ಕನ್ನಡ ಸುದ್ದಿ  /  ಕ್ರಿಕೆಟ್  /  Ipl 2024 Latest Updates: ಪಂಜಾಬ್ ಕಿಂಗ್ಸ್ Vs ರಾಜಸ್ಥಾನ್ ರಾಯಲ್ಸ್ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಟಾಸ್, ಫಲಿತಾಂಶದ ವಿವರ

IPL 2024 Latest Updates: ಪಂಜಾಬ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಟಾಸ್, ಫಲಿತಾಂಶದ ವಿವರ

Indian Premier League 2024 Updates: ಐಪಿಎಲ್‌ 17ರ ಆವೃತ್ತಿಯ 27ನೇ ಪಂದ್ಯದಲ್ಲಿ ಏಪ್ರಿಲ್ 13ರ ಶನಿವಾರ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಂಜಾಬ್ ತವರು ಚಂಡೀಗಢದ ಮುಲ್ಲಾನ್‌ಪುರ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್‌ ಇಲ್ಲಿದೆ.

ಪಂಜಾಬ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯದ ಲೇಟೆಸ್ಟ್ ಅಪ್ಡೇಟ್
ಪಂಜಾಬ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯದ ಲೇಟೆಸ್ಟ್ ಅಪ್ಡೇಟ್

ಇಂಡಿಯನ್‌ ಪ್ರೀಮಿಯರ್‌ ಲೀಗ್ 2024ರ ಆವೃತ್ತಿಯಲ್ಲಿ ಏಪ್ರಿಲ್ 13ರ ಶನಿವಾರದಂದು ಟೂರ್ನಿಯ 27ನೇ ಪಂದ್ಯ ನಡೆಯುತ್ತಿದೆ. ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮುಲ್ಲನ್‌ಪುರದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ಮತ್ತು ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್‌ ರಾಯಲ್ಸ್‌‌ (PBKS vs RR) ತಂಡಗಳು ಸೆಣಸುತ್ತಿವೆ. ಟೂರ್ನಿಯಲ್ಲಿ ಸತತ ನಾಲ್ಕು ಪಂದ್ಯಗಳಲ್ಲಿ ಗೆದ್ದು ಕೊನೆಯ ಪಂದ್ಯದಲ್ಲಿ ಸೋಲು ಕಂಡಿರುವ ರಾಜಸ್ಥಾನ ಮತ್ತೆ ಜಯದ ಹಳಿಗೆ ಮರಳುವ ಯೋಚನೆಯಲ್ಲಿದೆ. ಅತ್ತ ಸ್ಥಿರ ಪ್ರದರ್ಶನ ನೀಡಲು ವಿಫಲವಾಗಿರುವ ಪಂಜಾಬ್,‌ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್ ವಿರುದ್ಧ ಸೋತಿದೆ. ತಂಡವು ಗೆಲುವಿನ ಹಳಿಗೆ ಮರಳಲು ಸಜ್ಜಾಗಿದೆ. ಪಂದ್ಯದ ಲೈವ್‌ ಅಪ್ಡೇಟ್‌ ಇಲ್ಲಿದೆ.

ಟ್ರೆಂಡಿಂಗ್​ ಸುದ್ದಿ

ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆಯ್ಕೆ

ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ನಾಯಕ ಸಂಜು ಸ್ಯಾಮ್ಸನ್‌ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಶಿಖರ್‌ ಧವನ್‌ ಗಾಯಗೊಂಡಿದ್ದು, ಅವರ ಬದಲಿಗೆ ಅತ್ತ ಪಂಜಾಬ್‌ ತಂಡವನ್ನು ಸ್ಯಾಮ್‌ ಕರನ್‌ ಮುನ್ನಡೆಸುತ್ತಿದ್ದಾರೆ. ಉಭಯ ತಂಡಗಳ ಆಡುವ ಬಳಗದ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಪಂಜಾಬ್ ರಾಜರಿಗೆ ಸವಾಲೊಡ್ಡುವುದೇ ರಾಯಲ್ಸ್ ಬಳಗ; ಆರ್​ಆರ್​ vs ಪಿಬಿಕೆಎಸ್ ಸಂಭಾವ್ಯ ಪ್ಲೇಯಿಂಗ್​ XI

Punjab Kings vs Rajasthan Royals: 17ನೇ ಆವೃತ್ತಿಯ ಐಪಿಎಲ್​ನ 27ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ. ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್​​​ಆರ್ ತಂಡವನ್ನು ಮಣಿಸಿ​, 8ನೇ ಸ್ಥಾನದಿಂದ ಮೇಲೇರಲು ಧವನ್‌ ಪಡೆ ತುದಿಗಾಲಲ್ಲಿ ನಿಂತಿದೆ. ಪಂದ್ಯದ ಪಿಚ್ ರಿಪೋರ್ಟ್, ಪ್ಲೇಯಿಂಗ್​ ಇಲೆವೆನ್ ಮತ್ತು ಮುಖಾಮುಖಿ ದಾಖಲೆಯ ವಿವರ ಇಲ್ಲಿದೆ. ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

IPL_Entry_Point