ಭಾರತ ತಂಡಕ್ಕೆ ಬಂಪರ್; ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ 125 ಕೋಟಿ ಬಹುಮಾನ ಪ್ರಕಟಿಸಿದ ಬಿಸಿಸಿಐ
ಕನ್ನಡ ಸುದ್ದಿ  /  ಕ್ರಿಕೆಟ್  /  ಭಾರತ ತಂಡಕ್ಕೆ ಬಂಪರ್; ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ 125 ಕೋಟಿ ಬಹುಮಾನ ಪ್ರಕಟಿಸಿದ ಬಿಸಿಸಿಐ

ಭಾರತ ತಂಡಕ್ಕೆ ಬಂಪರ್; ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ 125 ಕೋಟಿ ಬಹುಮಾನ ಪ್ರಕಟಿಸಿದ ಬಿಸಿಸಿಐ

Indian Cricket Team: ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ ಬಂಪರ್​ ಲಾಟರಿ ಹೊಡೆದಿದೆ. ರೋಹಿತ್​ ಶರ್ಮಾ ನೇತೃತ್ವದ ತಂಡಕ್ಕೆ ಬಿಸಿಸಿಐ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ.

ಭಾರತ ತಂಡಕ್ಕೆ ಬಂಪರ್; ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ 125 ಕೋಟಿ ಬಹುಮಾನ ಪ್ರಕಟಿಸಿದ ಬಿಸಿಸಿಐ
ಭಾರತ ತಂಡಕ್ಕೆ ಬಂಪರ್; ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ 125 ಕೋಟಿ ಬಹುಮಾನ ಪ್ರಕಟಿಸಿದ ಬಿಸಿಸಿಐ (ANI )

ಕೆರಿಬಿಯನ್ ನೆಲದಲ್ಲಿ ರೋಹಿತ್ ಶರ್ಮಾ (Rohit Sharma) ಮತ್ತು ಅವರ ತಂಡ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ ನಂತರ ಭಾರತೀಯ ಕ್ರಿಕೆಟ್ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಭರ್ಜರಿ ಬಹುಮಾನದ ಮೊತ್ತವನ್ನು ಘೋಷಿಸಿದೆ. ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ 11 ವರ್ಷಗಳ ಐಸಿಸಿ ಟ್ರೋಫಿ ಬರ ಕೊನೆಗೊಳಿಸಿತು.

ಬಾರ್ಬಡೋಸ್​​ನ ಕೆನ್ಸಿಂಗ್ಟನ್​ ಓವಲ್​ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಆಟದ ನೆರವಿನಿಂದ ಭಾರತ 7 ರನ್​​ಗಳ ಭರ್ಜರಿ ಜಯ ದಾಖಲಿಸಿತು. 2007ರ ನಂತರ ಟ್ರೋಫಿಗೆ ಮುತ್ತಿಕ್ಕಿದ ರೋಹಿತ್ ಪಡೆಗೆ ಬಿಸಿಸಿಐ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಪೋಸ್ಟ್ ಮಾಡಿದ್ದಾರೆ.

ಜಯ್​ ಶಾ ಹೇಳಿದ್ದೇನು?

ಐಸಿಸಿ ಪುರುಷರ ಟಿ20 ವಿಶ್ವಕಪ್ 2024 ಗೆದ್ದ ಟೀಮ್ ಇಂಡಿಯಾಕ್ಕೆ 125 ಕೋಟಿ ರೂಪಾಯಿಗಳ ಬಹುಮಾನದ ಮೊತ್ತವನ್ನು ಘೋಷಿಸಲು ನನಗೆ ಸಂತೋಷವಾಗಿದೆ. ತಂಡವು ಟೂರ್ನಿಯುದ್ದಕ್ಕೂ ಅಸಾಧಾರಣ ಪ್ರತಿಭೆ, ದೃಢನಿಶ್ಚಯ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅಸಾಧಾರಣ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು ಎಂದು ಜಯ್​ ಶಾ ಪೋಸ್ಟ್​​ನಲ್ಲಿ ಹೇಳಿದ್ದಾರೆ.

ಐಸಿಸಿ ಬಹುಮಾನ ಮೊತ್ತ

ಯುಎಸ್ಎ ಮತ್ತು ಮಾಜಿ ಚಾಂಪಿಯನ್ ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್​​ನಲ್ಲಿ 9ನೇ ಆವೃತ್ತಿಯ ಟೂರ್ನಿ ಗೆದ್ದಿದೆ. 2024ರ ಆವೃತ್ತಿಯಲ್ಲಿ 20 ತಂಡಗಳು ಒಂಬತ್ತು ಸ್ಥಳಗಳಲ್ಲಿ 28 ದಿನಗಳಲ್ಲಿ ಸೆಣಸಾಟ ನಡೆಸಿದ್ದವು. 2024ರ ಟಿ20 ವಿಶ್ವಕಪ್ ಟೂರ್ನಿಗೆ ಐಸಿಸಿ 11.25 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿತ್ತು. ಪ್ರಸಿದ್ಧ ಟ್ರೋಫಿಯನ್ನು ಎತ್ತಿಹಿಡಿದ ನಂತರ ಟೀಮ್ ಇಂಡಿಯಾ ಕನಿಷ್ಠ 2.45 ಮಿಲಿಯನ್ ಡಾಲರ್ ಹಣವನ್ನು ಮನೆಗೆ ತೆಗೆದುಕೊಳ್ಳುತ್ತಿದೆ. ರನ್ನರ್​​ಅಪ್ ಸ್ಥಾನ ಪಡೆದ ದಕ್ಷಿಣ ಆಫ್ರಿಕಾ 1.28 ಮಿಲಿಯನ್ ಡಾಲರ್ ಗಳಿಸಿದೆ.

ರೋಹಿತ್ ಶರ್ಮಾ ಅವರು ಅಸಾಧಾರಣ ನಾಯಕ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶ್ಲಾಘಿಸಿದ್ದಾರೆ. ರೋಹಿತ್ ನಾಯಕತ್ವದಲ್ಲಿ ಭಾರತ ಟಿ20 ವಿಶ್ವಕಪ್​​ನಲ್ಲಿ ಅಜೇಯವಾಗಿ ಉಳಿದಿತ್ತು. ಟಿ20 ವಿಶ್ವಕಪ್ ಗೆದ್ದ 2ನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ, ಭಾರತದ ಪರ ಎರಡು ಟಿ20 ವಿಶ್ವಕಪ್ ಗೆದ್ದ ಮೊದಲ ಆಟಗಾರ ಎಂಬ ದಾಖಲೆಗೂ ಪಾತ್ರರಾಗಿದ್ದಾರೆ. 2007ರ ಆವೃತ್ತಿಯಲ್ಲಿ ಎಂಎಸ್ ಧೋನಿ ಪ್ರಶಸ್ತಿ ಗೆದ್ದ ತಂಡದ ಭಾಗವಾಗಿದ್ದರು ರೋಹಿತ್​.

ರೋಹಿತ್ ಶರ್ಮಾ ಅವರ ಅಸಾಧಾರಣ ನಾಯಕತ್ವದಲ್ಲಿ ಈ ತಂಡವು ಗಮನಾರ್ಹ ಸಂಕಲ್ಪ ಮತ್ತು ಸ್ಥಿತಿಸ್ಥಾಪಕತ್ವವನ್ನು ತೋರಿಸಿದೆ. ಐಸಿಸಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಪಂದ್ಯಾವಳಿಯನ್ನು ಅಜೇಯವಾಗಿ ಗೆದ್ದ ಮೊದಲ ತಂಡವಾಗಿದೆ. ಅವರು ತಮ್ಮ ಟೀಕಾಕಾರರನ್ನು ಮತ್ತೆ ಮತ್ತೆ ಅದ್ಭುತ ಪ್ರದರ್ಶನಗಳೊಂದಿಗೆ ಎದುರಿಸಿ ಬಾಯ್ಮುಚ್ಚಿಸಿದ್ದಾರೆ. ಅವರ ಪ್ರಯಾಣವು ಸ್ಪೂರ್ತಿದಾಯಕವಾಗಿದೆ, ಮತ್ತು ಇಂದು, ಅವರು ಶ್ರೇಷ್ಠರ ಸಾಲಿಗೆ ಸೇರುತ್ತಾರೆ ಎಂದು ಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ಟಿ20 ವಿಶ್ವಕಪ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Whats_app_banner