IPL 2024 Latest Updates: ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಲೇಟೆಸ್ಟ್ ಅಪ್ಡೇಟ್
Indian Premier League 2024 Updates: ಐಪಿಎಲ್ 17ರ ಆವೃತ್ತಿಯಲ್ಲಿ ಏಪ್ರಿಲ್ 19ರ ಶುಕ್ರವಾರ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಕೆಎಲ್ ರಾಹುಲ್ ಬಳಗದ ತವರು ಮೈದಾನ ಲಕ್ನೋದ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆವೃತ್ತಿಯಲ್ಲಿ ಏಪ್ರಿಲ್ 19ರ ಶುಕ್ರವಾರ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (LSG vs CSK) ತಂಡಗಳು ಮುಖಾಮುಖಿಯಾಗುತ್ತಿವೆ. ಎಲ್‌ಎಸ್‌ಜಿ ತಂಡವು ಆಡಿರುವ 6 ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು, ಉಳಿದ ಮೂರರಲ್ಲಿ ಸೋತಿದೆ. ಅತ್ತ ಸಿಎಸ್‌ಕೆ ತಂಡಗಳು ನಾಲ್ಕು ಪಂದ್ಯಗಳಲ್ಲಿ ಗೆದ್ದಿದೆ. ಟೂರ್ನಿಯ 34ನೇ ಪಂದ್ಯವು ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಉಭಯ ತಂಡಗಳು ಪ್ರಸಕ್ತ ಆವೃತ್ತಿಯಲ್ಲಿ ಮೊದಲ ಬಾರಿಗೆ ಎದುರಾಗುತ್ತಿವೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್ ಹೀಗಿದೆ.
ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದ ಎಲ್‌ಎಸ್‌ಜಿ ಬೌಲಿಂಗ್
ಲಕ್ನೋದ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಆತಿಥೇಯ ತಂಡ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳ ಆಡುವ ಬಳಗದ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಲಕ್ನೋ ವಿರುದ್ಧದ ಪಂದ್ಯಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೆ ಸಿಎಸ್‌ಕೆ ವಿಕೆಟ್ ಕೀಪರ್ ಎಂಎಸ್ ಧೋನಿ ಅವರು ಅಲಭ್ಯರಾಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡ ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿದ್ದು, 4ರಲ್ಲಿ ಜಯದ ನಗೆ ಬೀರಿದೆ. ಲಕ್ನೋ 6 ಪಂದ್ಯಗಳಲ್ಲಿ ತಲಾ 3 ಮೂರು ಗೆಲುವು ಹಾಗೂ ಸೋಲು ಕಂಡಿದೆ. ಉಭಯ ತಂಡಗಳು ಗೆಲುವನ್ನು ವಿಸ್ತರಿಸಲು ಎದುರು ನೋಡುತ್ತಿವೆ. ಆದರೆ, ಪ್ರಮುಖ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ನಾಯಕ ಧೋನಿ ಕಣಕ್ಕಿಳಿಯುವ ಸಾಧ್ಯತೆ ಕಡಿಮೆ ಇದೆ. ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
