಶ್ ರೆಡ್ಡಿ, ಹರ್ಷಿತ್ ರಾಣಾ ಮತ್ತು ಪ್ರಸಿದ್ಧ್ ಕೃಷ್ಣ ಕೂಡ ಮೀಸಲು ಸ್ಥಾನದಲ್ಲಿದ್ದಾರೆ. ಟೀಮ್ ಮ್ಯಾನೇಜ್ಮೆಂಟ್​ ಫಾಸ್ಟ್​ ಬೌಲರ್​ಗಳ ಲಭ್ಯತೆಗೆ ಹೆಚ್ಚು ಆದ್ಯತೆ ನೀಡಿದೆ.

ಇದನ್ನೂ ಓದಿ:

ಏತನ್ಮಧ್ಯೆ, ಜಸ್ಪ್ರೀತ್ ಬುಮ್ರಾ ಈ ಹಿಂದೆ 2022 ರಲ್ಲಿ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಒಂದು ಟೆಸ್ಟ್‌ನಲ್ಲಿ ಭಾರತ ತಂಡದ ನಾಯಕರಾಗಿದ್ದರು. ತದನಂತರ ಉಪನಾಯಕನಾಗಿಯೂ ಆಡಿದ್ದಾರೆ. ಹಾಗಾಗಿ ಇದರಲ್ಲಿ ಯಾವುದೇ ವಿಶೇಷತೆ ಇಲ್ಲ. ನವೆಂಬರ್‌ನಲ್ಲಿ ನಡೆಯಲಿರುವ ಬಾರ್ಡರ್​ ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್​​ ಅಲಭ್ಯರಾಗುವ ವರದಿಗಳಾಗಿವೆ. ಹೀಗಾಗಿ ಆ ಪಂದ್ಯಕ್ಕೆ ಬುಮ್ರಾ ಅವರೇ ನಾಯಕನಾಗಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ, ಈ ಸರಣಿಗೆ ಅವರನ್ನು ಉಪನಾಯಕನಾಗಿ ಹೆಸರಿಸಲಾಗಿದೆ ಎನ್ನಲಾಗುತ್ತಿದೆ.

ನ್ಯೂಜಿಲೆಂಡ್ ವಿರುದ್ಧದ 3 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

ಮೀಸಲು ಆಟಗಾರರು: ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ಮಯಾಂಕ್ ಯಾದವ್ ಮತ್ತು ಪ್ರಸಿದ್ಧ್ ಕೃಷ್ಣ.

ಭಾರತದ ನ್ಯೂಜಿಲೆಂಡ್ ಪ್ರವಾಸದ ವೇಳಾಪಟ್ಟಿ

1ನೇ ಟೆಸ್ಟ್: ಅಕ್ಟೋಬರ್ 16 ರಿಂದ 21, ಎಂ ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

2ನೇ ಟೆಸ್ಟ್: ಅಕ್ಟೋಬರ್ 24 ರಿಂದ 28, ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ಪುಣೆ

3ನೇ ಟೆಸ್ಟ್: ನವೆಂಬರ್ 1 ರಿಂದ 5, ವಾಂಖೆಡೆ ಸ್ಟೇಡಿಯಂ, ಪುಣೆ

 

Whats_app_banner