ಕನ್ನಡ ಸುದ್ದಿ  /  ಕ್ರಿಕೆಟ್  /  Ipl 2024 Latest Updates: ಆರ್‌ಸಿಬಿ Vs ಎಸ್‌ಆರ್‌ಎಚ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಬೆಂಗಳೂರು ಪಂದ್ಯದ ಸಂಪೂರ್ಣ ವಿವರ

IPL 2024 Latest Updates: ಆರ್‌ಸಿಬಿ vs ಎಸ್‌ಆರ್‌ಎಚ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಬೆಂಗಳೂರು ಪಂದ್ಯದ ಸಂಪೂರ್ಣ ವಿವರ

Indian Premier League 2024 Updates: ಐಪಿಎಲ್‌ 17ರ ಆವೃತ್ತಿಯಲ್ಲಿ ಏಪ್ರಿಲ್ 15ರ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಆರ್‌ಸಿಬಿ ತವರು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಪಂದ್ಯದ ಲೇಟೆಸ್ಟ್ ಅಪ್ಡೇಟ್‌ ಇಲ್ಲಿದೆ.

ಆರ್‌ಸಿಬಿ vs ಎಸ್‌ಆರ್‌ಎಚ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್
ಆರ್‌ಸಿಬಿ vs ಎಸ್‌ಆರ್‌ಎಚ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್

ಇಂಡಿಯನ್‌ ಪ್ರೀಮಿಯರ್‌ ಲೀಗ್ 2024ರ ಆವೃತ್ತಿಯಲ್ಲಿ ಏಪ್ರಿಲ್ 15ರ ಸೋಮವಾರವಾರ ಆರ್‌ಸಿಬಿ ಮತ್ತು ಎಸ್‌ಆರ್‌ಎಚ್‌ (Royal Challengers Bengaluru vs Sunrisers Hyderabad) ತಂಡಗಳು ಎದುರಾಗುತ್ತವೆ. ಟೂರ್ನಿಯ 30ನೇ ಪಂದ್ಯ ಇದಾಗಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಪಂದ್ಯ ಆರಂಭವಾಗುತ್ತಿದೆ. ಟೂರ್ನಿಯಲ್ಲಿ ಫಾಫ್‌ ಡುಪ್ಲೆಸಿಸ್‌ ನೇತೃತ್ವದ ಬೆಂಗಳೂರು ತಂಡವು ಸಂಪೂರ್ಣ ವಿಫಲವಾಗಿದ್ದು, ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದೆ. ಟೂರ್ನಿಯಲ್ಲಿ ಮುಂದಿನ ಹಂತಕ್ಕೆ ಪ್ರವೇಶಿಸಲು ಮುಂದಿನ ಪಂದ್ಯಗಳಲ್ಲಿ ಗೆಲ್ಲುವುದೊಂದೇ ದಾರಿ. ಅತ್ತ ಪ್ಯಾಟ್‌ ಕಮಿನ್ಸ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಉತ್ತಮ ಫಾರ್ಮ್‌ನಲ್ಲಿದ್ದು, ಬ್ಯಾಟಗ್‌ ಬೌಲಿಂಗ್‌ ಸೇರಿದಂತೆ ಆಲ್‌ರೌಂಡ್‌ ತಂಡವಾಗಿದೆ. ಅತ್ತ ಆರ್‌ಸಿಬಿಯು ಮತ್ತೆ ತವರಿನ ಪಂದ್ಯಕ್ಕೆ ಮರಳಿದ್ದು, ಅಭಿಮಾನಿಗಳಿಗೆ ನಿರಾಶೆಯಾಗದಂತೆ ಆಡಬೇಕಿದೆ. ಪಂದ್ಯದ ಲೈವ್‌ ಅಪ್ಡೇಟ್‌ ಇಲ್ಲಿದೆ.

ಟ್ರೆಂಡಿಂಗ್​ ಸುದ್ದಿ

ವಿಶ್ವದಾಖಲೆಯ ಪಂದ್ಯದಲ್ಲಿ ಗೆದ್ದು ಬೀಗಿದ ಸನ್‌ರೈಸರ್ಸ್

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಐಪಿಎಲ್‌ 2024ರ ಆವೃತ್ತಿಯಲ್ಲಿ ಆರನೇ ಸೋಲು ಕಂಡಿದೆ. ದಾಖಲೆಯ ಮೊತ್ತ ಒಟ್ಟಾದ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು 25 ರನ್‌ಗಳ ರೋಚಕ ಜಯ ಸಾಧಿಸಿದೆ. ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಸನ್‌ರೈಸರ್ಸ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಚೇಸಿಂಗ್ ಆಯ್ಕೆ

ಬೆಂಗಳೂರಿನಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ಕದನ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ನಾಯಕ ಫಾಫ್‌ ಡುಪ್ಲೆಸಿಸ್‌ ಚೇಸಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಆಡುವ ಬಳಗದ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಗೋವಾದ ಈ ಆಟಗಾರ ಆಡಿದರೆ ಆರ್‌ಸಿಬಿಗೆ ಮ್ಯಾಚ್​ವಿನ್ನರ್ ಆಗೋದು ಪಕ್ಕಾ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯಗಳಲ್ಲಿ ಗೋವಾ ಮೂಲದ ಸುಯೇಶ್ ಪ್ರಭುದೇಸಾಯಿ ಅವರಿಗೆ ಅವಕಾಶ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ. ದೇಶೀಯ ಕ್ರಿಕೆಟ್​​ನಲ್ಲಿ ಸಾಮರ್ಥ್ಯ ಸಾಬೀತುಪಡಿಸಿದ ಸುಯೇಶ್​​ರನ್ನು ಆಡಿಸಿದರೆ ಟಾಪ್ ಆರ್ಡರ್​​ನಲ್ಲಿ ಅಬ್ಬರಿಸಲಿದ್ದಾರೆ. ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

ಚಿನ್ನಸ್ವಾಮಿ ಪಿಚ್ ಮತ್ತು ಹವಾಮಾನ ವರದಿ ಇಲ್ಲಿದೆ

ಐಪಿಎಲ್‌ 2024ರ 30ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್‌ ತಂಡಗಳು ಎದುರಾಗುತ್ತಿವೆ. ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಿದೆ. ನಗರದ ಹವಾಮಾನ ವರದಿ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಪಿಚ್‌ ವರದಿ ಹೀಗಿದೆ.

ವಿಲ್ ಜಾಕ್ಸ್ ಇನ್; ಮ್ಯಾಕ್ಸ್​ವೆಲ್ ಔಟ್; ಎಸ್‌ಆರ್‌ಎಚ್ ವಿರುದ್ಧ ಆರ್​ಸಿಬಿ ತಂಡ

ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದನ್ನು ನೋಡೋಣ. ಮುಂಬೈ ವಿರುದ್ಧ ಪಂದ್ಯದ ವೇಳೆ ಗಾಯಗೊಂಡಿರುವ ಗ್ಲೆನ್ ಮ್ಯಾಕ್ಸ್​ವೆಲ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ. ಹೀಗಾಗಿ ಕ್ಯಾಮರೂನ್ ಗ್ರೀನ್ ತಂಡಕ್ಕೆ ಮರಳುವ ನಿರೀಕ್ಷೆಯಿದೆ. ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

IPL_Entry_Point