ಆರ್‌ಸಿಬಿ-ಸಿಎಸ್‌ಕೆ ಪಂದ್ಯ ನೋಡೋಕೆ ಬೈಕ್‌ನಲ್ಲಿ ಹೋಗ್ತಿದ್ದಾರಾ; ತಲೆಗೆ ಹೆಲ್ಮೆಟ್ ಮರೆಯಬೇಡಿ, ಬೆಂಗಳೂರು ಟ್ರಾಫಿಕ್ ಪೊಲೀಸರ ಸಂದೇಶ
ಬೆಂಗಳೂರಿನಲ್ಲಿನ ಆರ್‌ಸಿಬಿ-ಸಿಎಸ್‌ಕೆ ಪಂದ್ಯ ವೀಕ್ಷಿಸಲು ಬೈಕ್‌ನಲ್ಲಿ ಹೋಗುವ ಪ್ರತಿಯೊಬ್ಬರು ಹೆಲ್ಮೆಟ್ ಧರಿಸಬೇಕೆಂದು ಟ್ರಾಫಿಕ್ ಪೊಲೀಸರು ವಿಭಿನ್ನವಾಗಿ ಸಂದೇಶ ರವಾನಿಸಿದ್ದಾರೆ.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ನಡುವಿನ ಹೈವೋಲ್ಟೇಜ್ ಪಂದ್ಯ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ನಡೆಯುತ್ತಿದೆ. ನೀವೇನಾದರೂ ಬೈಕ್‌ನಲ್ಲಿ ಪಂದ್ಯ ನೋಡೋಕೆ ಹೋಗುತ್ತಿದ್ದರೆ ತಪ್ಪದೇ ಹೆಲ್ಮೆಟ್ (Helmet) ಧರಿಸಬೇಕೆಂದು ಟ್ರಾಫಿಕ್ ಪೊಲೀಸರು (Bengaluru Traffic Police) ವಿಭಿನ್ನ ರೀತಿಯಲ್ಲಿ ಅರಿವು ಮೂಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಟೊವೊಂದು ಅಪ್ಲೋಡ್ ಮಾಡಿರುವ ಪೊಲೀಸರು, ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಹೆಲ್ಮೆಟ್ ಧರಿಸದಿದ್ದರೆ ಏನೆಲ್ಲಾ ಅನಾಹುತಗಳು ಆಗಬಹುದು ಎಂಬುದನ್ನು ಉದಾಹರಣೆ ಸಹಿತ ವಿವರಿಸಿದ್ದಾರೆ.
ನರಕವನ್ನು ಹತ್ತಿರದಿಂದ ಮೀಟ್ ಆಗಿದ್ದ ಇದರೊಳಗಿನ ತಲೆಗೆ ನಮ್ಮದೊಂದು ಖಡಕ್ ಸೆಲ್ಯೂಟ್! ಈ ಬುದ್ದಿವಂತ ತಲೆ ನೂರ್ಕಾಲ ಚೆನ್ನಾಗಿರಲಿ. ನಿಮ್ಮ ತಲೆಯನ್ನು ಸಂಪೂರ್ಣವಾಗಿ ರಕ್ಷಿಸುವ ಗುಣಮಟ್ಟದ ಹೆಲ್ಮೆಟ್ ಮಾತ್ರ ಧರಿಸಿ ಎಂದು ಹೇಳಿದ್ದಾರೆ. ಗುಣಮಟ್ಟದ ಹೆಲ್ಮೆಟ್ ಹಾಕಿದ್ದ ಪರಿಣಾಮ ವ್ಯಕ್ತಿಯೊಬ್ಬ ಪ್ರಾಣಾಪಾಯದಿಂದ ಪಾರಾಗಿರುವ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿದೆ..
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
