2028ರ ಒಲಿಂಪಿಕ್ಸ್‌ಗೆ ಕ್ರಿಕೆಟ್ ಅಧಿಕೃತ ಸೇರ್ಪಡೆ; ಒಲಿಂಪಿಕ್ ಸಮಿತಿಯಿಂದ ಅಸ್ತು
Cricket in Los Angeles Olympics : 2028ರಲ್ಲಿ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ (2028 Los Angeles Games) ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಂಟಲ್‌ಮೆನ್ ಗೇಮ್ ಕ್ರಿಕೆಟ್ ಅಧಿಕೃತವಾಗಿ ಸೇರ್ಪಡೆಯಾಗಿದೆ.
ಕೊನೆಗೂ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಸವಿಯುವ ಭಾಗ್ಯ ಅಭಿಮಾನಿಗಳಿಗೆ ಸಿಕ್ಕಿದೆ. 2028ರಲ್ಲಿ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ (2028 Los Angeles Games) ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಂಟಲ್‌ಮೆನ್ ಗೇಮ್ ಕ್ರಿಕೆಟ್ ಅಧಿಕೃತವಾಗಿ ಸೇರ್ಪಡೆಯಾಗಿದೆ.
ಈ ಕುರಿತ ಪ್ರಸ್ತಾವನೆಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ (International Olympic Committee) ಅಧಿಕಾರಿಗಳು ಅನುಮೋದನೆ ನೀಡಿದ್ದಾರೆ. ಹೀಗಾಗಿ ಶುಕ್ರವಾರ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಯನ್ನು ಇದನ್ನು ಅಧಿಕೃತವಾಗಿ ಘೋಷಿಸಲಾಗಿದೆ.
ಮುಂಬೈನಲ್ಲಿ ನಡೆದ ಅಂತಾರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಕಾರ್ಯಕಾರಿ ಮಂಡಳಿ ಸಭೆಯ ಎರಡನೇ ದಿನವಾದ ಶುಕ್ರವಾರ, ಈ ಕುರಿತು ಘೋಷಣೆ ಮಾಡಲಾಗಿದೆ. ಐಒಸಿ (IOC) ಅಧ್ಯಕ್ಷ ಥಾಮಸ್ ಬಾಚ್ ಅವರು ಸಭೆಯ ನಂತದ ಅಧಿಕೃತವಾಗಿ ಘೋಷಿಸಿದ್ದಾರೆ. ಟಿ20 ಸ್ವರೂಪದಲ್ಲಿ ಕ್ರಿಕೆಟ್ ಪಂದ್ಯವನ್ನು ಒಲಿಂಪಿಕ್ಸ್‌ಗೆ ಸೇರ್ಪಡೆಗೊಳಿಸುವಂತೆ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಸಮಿತಿಯ ಸಂಘಟಕರ ಪ್ರಸ್ತಾಪವನ್ನು ಐಒಸಿ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂದು ಥಾಮಸ್ ಬಾಚ್ ಹೇಳಿದ್ದಾರೆ.
ಕ್ರಿಕೆಟ್ ಜೊತೆಗೆ ಬೇಸ್‌ಬಾಲ್/ಸಾಫ್ಟ್‌ಬಾಲ್, ಫ್ಲ್ಯಾಗ್ ಫುಟ್‌ಬಾಲ್, ಕ್ವ್ಯಾಷ್ ಮತ್ತು ಲ್ಯಾಕ್ರೋಸ್ ಜೊತೆಗೆ ಐದು ಹೊಸ ಕ್ರೀಡೆಗಳನ್ನು ಒಲಿಂಪಿಕ್ಸ್‌ಗೆ ಸೇರಿಸಲಾಗಿದೆ. ಕ್ರಿಕೆಟ್ ಪಂದ್ಯಗಳನ್ನು ಟಿ20 ಮಾದರಿಯಲ್ಲಿ ನಡೆಸಲಾಗುತ್ತದೆ.
1900ರ ಒಲಿಂಪಿಕ್ಸ್‌ನಲ್ಲಿ ನಡೆದಿತ್ತು ಕ್ರಿಕೆಟ್
ಕೊನೆಯ ಬಾರಿಗೆ 1900ರಲ್ಲಿ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಪಂದ್ಯ ನಡೆದಿತ್ತು. ಎರಡು ತಂಡಗಳು ಮಾತ್ರ ಆ ಸಮಯದಲ್ಲಿ ಒಲಿಂಪಿಕ್ಸ್‌ನಲ್ಲಿ ಆಡಿದ್ದವು. ಅದಾದ ಬಳಿಕ ಜಾಗತಿಕ ಕ್ರೀಡಾಕೂಟದಲ್ಲಿ ಇದುವರೆಗೆ ಕ್ರಿಕೆಟ್ ಪಂದ್ಯಗಳು ನಡೆದಿಲ್ಲ. ಇದೀಗ 128 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯಲಿದೆ.