ಕನ್ನಡ ಸುದ್ದಿ  /  ಕ್ರಿಕೆಟ್  /  ಕೊಹ್ಲಿ, ಹಾರ್ದಿಕ್ ಇನ್-ಸ್ಯಾಮ್ಸನ್, ರಾಹುಲ್ ಔಟ್; ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಕಟ್ಟಿದ ಇರ್ಫಾನ್ ಪಠಾಣ್

ಕೊಹ್ಲಿ, ಹಾರ್ದಿಕ್ ಇನ್-ಸ್ಯಾಮ್ಸನ್, ರಾಹುಲ್ ಔಟ್; ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಕಟ್ಟಿದ ಇರ್ಫಾನ್ ಪಠಾಣ್

Irfan Pathan: ಟಿ20 ವಿಶ್ವಕಪ್ ಟೂರ್ನಿಗೆ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಬಲಿಷ್ಠ ಭಾರತ ತಂಡ ಕಟ್ಟಿದ್ದಾರೆ. ಈ ತಂಡದಲ್ಲಿ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಿದ್ದರೆ, ಸಂಜು ಸ್ಯಾಮ್ಸನ್ ಮತ್ತು ಕೆಎಲ್ ರಾಹುಲ್ ಅವರನ್ನು ಕಡೆಗಣಿಸಿದ್ದಾರೆ.

ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಕಟ್ಟಿದ ಇರ್ಫಾನ್ ಪಠಾಣ್
ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಕಟ್ಟಿದ ಇರ್ಫಾನ್ ಪಠಾಣ್

ಐಸಿಸಿ ಪುರುಷರ ಟಿ20 ಕ್ರಿಕೆಟ್​ ವಿಶ್ವಕಪ್​ ಟೂರ್ನಿಗೆ (T20 World Cup 2024) ಇದೇ ವಾರ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. 15 ಸದಸ್ಯರ ತಂಡದ ಆಯ್ಕೆಗೆ ಅಜಿತ್​ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಗೆ ಹಲವು ಸವಾಲುಗಳು ಎದುರಾಗಿವೆ. ಐಪಿಎಲ್ ಬಳಿಕ ಜರುಗುವ ಮೆಗಾ ಟೂರ್ನಿಗೆ ಐಪಿಎಲ್ ಪ್ರದರ್ಶನವೇ ಮಾನದಂಡ ಎಂದು ಹೇಳಲಾಗಿತ್ತು. ಆದರೆ, ಲೀಗ್​​ನಲ್ಲಿ ರಿಯಾನ್ ಪರಾಗ್, ಶಿವಂ ದುಬೆ ಮತ್ತು ಋತುರಾಜ್ ಗಾಯಕ್ವಾಡ್ ಅವರಂತಹ ಆಟಗಾರರು ಅದ್ಭುತ ಪ್ರದರ್ಶನದ ನಂತರ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಇದರ ನಡುವೆ ಹಾರ್ದಿಕ್ ಪಾಂಡ್ಯ, ಶ್ರೇಯಸ್ ಅಯ್ಯರ್ ಮತ್ತು ಮೊಹಮ್ಮದ್ ಸಿರಾಜ್ ಅವರಂತಹ ಪ್ರಮುಖ ಆಟಗಾರರು ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಇದು ಆಯ್ಕೆದಾರರ ಗೊಂದಲ ಹೆಚ್ಚಿಸಿತ್ತು. ಆದರೀಗ ಅದಕ್ಕೂ ಮುನ್ನ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು (Irfan Pathan) ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಟಿ20 ವಿಶ್ವಕಪ್‌ಗೆ ಬಲಿಷ್ಠ ಭಾರತ ತಂಡವನ್ನು ಆಯ್ಕೆ ಮಾಡಿದ್ದಾರೆ. ಇರ್ಫಾನ್ ತಂಡದಲ್ಲಿ ಅನುಭವಿ ವಿರಾಟ್ ಕೊಹ್ಲಿ ಕೂಡ ಇದ್ದಾರೆಂಬುದು ವಿಶೇಷ. ಆದರೆ, ಕೊಹ್ಲಿ ಸ್ಥಾನವನ್ನು ಹಲವಾರು ವಿಮರ್ಶಕರು ಪ್ರಶ್ನಿಸಿದ್ದಾರೆ. ಟಿ20 ವಿಶ್ವಕಪ್​ಗೆ ಆಯ್ಕೆದಾರರು ಕೊಹ್ಲಿಯನ್ನು ಆಯ್ಕೆ ಮಾಡಲ್ಲ ಎಂಬ ವದಂತಿಗಳಿವೆ.

ಅದಾಗಿಯೂ ಆರ್​ಸಿಬಿ ಸ್ಟಾರ್ ಬ್ಯಾಟರ್​ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಇರ್ಫಾನ್ ಕಟ್ಟಿದ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್ಮನ್ ಗಿಲ್ ಕೂಡ ಇದ್ದಾರೆ. ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದು, ಶುಭ್ಮನ್ ಬ್ಯಾಕಪ್​ ಆಗಿದ್ದಾರೆ. ಆಲ್​ರೌಂಡರ್​ ಕೋಟಾದಲ್ಲಿ ಶಿವಂ ದುಬೆಗೆ ಅವಕಾಶ ನೀಡಲಾಗಿದೆ. ಸಿಎಸ್​ಕೆ ಪರ ದುಬೆ ಮಿಂಚಿನ ಬ್ಯಾಟಿಂಗ್ ನಡೆಸುತ್ತಿದ್ದಾರೆ. 8 ಪಂದ್ಯಗಳಲ್ಲಿ 311 ರನ್ ಗಳಿಸಿ, ಆರೆಂಜ್ ಕ್ಯಾಪ್ ರೇಸ್​​ನಲ್ಲಿದ್ದಾರೆ.

ಪ್ರಸ್ತುತ 6 ವಿಕೆಟ್ ಕೀಪರ್​​ಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಮಾಜಿ ಕ್ರಿಕೆಟಿಗ ಇರ್ಫಾನ್ ಅವರು ರಿಷಭ್ ಪಂತ್​ಗೆ ತನ್ನ ತಂಡದಲ್ಲಿ ಅವಕಾಶ ಕೊಟ್ಟಿದ್ದಾರೆ. ಆದರೆ, ಅವರಿಗೆ ಬ್ಯಾಕಪ್ ವಿಕೆಟ್ ಕೀಪರ್​ ಆಯ್ಕೆ ಮಾಡಲಿಲ್ಲ. ಸಂಜು ಸ್ಯಾಮ್ಸನ್ ಮತ್ತು ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡದೆ ಕೈ ಬಿಟ್ಟಿದ್ದಾರೆ. ಈ ತಂಡದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಸೇರಿದ್ದಾರೆ. ನಾಯಕನಾಗಿ ಅಲ್ಲದೆ, ಬ್ಯಾಟಿಂಗ್ ಮತ್ತು ಬೌಲಿಂಗ್​​ನಲ್ಲೂ ವಿಫಲರಾಗಿದ್ದಾರೆ. ಆದರೂ ಆತನನ್ನು ಆಯ್ಕೆ ಮಾಡಿರುವುದು ಅಚ್ಚರಿ ಮೂಡಿಸಿದೆ.

ಸ್ಪಿನ್ನ ಗೆ ಸಂಬಂಧಿಸಿದಂತೆ ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್ ಮತ್ತು ಯುಜ್ವೇಂದ್ರ ಚಹಲ್ ಅವರಿಗೆ ಅವಕಾಶ ನೀಡಲಾಗಿದೆ. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್ ವೇಗದ ಬೌಲರ್‌ಗಳಾಗಿದ್ದಾರೆ. ಆದರೆ, ರವಿ ಬಿಷ್ಣೋಯ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ರಿಂಕು ಸಿಂಗ್ ಮತ್ತು ಸೂರ್ಯಕುಮಾರ್ ಯಾದವ್ ಸಹ ಈ ತಂಡದಲ್ಲಿದ್ದಾರೆ.

ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್ ಆಯ್ಕೆ ಮಾಡಿದ ಭಾರತ ತಂಡ

ರೋಹಿತ್​ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

IPL_Entry_Point