ಐಪಿಎಲ್‌ನಲ್ಲಿ 17ನೇ ಬಾರಿ ಡಕೌಟ್ ಆದ ರೋಹಿತ್ ಶರ್ಮಾ; ಕಳಪೆ ದಾಖಲೆ ಪಟ್ಟಿಯಲ್ಲಿ ಆರ್‌ಸಿಬಿ ಆಟಗಾರನೊಂದಿಗೆ ಅಗ್ರಸ್ಥಾನ
- ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾದರು. ಎದುರಿಸಿದ ಮೊದಲ ಎಸೆತದಲ್ಲೇ ಬೋಲ್ಟ್‌ಗೆ ವಿಕೆಟ್ ಒಪ್ಪಿಸಿ ಬರಿಗೈಯಲ್ಲಿ ಡ್ರೆಸ್ಸಿಂಗ್ ರೂಮ್‌ಗೆ ಮರಳಿದರು. ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಡಕೌಟ್ ಆದ ಕಳಪೆ ದಾಖಲೆಯನ್ನು ಜಂಟಿಯಾಗಿ ತಮ್ಮ ಹೆಸರಿಗೆ ಬರೆದುಕೊಂಡರು.

(1 / 5)
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಗೋಲ್ಡನ್ ಡಕ್ ಆಗಿದ್ದಾರೆ. ಟ್ರೆಂಟ್ ಬೌಲ್ಟ್ ಎಸೆದ ಮೊದಲ ಓವರ್‌ನ ಐದನೇ ಎಸೆತದಲ್ಲಿ ರೋಹಿತ್ ಶೂನ್ಯಕ್ಕೆ ಔಟಾಗಿದ್ದಾರೆ. ಪಂದ್ಯದಲ್ಲಿ ಎದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್‌ಗೆ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದ್ದಾರೆ.
(2 / 5)
ಗೋಲ್ಡನ್ ಡಕ್ ಆಗುವುದರೊಂದಿಗೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಕೆಟ್ ಕೀಪರ್ ಹಾಗೂ ಬ್ಯಾಟರ್ ದಿನೇಶ್ ಕಾರ್ತಿಕ್ ಇರುವ ಅನಗತ್ಯ ದಾಖಲೆಯ ಪಟ್ಟಿಗೆ ಹಿಟ್‌ಮ್ಯಾನ್ ಸೇರಿಕೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಡಕೌಟ್ ಆದ ಆಟಗಾರರ ಪಟ್ಟಿಯಲ್ಲಿ ಹಿಟ್‌ಮ್ಯಾನ್ ಜಂಟಿಯಾಗಿ ಅಗ್ರಸ್ಥಾನಕ್ಕೇರಿದ್ದಾರೆ.
(3 / 5)
ರೋಹಿತ್ ಮತ್ತು ಕಾರ್ತಿಕ್ ಇಬ್ಬರೂ ಐಪಿಎಲ್‌ನಲ್ಲಿ ಇದುವರೆಗೆ 17 ಬಾರಿ ಡಕೌಟ್ ಆಗಿದ್ದಾರೆ. ರೋಹಿತ್ ಮತ್ತು ಕಾರ್ತಿಕ್ ನಂತರ, ಗ್ಲೆನ್ ಮ್ಯಾಕ್ಸ್‌ವೆಲ್, ಪಿಯೂಷ್ ಚಾವ್ಲಾ, ಮನ್‌ದೀಪ್ ಸಿಂಗ್ ಮತ್ತು ಸುನಿಲ್ ನರೈನ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇವರೆಲ್ಲರೂ 15 ಬಾರಿ ಶೂನ್ಯಕ್ಕೆ ನಿರ್ಗಮಿಸಿದ್ದಾರೆ,
(4 / 5)
ಪಂದ್ಯದಲ್ಲಿ ರೋಹಿತ್ ಮಾತ್ರವಲ್ಲ. ನಮನ್ ಧಿರ್ ಹಾಗೂ ಡೆವಾಲ್ಡ್ ಬ್ರೆವಿಸ್ ಕೂಡಾ ಗೋಲ್ಡನ್ ಡಕ್ ಆಗಿದ್ದಾರೆ. ಸತತ ಮೂವರನ್ನು ಶೂನ್ಯಕ್ಕೆ ಪೆವಿಲಿಯನ್ ಕಳುಹಿಸಿದ ಬೋಲ್ಟ್ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದಾರೆ.
ಇತರ ಗ್ಯಾಲರಿಗಳು