ಕನ್ನಡ ಸುದ್ದಿ  /  Cricket  /  Cricket News Ind Vs Eng 5th Test Team India Innings And 64 Runs Win Against England Rmy

Ind vs Eng 5th Test: ಇನ್ನಿಂಗ್ಸ್, 64 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನ ಬಗ್ಗು ಬಡಿದ ಟೀಂ ಇಂಡಿಯಾ; 4-1 ಅಂತರದ ಸರಣಿ ಗೆಲುವು

ಧರ್ಮಶಾಲದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಹಾಗೂ 64 ರನ್‌ಗಳ ಗೆಲುವು ಸಾಧಿಸಿದೆ.

100ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಆರ್ ಅಶ್ವಿನ್ 9 ವಿಕೆಟ್‌ಗಳ ಸಾಧನೆ ಮಾಡಿದರು. ಇಂಗ್ಲೆಂಡ್‌ನ ಎರಡನೇ ಇನ್ನಿಂಗ್ಸ್‌ ವೇಳೆ ಝಾಕ್ ಕ್ರಾಲೆ ಅವರ ವಿಕೆಟ್ ಪಡೆದಾಗ ಸಹ ಆಟಗಾರರೊಂದಿಗೆ ಸಂಭರ್ಮಿಸಿದರು. (PTI)
100ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಆರ್ ಅಶ್ವಿನ್ 9 ವಿಕೆಟ್‌ಗಳ ಸಾಧನೆ ಮಾಡಿದರು. ಇಂಗ್ಲೆಂಡ್‌ನ ಎರಡನೇ ಇನ್ನಿಂಗ್ಸ್‌ ವೇಳೆ ಝಾಕ್ ಕ್ರಾಲೆ ಅವರ ವಿಕೆಟ್ ಪಡೆದಾಗ ಸಹ ಆಟಗಾರರೊಂದಿಗೆ ಸಂಭರ್ಮಿಸಿದರು. (PTI)

ಧರ್ಮಶಾಲ (ಹಿಮಾಚಲ ಪ್ರದೇಶ): ಮಂಜಿನಿಂದ ಆವರಿಸಿದ್ದ ಹಚ್ಚಹಸಿರಿನ ಬೆಟ್ಟಗುಡ್ಡಗಳ ನಡುವಿನ ಧರ್ಮಶಾಲ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಹಾಗೂ 64 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಕುಲ್ದೀಪ್ ಯಾದವ್ 5 ವಿಕೆಟ್ ಪಡೆದರೆ 100ನೇ ಟೆಸ್ಟ್ ಪಂದ್ಯವನ್ನು ಆಡಿದ ಹಿರಿಯ ಬಲಗೈ ಸ್ಪಿನ್ನರ್ ಆರ್ ಅಶ್ವಿನ್ ಮೊದಲ ಇನ್ನಿಂಗ್ಸ್‌ನಲ್ಲಿ 4 ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗಳೊಂದಿಗೆ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಜೊತೆಗೆ ಟೀಂ ಇಂಡಿಯಾದ ಬ್ಯಾಟರ್‌ಗಳ ಅಬ್ಬರವೂ ಕಾರಣವಾಯಿತು.

IPL_Entry_Point