ಕನ್ನಡ ಸುದ್ದಿ  /  ಕ್ರಿಕೆಟ್  /  Ipl 2024 Latest Updates: ರಾಜಸ್ಥಾನ ರಾಯಲ್ಸ್ Vs ಗುಜರಾತ್ ಟೈಟಾನ್ಸ್ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಸತತ 5ನೇ ಗೆಲುವಿನತ್ತ ಸ್ಯಾಮ್ಸನ್ ಪಡೆ

IPL 2024 Latest Updates: ರಾಜಸ್ಥಾನ ರಾಯಲ್ಸ್ vs ಗುಜರಾತ್ ಟೈಟಾನ್ಸ್ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಸತತ 5ನೇ ಗೆಲುವಿನತ್ತ ಸ್ಯಾಮ್ಸನ್ ಪಡೆ

Indian Premier League 2024 Updates: ಐಪಿಎಲ್‌ 17ರ ಆವೃತ್ತಿಯ 24ನೇ ಪಂದ್ಯದಲ್ಲಿ ಏಪ್ರಿಲ್ 10ರ ಬುಧವಾರ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಸಂಜು ಸ್ಯಾಮ್ಸನ್ ಪಡೆಯ ತವರು ಮೈದಾನ ಜೈಪುರದಲ್ಲಿ ಪಂದ್ಯ ನಡೆಯುತ್ತಿದೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್‌ ಇಲ್ಲಿದೆ.

ರಾಜಸ್ಥಾನ ರಾಯಲ್ಸ್ vs ಗುಜರಾತ್ ಟೈಟಾನ್ಸ್ ಪಂದ್ಯದ ಲೇಟೆಸ್ಟ್ ಅಪ್ಡೇಟ್
ರಾಜಸ್ಥಾನ ರಾಯಲ್ಸ್ vs ಗುಜರಾತ್ ಟೈಟಾನ್ಸ್ ಪಂದ್ಯದ ಲೇಟೆಸ್ಟ್ ಅಪ್ಡೇಟ್

ಇಂಡಿಯನ್‌ ಪ್ರೀಮಿಯರ್‌ ಲೀಗ್ 2024ರ ಆವೃತ್ತಿಯಲ್ಲಿ ಏಪ್ರಿಲ್ 10ರ ಬುಧವಾರದಂದು ಟೂರ್ನಿಯ 24ನೇ ಪಂದ್ಯ ನಡೆಯುತ್ತಿದೆ. ಜೈಪುರದ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ನಾಯಕತ್ವದ ಅಜೇಯ ತಂಡ ರಾಜಸ್ಥಾನ್‌ ರಾಯಲ್ಸ್‌ ಮತ್ತು ಶುಭ್ಮನ್‌ ಗಿಲ್‌ ನೇತೃತ್ವದ ಗುಜರಾತ್‌ ಟೈಟಾನ್ಸ್ (Rajasthan Royals vs Gujarat Titans) ಕಣಕ್ಕಿಳಿಯುತ್ತಿವೆ. ಟೂರ್ನಿಯಲ್ಲಿ ಈವರೆಗೆ ಆಡಿದ ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಗೆದ್ದಿರುವ ಆರ್‌ಆರ್‌ ಅಜೇಯ ಗೆಲುವಿನ ಓಟ ಮುಂದುವರೆಸುವ ಉತ್ಸಾಹದಲ್ಲಿದೆ. ಅತ್ತ ಇನ್ನೂ ಸ್ಥಿರ ಪ್ರದರ್ಶನ ನೀಡಲು ವಿಫಲವಾಗಿರುವ ಟೈಟಾನ್ಸ್‌, ಟೂರ್ನಿಯಲ್ಲಿ ಮೂರನೇ ಗೆಲುವಿಗೆ ಎದುರು ನೋಡುತ್ತಿದೆ. ಪಂದ್ಯದ ಲೈವ್‌ ಅಪ್ಡೇಟ್‌ ಇಲ್ಲಿದೆ.

ಟ್ರೆಂಡಿಂಗ್​ ಸುದ್ದಿ

ಗುಜರಾತ್ ಟೈಟಾನ್ಸ್‌ಗೆ ಜಯ; ರಾಜಸ್ಥಾನ್ ರಾಯಲ್ಸ್‌ಗೆ‌ ಮೊದಲ ಸೋಲುಣಿಸಿದ ರಶೀದ್ ಖಾನ್

ಪ್ರಸಕ್ತ ಆವೃತ್ತಿಯ ಐಪಿಎಲ್‌ ಪಂದ್ಯಾವಳಿಯಲ್ಲಿ ರಾಜಸ್ಥಾನ್‌ ರಾಯಲ್ಸ್‌ ಮೊದಲ ಸೋಲು ಕಂಡಿದೆ. ಸಂಜು ಸ್ಯಾಮ್ಸನ್‌ ಪಡೆಯ ಜಯದ ನಾಗಾಲೋಟಕ್ಕೆ ಗುಜರಾತ್‌ ಟೈಟಾನ್ಸ್ ಬ್ರೇಕ್‌ ಹಾಕಿದೆ. ಜೈಪುರದ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಶುಭ್ಮನ್‌ ಗಿಲ್‌ ಪಡೆ ಗೆದ್ದು ಬೀಗಿದೆ. ಕೊನೆಯ ಎಸೆತದವರೆಗೂ ರೋಚಕವಾಗಿ ಸಾಗಿದ ಪಂದ್ಯದಲ್ಲಿ, ಡೆತ್‌ ಓವರ್‌ಗಳಲ್ಲಿ ರಾಹುಲ್‌ ತೆವಾಟಿಯಾ ಹಾಗೂ ರಶೀದ್‌ ಖಾನ್‌ ಹೋರಾಡಿ ತಂಡವನ್ನು ಗೆಲುವಿನ ದಡ ಸೇರಿದಿದ್ದಾರೆ. ರಶೀದ್‌ ಖಾನ್‌ ಗೆಲುವಿನ ಬೌಂಡರಿ ಬಾರಿಸಿದ್ದಾರೆ. ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ರಾಜಸ್ಥಾನ ವಿರುದ್ಧ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್‌

ಐಪಿಎಲ್‌ 17ರ ಆವೃತ್ತಿಯ 24ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಟಾಸ್‌ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್‌ ಗಿಲ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಜೈಪುರದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಉಭಯ ತಂಡಗಳ ಸಂಪೂರ್ಣ ವಿವರ ಇಲ್ಲಿದೆ.

ರಾಜಸ್ಥಾನ್ ರಾಯಲ್ಸ್ vs ಗುಜರಾತ್ ಟೈಟಾನ್ಸ್; ಜೈಪುರ ಪಿಚ್, ಹವಾಮಾನ ವರದಿ

ಐಪಿಎಲ್‌ 17ನೇ ಆವೃತ್ತಿಯ 24ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಅಜೇಯ ರಾಜಸ್ಥಾನ, ಸತತ ಐದನೇ ಗೆಲುವಿಗೆ ಎದುರು ನೋಡುತ್ತಿದೆ. ಪಂದ್ಯ ನಡೆಯಲಿರುವ ಜೈಪುರದ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದ ಪಿಚ್ ವರದಿ ಹಾಗೂ ಜೈಪುರ ಹವಾಮಾನ ವರದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ವಿಜಯ್‌ ಶಂಕರ್‌, ವಿಲಿಯಮ್ಸನ್‌ ಔಟ್; ರಾಜಸ್ಥಾನ್ ರಾಯಲ್ಸ್ vs ಗುಜರಾತ್ ಟೈಟಾನ್ಸ್ ಸಂಭಾವ್ಯ ತಂಡ

ಆತಿಥೇಐ ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯಕ್ಕೆ ಉಭಯ ತಂಡಗಳಲ್ಲಿ ಗಾಯದ ಸಮಸ್ಯೆ ಇದೆ. ಇದೇ ವೇಳೆ ಕೆಲವು ಆಟಗಾರರು ಇನ್ನೂ ಫಾರ್ಮ್‌ಗೆ ಬಂದಿಲ್ಲ. ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಲು ವಿಫಲವಾಗಿರುವ ಗುಜರಾತ್‌ ಟೈಟಾನ್ಸ್, ಪ್ರಸಕ್ತ ಆವೃತ್ತಿಯ ಅಜೇಯ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಅಬ್ಬರಿಸುವ ಕಾತರದಲ್ಲಿದೆ. ಜೈಪುರದ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿನಡೆಯುವ ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಆಡುವ ಬಳಗ ಹೇಗಿದೆ ನೋಡೋಣ. ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

 

IPL_Entry_Point