IPL 2024 Latest Updates: ಕೆಕೆಆರ್ vs ಎಲ್‌ಎಸ್‌ಜಿ, ಮುಂಬೈ vs ಸಿಎಸ್‌ಕೆ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್
Indian Premier League 2024 Updates: ಐಪಿಎಲ್ 17ರ ಆವೃತ್ತಿಯಲ್ಲಿ ಏಪ್ರಿಲ್ 14ರ ಭಾನುವಾರ ಡಬಲ್ ಧಮಾಕಾ. ವಾರಾಂತ್ಯದಂದು ಎರಡೆರಡು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಕೆಕೆಆರ್ ಮತ್ತು ಎಲ್‌ಎಸ್‌ಜಿ ತಂಡಗಳು ಮುಖಾಮುಖಿಯಾಗುತ್ತಿವೆ. ಎರಡನೇ ಪಂದ್ಯದಲ್ಲಿ ಮುಂಬೈ ಹಾಗೂ ಸಿಎಸ್‌ಕೆ ತಂಡಗಳು ಎದುರಾಗುತ್ತಿವೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆವೃತ್ತಿಯಲ್ಲಿ ಏಪ್ರಿಲ್ 14ರ ಭಾನುವಾರ ಎರಡು ಪಂದ್ಯಗಳಿವೆ. ಮಧ್ಯಾಹ್ನ 3.30ಕ್ಕೆ ಆರಂಭವಾಗುತ್ತಿರುವ ಟೂರ್ನಿಯ 28ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (Kolkata Knight Riders vs Lucknow Super Giants) ತಂಡಗಳು ಕಾದಾಡುತ್ತಿವೆ. ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ. ಕೆಎಲ್ ರಾಹುಲ್ ಬಳಗಕ್ಕೆ ಬಲಿಷ್ಠ ಶ್ರೇಯಸ್ ಅಯ್ಯರ್ ಪಡೆ ಸವಾಲೆಸೆಯುತ್ತಿದೆ. ದಿನದ ಎರಡನೇ ಪಂದ್ಯವು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಆತಿಥೇಯ ಮುಂಬೈ ಇಂಡಿಯನ್ಸ್ ತಂಡಕ್ಕೆ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (Mumbai Indians vs Chennai Super Kings) ಚಾಲೆಂಜ್ ಮಾಡುತ್ತಿದೆ. ಉಭಯ ತಂಡಗಳು ಕೂಡಾ ಆಡಿದ ಕೊನೆಯ ಪಂದ್ಯಗಳಲ್ಲಿ ಗೆಲುವಿನ ಹಳಿಗೆ ಮರಳಿವೆ. ಪಂದ್ಯದ ಲೈವ್ ಅಪ್ಡೇಟ್ ಇಲ್ಲಿದೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್
ಐಪಿಎಲ್ನ 29ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆಡುವ ಬಳಗ ಸೇರಿದಂತೆ ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
ಫಿಲ್ ಸಾಲ್ಟ್, ಶ್ರೇಯಸ್ ಅಯ್ಯರ್ ಆಕರ್ಷಕ ಜೊತೆಯಾಟ; ಲಕ್ನೋ ವಿರುದ್ಧ ಮೊದಲ ಗೆಲುವು ದಾಖಲಿಸಿದ ಕೆಕೆಆರ್
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಚೊಚ್ಚಿಲ ಗೆಲುವು ದಾಖಲಿಸಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ, ಫಿಲ್ ಸಾಲ್ಟ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಆಕರ್ಷಕ ಶತಕದ ಜೊತೆಯಾಟದ ನೆರವಿಂದ ಕೆಕೆಆರ್ 8 ವಿಕೆಟ್‌ಗಳ ಜಯಭೇರಿ ಬಾರಿಸಿದೆ. ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
ಲಕ್ನೋ ವಿರುದ್ಧ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ
ಎಲ್‌ಎಸ್‌ಜಿ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಶ್ರೇಯಸ್ ಆಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ತಂಡಕ್ಕೆ ವೇಗಿ ಹರ್ಷಿತ್ ರಾಣಾ ಮರಳಿದ್ದಾರೆ. ಅತ್ತ ಲಕ್ನೋ ತಂಡದ ಆಡುವ ಬಳಗದಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
ಕೆಕೆಆರ್ vs ಎಲ್‌ಎಸ್‌ಜಿ ಪಂದ್ಯದದ ವೇಳೆ ಸಂಜೆ ಮಳೆ ಸಾಧ್ಯತೆ
ಕೋಲ್ಕತ್ತಾ ನಗರದಲ್ಲಿ ಮಧ್ಯಾಹ್ನ ಪಂದ್ಯ ಆರಂಭ ಮತ್ತು ಟಾಸ್ ಪ್ರಕ್ರಿಯೆ ಸಮಯದಲ್ಲಿ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದೆ. ಸಹಜವಾಗಿ ಬಿಸಿಲಿನಿಂದಾಗಿ ಮೊದಲ ಇನ್ನಿಂಗ್ಸ್ ವೇಳೆ ಬ್ಯಾಟಿಂಗ್ ಮಾಡುವುದು ಕಷ್ಟ. ಸಂಜೆ ವೇಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಆದರೂ, ಐತಿಹಾಸಿಕ ಮೈದಾನದಲ್ಲಿ ತಂಡಗಳು ಚೇಸಿಂಗ್‌ಗೆ ಆದ್ಯತೆ ನೀಡಲಿವೆ. ಪಿಚ್ ಹಾಗೂ ಹವಾಮಾನದ ಸಂಪೂರ್ಣ ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
ಕೋಲ್ಕತ್ತಾ vs ಲಕ್ನೋ ಸಂಭಾವ್ಯ ತಂಡ
ಐಪಿಎಲ್ 2024ರ ಆವೃತ್ತಿಯ 28ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಎದುರಾಗುತ್ತಿವೆ. ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ. ಉಭಯ ತಂಡಗಳ ಸಂಭಾವ್ಯ ಆಡುವ ಬಳಗ ಹೀಗಿದೆ. ಸಂಪೂರ್ಣ ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
ಚೆನ್ನೈ vs ಮುಂಬೈ ಪ್ಲೇಯಿಂಗ್ 11, ಹವಾಮಾನ, ಪಿಚ್ ವರದಿ, ಮುಖಾಮುಖಿ ದಾಖಲೆ
17ನೇ ಆವೃತ್ತಿಯ ಐಪಿಎಲ್ನ 29ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಪಿಚ್ ರಿಪೋರ್ಟ್, ಪ್ಲೇಯಿಂಗ್ XI, ಮುಖಾಮುಖಿ ದಾಖಲೆ ವಿವರ ಇಲ್ಲಿದೆ. ಸಂಪೂರ್ಣ ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.