ನಿರ್ಣಾಯಕ ಪಂದ್ಯದಲ್ಲಿ ಟಾಸ್ ಜಯಿಸಿದ ಸಿಎಸ್ಕೆ ಬೌಲಿಂಗ್ ಆಯ್ಕೆ; ಆರ್ಸಿಬಿ 18 ರನ್ಗಳಿಂದ ಗೆದ್ದರಷ್ಟೆ ಪ್ಲೇಆಫ್ ಟಿಕೆಟ್
RCB vs CSK Toss update : 2024ರ ಐಪಿಎಲ್ನ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪ್ಲೇಆಫ್ ಪ್ರವೇಶಿಸುವ ಸಲುವಾಗಿ ಉಭಯ ತಂಡಗಳಿಗೂ ಈ ಪಂದ್ಯ ಗೆಲ್ಲುವುದು ಅನಿವಾರ್ಯ.
17ನೇ ಆವೃತ್ತಿಯ ಐಪಿಎಲ್ನ ಪ್ಲೇಆಫ್ ಡಿಸೈಡರ್ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಋತುರಾಜ್ ಗಾಯಕ್ವಾಡ್ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಈ ಹೈವೋಲ್ಟೇಜ್ ಕದನಕ್ಕೆ ಆತಿಥ್ಯ ವಹಿಸುತ್ತಿದೆ.
ಈ ಪಂದ್ಯದಲ್ಲಿ ಸಿಎಸ್ಕೆ ಗೆದ್ದರೆ ಸಾಕು ಪ್ಲೇಆಫ್ ಪ್ರವೇಶಿಸಲಿದೆ. ಅಲ್ಲದೆ, ಆರ್ಸಿಬಿ 18ಕ್ಕಿಂತ ಕಡಿಮೆ ರನ್ಗಳ ಅಂತರದಲ್ಲಿ ಗೆದ್ದರೂ ಚೆನ್ನೈ ಪ್ಲೇಆಫ್ ಪ್ರವೇಶಿಸಲಿದೆ. ಆರ್ಸಿಬಿ ಮೊದಲು ಬ್ಯಾಟಿಂಗ್ ನಡೆಸುವ ಕಾರಣ 18 ರನ್ಗಳ ಅಂತರದಿಂದ ಗೆಲ್ಲಲೇಬೇಕು. ಅದಕ್ಕಿಂತ ಕಡಿಮೆ ರನ್ಗಳಿಂದ ಗೆದ್ದರೂ ಪ್ಲೇಆಫ್ ಪ್ರವೇಶಿಸುವುದಿಲ್ಲ.
ನಿರ್ಣಾಯಕ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಹವಾಮಾನ ಇಲಾಖೆ ಪ್ರಕಾರ ಶೇ 80 ರಿಂದ 90 ರಷ್ಟು ಮಳೆ ಅಡಚಣೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಒಂದು ಮಳೆಯಿಂದ ಪಂದ್ಯ ರದ್ದಾದರೆ ಯಾವುದೇ ಮೀಸಲು ದಿನ ಇರುವುದಿಲ್ಲ. ಆರ್ಸಿಬಿ ಅಧಿಕೃತವಾಗಿ ಐಪಿಎಲ್ನಿಂದ ಹೊರಬೀಳಲಿದೆ. ಸಿಎಸ್ಕೆ ನಾಲ್ಕನೇ ತಂಡವಾಗಿ ಅಗ್ರ-4ರಲ್ಲಿ ಸ್ಥಾನ ಪಡೆದುಕೊಳ್ಳಲಿದೆ. ಅಭಿಮಾನಿಗಳು ಈ ಪಂದ್ಯಕ್ಕೆ ಮಳೆ ಬಾರದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
ಸಿಎಸ್ಕೆ ಮತ್ತು ಆರ್ಸಿಬಿ ಮುಖಾಮುಖಿ ದಾಖಲೆ
ಪಂದ್ಯಗಳು - 32
ಸಿಎಸ್ಕೆ ಗೆಲುವು - 21
ಆರ್ಸಿಬಿ ಗೆಲುವು - 10
ಫಲಿತಾಂಶ ಇಲ್ಲ - 01
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI)
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮರೂನ್ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರಣ್ ಶರ್ಮಾ, ಯಶ್ ದಯಾಲ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್.
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI)
ರಚಿನ್ ರವೀಂದ್ರ, ಋತುರಾಜ್ ಗಾಯಕ್ವಾಡ್ (ನಾಯಕ), ಡ್ಯಾರಿಲ್ ಮಿಚೆಲ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್, ಮಹೇಶ್ ತೀಕ್ಷಣ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್
ಸ್ವಪ್ನಿಲ್ ಸಿಂಗ್, ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ವಿಜಯ್‌ಕುಮಾರ್ ವೈಶಾಕ್, ಹಿಮಾಂಶು ಶರ್ಮಾ
ಚೆನ್ನೈ ಸೂಪರ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್
ಶಿವಂ ದುಬೆ, ಸಮೀರ್ ರಿಜ್ವಿ, ಪ್ರಶಾಂತ್ ಸೋಲಂಕಿ, ಶೇಕ್ ರಶೀದ್, ಮುಖೇಶ್ ಚೌಧರಿ
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)