ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್; ಪಿಚ್, ಹವಾಮಾನ ವರದಿ ಹಾಗೂ ಸಂಭಾವ್ಯ ಆಡುವ ಬಳಗ
ಕನ್ನಡ ಸುದ್ದಿ  /  ಕ್ರಿಕೆಟ್  /  ಚೆನ್ನೈ ಸೂಪರ್ ಕಿಂಗ್ಸ್ Vs ರಾಜಸ್ಥಾನ್ ರಾಯಲ್ಸ್; ಪಿಚ್, ಹವಾಮಾನ ವರದಿ ಹಾಗೂ ಸಂಭಾವ್ಯ ಆಡುವ ಬಳಗ

ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್; ಪಿಚ್, ಹವಾಮಾನ ವರದಿ ಹಾಗೂ ಸಂಭಾವ್ಯ ಆಡುವ ಬಳಗ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡೆವೆ ಐಪಿಎಲ್‌ ಪಂದ್ಯ ನಡೆಯುತ್ತಿದೆ. ಪಂದ್ಯಕ್ಕೂ ಮುನ್ನ ದೆಹಲಿ ಹವಾಮಾನ ಮುನ್ಸೂಚನೆ ಮತ್ತು ಪಿಚ್ ವರದಿಯನ್ನು ನೋಡೋಣ.

ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್; ಪಿಚ್, ಹವಾಮಾನ ವರದಿ ಹಾಗೂ ಸಂಭಾವ್ಯ ತಂಡ
ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್; ಪಿಚ್, ಹವಾಮಾನ ವರದಿ ಹಾಗೂ ಸಂಭಾವ್ಯ ತಂಡ (PTI)

ಐಪಿಎಲ್ 2025ರ ಆವೃತ್ತಿಯ 62ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಜಸ್ಥಾನ್ ರಾಯಲ್ಸ್ (CSK vs RR) ತಂಡವನ್ನು ಎದುರಿಸಲಿದೆ. ಇದು ಪ್ರಸಕ್ತ ಋತುವಿನಲ್ಲಿ ಮೊದಲನೇ ಬಾರಿಗೆ ತಟಸ್ಥ ಸ್ಥಳದಲ್ಲಿ ನಡೆಯುತ್ತಿರುವ ಪಂದ್ಯವಾಗಿದೆ. ಮೇ 20ರ ಮಂಗಳವಾರ ನಡೆಯುವ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈಗಾಗಲೇ ಎರಡೂ ತಂಡಗಳು ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದ್ದು, ಗೆಲುವಿನೊಂದಿಗೆ ಟೂರ್ನಿಯಲ್ಲಿ ಅಭಿಮಾನಿಗಳಿಗೆ ಸಿಹಿ ಉಣಿಸುವ ಲೆಕ್ಕಾಚಾರದಲ್ಲಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಕ್ಕೆ ಸಂಬಂಧಿಸಿದಂತೆ ದೆಹಲಿ ಹವಾಮಾನ ವರದಿ ಮತ್ತು ಪಿಚ್ ವರದಿಯನ್ನು ನೋಡೋಣ.

ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ವರದಿ

ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಈ ವರ್ಷ ಬೌಲರ್‌ಗಳಿಗೆ ತುಸು ನೆರವಾಗಿದೆ. ವಿಶೇಷವಾಗಿ ಸ್ಪಿನ್ನರ್‌ಗಳು ತಿರುವು ಮತ್ತು ಸ್ವಲ್ಪ ಕಡಿಮೆ ಬೌನ್ಸ್ ಅನ್ನು ಕಂಡುಕೊಂಡಿದ್ದಾರೆ. ಆದರೂ ಇಲ್ಲಿ ರನ್‌ ಮಳೆ ನಿರೀಕ್ಷಿಸಬಹುದು. ಭಾನುವಾರ ಇಲ್ಲಿ ನಡೆದ ಕೊನೆಯ ಐಪಿಎಲ್‌ ಪಂದ್ಯದಲ್ಲಿ‌ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಉತ್ತಮ ಮೊತ್ತ ಕಲೆ ಹಾಕಿದವವು. ಕೆಎಲ್ ರಾಹುಲ್ ಹಾಗೂ ಸಾಯಿ ಸುದರ್ಶನ್‌ ಶತಕ ಬಾರಿಸಿದರು. ಮೊದಲ ಇನ್ನಿಂಗ್ಸ್‌ಗಿಂತ ಚೇಸಿಂಗ್‌ ವೇಳೆ ಜಿಟಿ ಸುಲಭವಾಗಿ ಬ್ಯಾಟಿಂಗ್‌ ನಡೆಸಿತು. ಡೆಲ್ಲಿ ಬೌಲರ್‌ಗಳಿಗೂ ಒಂದೂ ವಿಕೆಟ್‌ ಪಡೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಚೇಸಿಂಗ್‌ ವೇಳೆ ಇಬ್ಬನಿಯು ಪ್ರಮುಖ ಪಾತ್ರವಹಿಸುವ ಸಾಧ್ಯತೆ ಇದೆ. ಟಾಸ್‌ ಗೆಲ್ಲುವ ತಂಡಗಳು ಚೇಸಿಂಗ್‌ಗೆ ಆದ್ಯತೆ ನೀಡುವ ಸಂಭವ ಹೆಚ್ಚು.

ದೆಹಲಿ ಹವಾಮಾನ ವರದಿ

ರಾಷ್ಟ್ರ ರಾಜಧಾನಿಯಲ್ಲಿ ಬಿಸಿಲಿನ ಪ್ರಮಾಣ ಅಧಿಕವಿದೆ. ಕಳೆದ ಕೆಲವು ದಿನಗಳಿಂದ ಇಲ್ಲಿ ಸಾಕಷ್ಟು ಬಿಸಿಲಿತ್ತು. ಧೂಳಿನ ಬಿರುಗಾಳಿ ಹಾಗೂ ಕೆಲವೊಮ್ಮೆ ಮಾತ್ರವೇ ಮಳೆ ಸುರಿದಿದ್ದು ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವ ಸಂಭವ ಕಡಿಮೆ. ಪಂದ್ಯದ ದಿನವಾದ ನಗರದಲ್ಲಿ ಮಂಗಳವಾರ ಮಳೆಯಾಗುವ ಮುನ್ಸೂಚನೆ ಇಲ್ಲ. ಆಕ್ಯುವೆದರ್ ಪ್ರಕಾರ‌, ವಾತಾವರಣ ಸ್ವಲ್ಪ ತಣ್ಣಗಾಗುವ ನಿರೀಕ್ಷೆ ಇದೆ. ಒಟ್ಟಾರೆ ವಾತಾವರಣದಲ್ಲಿ ಸ್ವಲ್ಪ ಮೋಡ ಕವಿದ ವಾತಾವರಣ ಇರುತ್ತವೆ.

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಆಡುವ ಬಳಗ

ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಶುಭಂ ದುಬೆ, ಫಜಲ್ಹಕ್ ಫರುಕಿ, ಕ್ವೀನ್ ಮಫಕಾ, ತುಷಾರ್ ದೇಶಪಾಂಡೆ, ಆಕಾಶ್ ಮಧ್ವಾಲ್.

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಆಡುವ ಬಳಗ

ಡೆವೊನ್ ಕಾನ್ವೇ, ಆಯುಷ್ ಮ್ಹಾತ್ರೆ, ಉರ್ವಿಲ್ ಪಟೇಲ್, ಶಿವಂ ದುಬೆ, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್‌ ಕೀಪರ್), ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ಮತಿಶಾ ಪತಿರಾನಾ, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.

ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.