ಕನ್ನಡ ಸುದ್ದಿ  /  ಕ್ರಿಕೆಟ್  /  Rcb Vs Csk Match: ಬೆಂಗಳೂರಿನಲ್ಲಿ ಮಳೆ ಆರಂಭ; ಆರ್‌ಸಿಬಿ-ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯದ ಟಾಸ್ ತಡವಾಗುವ ಸಾಧ್ಯತೆ

RCB vs CSK Match: ಬೆಂಗಳೂರಿನಲ್ಲಿ ಮಳೆ ಆರಂಭ; ಆರ್‌ಸಿಬಿ-ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯದ ಟಾಸ್ ತಡವಾಗುವ ಸಾಧ್ಯತೆ

ನಿರೀಕ್ಷೆಯಂತೆ ಬೆಂಗಳೂರಿನಲ್ಲಿ ಮಳೆ ಆರಂಭವಾಗಿದ್ದು, ಆರ್‌ಸಿಬಿ-ಸಿಎಸ್‌ಕೆ ನಡುವಿನ ಮಹತ್ವದ ಪಂದ್ಯದ ಟಾಸ್ ತಡವಾಗುವ ಸಾಧ್ಯತೆ ಇದೆ. ಪ್ಲೇ-ಆಫ್‌ ಪ್ರವೇಶಿಸಲು ಈ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

ಬೆಂಗಳೂರಿನಲ್ಲಿ ಮಳೆ ಆರಂಭವಾಗಿದ್ದು, ಆರ್‌ಸಿಬಿ-ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಪಂದ್ಯದ ಟಾಸ್ ತಡವಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮಳೆ ಆರಂಭವಾಗಿದ್ದು, ಆರ್‌ಸಿಬಿ-ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಪಂದ್ಯದ ಟಾಸ್ ತಡವಾಗುವ ಸಾಧ್ಯತೆ ಇದೆ.

ಬೆಂಗಳೂರು: 2024ರ ಐಪಿಎಲ್‌ನ ಪ್ಲೇ-ಆಫ್ (IPL 2024 Play Offs) ಹಂತಕ್ಕೆ ಪ್ರವೇಶಿಸಲು ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಗೆಲ್ಲಲೇಬೇಕಾದ ಲೀಗ್ ಹಂತದ ತನ್ನ ಕೊನೆಯ ಪಂದ್ಯಕ್ಕೆ ನಿರೀಕ್ಷೆಯಂತೆ ಮಳೆ ಅಡ್ಡಿಯಾಗುವ (Bengaluru Rain) ಸಾಕಷ್ಟು ಸಾಧ್ಯತೆ ಇದೆ. ಇಂದು (ಮೇ 18, ಶನಿವಾರ) ಮಧ್ಯಾಹ್ನದಿಂದಲೇ ಬೆಂಗಳೂರು ನಗರದ ಅಲ್ಲಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಸಂಜೆಯ ನಂತರ ಮಳೆ ಜೋರಾಗುವ ನಿರೀಕ್ಷೆ ಇದೆ. ಇದರಿಂದ ಪಂದ್ಯದ ಟಾಸ್ (RCB vs CSK Toss) ತಡವಾಗುವ ಸಾಧ್ಯತೆ ಇದೆ. ಹೈವೋಲ್ಟೇಜ್ ಪಂದ್ಯ ನಡುವೆಯಲಿರುವ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಹಾಗೂ ಸುತ್ತಮುತ್ತ ಮೋಡ ಕವಿದ ವಾತಾವರಣ ಇದೆ.

ಟ್ರೆಂಡಿಂಗ್​ ಸುದ್ದಿ

ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರ ಮಧ್ಯಾಹ್ನ, ಸಂಜೆ ಅಥವಾ ರಾತ್ರಿ ನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಹವಾಮಾನ ವರದಿಯ ಪ್ರಕಾರ ನೋಡುವುದಾದರೆ ಆರ್‌ಸಿಬಿ-ಸಿಎಸ್‌ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಬಹಳಷ್ಟು ಸಾಧ್ಯತೆ ಇದೆ. ಚಿನ್ನಸ್ವಾಮಿ ಸ್ಟೇಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದೆ. ಹೀಗಾಗಿ ಮಳೆಯ ಭೀತಿ ಇದ್ದೇ ಇದೆ.

ಬೆಂಗಳೂರಿನ ಎಲ್ಲೆಲ್ಲಿ ಮಳೆಯಾಗುತ್ತಿದೆ, ಚಿನ್ನಸ್ವಾಮಿ ಸ್ಟೇಡಿಯಂ ಪರಿಸ್ಥಿತಿ ಹೇಗಿದೆ?

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಸಿಂಗಸಂದ್ರದಲ್ಲಿ ಮಳೆಯಾಗಿರುವ ವರದಿಯಾಗಿದೆ. ಅದೇ ರೀತಿಯ ಹೆಬ್ಬಾಳದಲ್ಲೂ ಜಿಟಿ ಜಿಟಿ ಮಳೆಯಾಗುತ್ತಿದೆ. ಉಳಿದ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದೆ. ಆದರೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಸದ್ಯದ ಮಟ್ಟಿಗೆ ಮಳೆಯಾಗಿಲ್ಲ.

ರಣ ಬಿಸಿಲಿನಿಂದ ಬೆಂದು ಬೆಂಡಾಗಿದ್ದ ಉದ್ಯಾನ ನಗರಿ ಬೆಂಗಳೂರು ಮಂದಿ ಮಳೆರಾಯ ಯಾವಾಗ ಕೃಪೆ ತೋರುತ್ತಾನೆ ಅಂತ ಕಾದು ಕುಳಿತಿದ್ದರು. ಕಳೆದೊಂದು ವಾರದಿಂದ ನಗರದಲ್ಲಿ ಮಳೆಯಾಗುತ್ತಿದ್ದು, ವಾತಾವರಣ ತುಂಬಾ ಕೂಲ್ ಆಗಿದೆ. ಮಳೆ ಬೇಕು ಅಂತ ಬೇಡಿದ್ದ ಜನರು, ಕೋಟಿ ಕೋಟಿ ಆರ್‌ಸಿಬಿ ಅಭಿಮಾನಿಗಳು ಇವತ್ತು (ಮೇ 18, ಶನಿವಾರ) ಒಂದು ದಿನ ಮಳೆ ಬೇಡ ಅಂತ ವರುಣ ದೇವನಿಗೆ ಪರಿಪರಿಯಾಗಿ ಬೇಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024

ಕ್ರಿಕೆಟ್‌ಗೆ ಸಂಬಂಧಿಸಿದ ಎಲ್ಲ ಸುದ್ದಿ, T20 ವಿಶ್ವಕಪ್, T20 ವಿಶ್ವಕಪ್ ವೇಳಾಪಟ್ಟಿ, T20 ವಿಶ್ವಕಪ್ ಅತ್ಯಧಿಕ ರನ್‌ಗಳು, T20 ವಿಶ್ವಕಪ್ ಪಾಯಿಂಟ್ಸ್ ಟೇಬಲ್, T20 ವಿಶ್ವಕಪ್ ಲೈವ್ ಸ್ಕೋರ್, T20 ವಿಶ್ವಕಪ್ ಅಂಕಿಅಂಶಗಳು.. ಕ್ರಿಕೆಟ್‌ಗೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ HT ಕನ್ನಡ ವೆಬ್‌ಸೈಟ್ ನೋಡಿ