ಕನ್ನಡ ಸುದ್ದಿ  /  ಕ್ರಿಕೆಟ್  /  ಆರ್​ಸಿಬಿ Vs ಸಿಎಸ್​ಕೆ ಪಂದ್ಯ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ಇಲ್ಲಿ ಪಾರ್ಕಿಂಗ್ ಮಾಡಂಗಿಲ್ಲ

ಆರ್​ಸಿಬಿ vs ಸಿಎಸ್​ಕೆ ಪಂದ್ಯ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ಇಲ್ಲಿ ಪಾರ್ಕಿಂಗ್ ಮಾಡಂಗಿಲ್ಲ

Bengaluru Traffic Advisory: ಮೇ 18ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಜಾಗಗಳಲ್ಲಿ ಪಾರ್ಕಿಂಗ್ ಮಾಡುವಂತಿಲ್ಲ.

ಆರ್​ಸಿಬಿ vs ಸಿಎಸ್​ಕೆ ಪಂದ್ಯ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ಇಲ್ಲಿ ಪಾರ್ಕಿಂಗ್ ಮಾಡಂಗಿಲ್ಲ
ಆರ್​ಸಿಬಿ vs ಸಿಎಸ್​ಕೆ ಪಂದ್ಯ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ಇಲ್ಲಿ ಪಾರ್ಕಿಂಗ್ ಮಾಡಂಗಿಲ್ಲ

ಮೇ 18ರಂದು ಜರುಗುವ 17ನೇ ಆವೃತ್ತಿಯ ಐಪಿಎಲ್​ನ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ (Royal Challengers Bengaluru vs Chennai Super Kings) ತಂಡಗಳ ಸೆಣಸಾಟಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನ ಸಜ್ಜಾಗಿದೆ. ಕಳೆದ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಸಿಎಸ್​ಕೆ ಭರ್ಜರಿ ಜಯ ಸಾಧಿಸಿತ್ತು. ತವರಿನ ಮೈದಾನದಲ್ಲಿ ಕೊನೆಯ ಪಂದ್ಯ ನಡೆಯುತ್ತಿದ್ದು, ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. ಪ್ಲೇಆಫ್​ ಪ್ರವೇಶಿಸಲು ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ.

ಟ್ರೆಂಡಿಂಗ್​ ಸುದ್ದಿ

ಸಿಎಸ್​ಕೆ ಮತ್ತು ಆರ್​ಸಿಬಿ ನಡುವಿನ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿಗೆ ಬರುವ ಅಭಿಮಾನಿಗಳಿಗೆ, ತಮ್ಮ ವಾಹನಗಳ ಪಾರ್ಕಿಂಗ್​ ವ್ಯವಸ್ಥೆ ಎಲ್ಲಿ ಮಾಡಬೇಕೆಂಬ ಗೊಂದಲ ಕಾಡುತ್ತಿದೆ. ರಸ್ತೆ ಬಳಕೆದಾರರ ಅನುಕೂಲಕ್ಕಾಗಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11ರ ತನಕ ಸಂಚಾರ ವ್ಯವಸ್ಥೆ ಬದಲಾವಣೆ ಮಾಡಲಾಗಿದೆ. ಕೆಲ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಕ್ರಿಕೆಟ್ ಪಂದ್ಯ ವೀಕ್ಷಿಸಲು ಬರುವ ಪ್ರೇಕ್ಷಕರು ಸಾರ್ವಜನಿಕ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಕೋರಿದ್ದಾರೆ.

ಸಾವಿರಾರು ವೀಕ್ಷಕರು ಚಿನ್ನಸ್ವಾಮಿ ಕ್ರೀಡಾಂಗಣದತ್ತ ಬರಲಿದ್ದು ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ.

  • ಕ್ಲೀನ್ಸ್ ರಸ್ತೆ, ಎಂಜಿ ರಸ್ತೆ, ಎಂಜಿ ರಸ್ತೆ ಯಿಂದ ಕಬ್ಬನ್‌ ರಸ್ತೆ ರಾಜಭವನ ರಸ್ತೆ
  • ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
  • ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
  • ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆ

ಇದನ್ನೂ ಓದಿ: ರೋಹಿತ್ ಶರ್ಮಾ ನಂತರ ಭಾರತ ತಂಡದ ನಾಯಕತ್ವ ವಹಿಸಲು ತಾಕತ್ತಿರುವ ನಾಲ್ವರು ಕ್ರಿಕೆಟಿಗರನ್ನು ಹೆಸರಿಸಿದ ಇರ್ಫಾನ್ ಪಠಾಣ್

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು

  • ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
  • ಯುಬಿ ಸಿಟಿ ಪಾರ್ಕಿಂಗ್ ಸ್ಥಳ
  • ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್
  • ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ)

ಮೇ 18ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್​ ಮುಖಾಮುಖಿಯಾಗಲಿವೆ. ಸಂಜೆ 7.30 ಗಂಟೆಗೆ ಪಂದ್ಯ ಆರಂಭವಾಗಲಿದೆ. ಆರ್​ಸಿಬಿ 13 ಪಂದ್ಯಗಳನ್ನು ಆಡಿದ್ದು, 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಸಿಎಸ್​ಕೆ 13 ಪಂದ್ಯಗಳನ್ನು ಆಡಿದ್ದು, 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಸಿಎಸ್​ಕೆ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಆದರೆ ಆರ್​ಸಿಬಿ ಕೇವಲ ಗೆದ್ದರೆ, 18.1 ಓವರ್​​ಗಳಲ್ಲಿ ಚೇಸ್ ಮಾಡಬೇಕು ಅಥವಾ 18 ರನ್​ಗಳ ಅಂತರದಿಂದ ಗೆದ್ದರಷ್ಟೆ ಪ್ಲೇಆಫ್ ಕನಸು ನನಸಾಗಲಿದೆ.

ತಂಡಪಂದ್ಯಗೆಲುವುಸೋಲುರದ್ದುಅಂಕNRR
1. ಕೋಲ್ಕತ್ತಾ ನೈಟ್ ರೈಡರ್ಸ್ (Q)1393119+1.428
2. ರಾಜಸ್ಥಾನ್ ರಾಯಲ್ಸ್ (Q)1385016+0.273
3. ಸನ್‌ರೈಸರ್ಸ್ ಹೈದರಾಬಾದ್ (Q)1375115+0.406
4. ಚೆನ್ನೈ ಸೂಪರ್ ಕಿಂಗ್ಸ್1376014+0.528
5. ಡೆಲ್ಲಿ ಕ್ಯಾಪಿಟಲ್ಸ್ (E)1477014-0.377
6. ಲಕ್ನೋ ಸೂಪರ್ ಜೈಂಟ್ಸ್ (E)1477014-0.667
7. ರಾಯಲ್ ಚಾಲೆಂಜರ್ಸ್ ಬೆಂಗಳೂರು1367012+0.387
8. ಗುಜರಾತ್ ಟೈಟಾನ್ಸ್ (E)1457212-1.063
9. ಪಂಜಾಬ್ ಕಿಂಗ್ಸ್ (E)1358010-0.347
10. ಮುಂಬೈ ಇಂಡಿಯನ್ಸ್ (E)1441008-0.318

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಇದನ್ನೂ ಓದಿ : ತಮಿಳುನಾಡು ಕ್ರಿಕೆಟಿಗರ ಆಯ್ಕೆ ವಿಚಾರದಲ್ಲಿ ಬಿಸಿಸಿಐ ಪಕ್ಷಪಾತ; ನಟರಾಜನ್ ಕೈಬಿಟ್ಟಿದ್ದಕ್ಕೆ ಮಾಜಿ ಆಟಗಾರ ಗಂಭೀರ ಆರೋಪ

ಟಿ20 ವರ್ಲ್ಡ್‌ಕಪ್ 2024

ಕ್ರಿಕೆಟ್‌ಗೆ ಸಂಬಂಧಿಸಿದ ಎಲ್ಲ ಸುದ್ದಿ, T20 ವಿಶ್ವಕಪ್, T20 ವಿಶ್ವಕಪ್ ವೇಳಾಪಟ್ಟಿ, T20 ವಿಶ್ವಕಪ್ ಅತ್ಯಧಿಕ ರನ್‌ಗಳು, T20 ವಿಶ್ವಕಪ್ ಪಾಯಿಂಟ್ಸ್ ಟೇಬಲ್, T20 ವಿಶ್ವಕಪ್ ಲೈವ್ ಸ್ಕೋರ್, T20 ವಿಶ್ವಕಪ್ ಅಂಕಿಅಂಶಗಳು.. ಕ್ರಿಕೆಟ್‌ಗೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ HT ಕನ್ನಡ ವೆಬ್‌ಸೈಟ್ ನೋಡಿ