IPL 2024 Latest Updates: ಡೆಲ್ಲಿ ಕ್ಯಾಪಿಟಲ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯದ ಲೇಟೆಸ್ಟ್ ಅಪ್ಡೇಟ್
Indian Premier League 2024 Updates: ಐಪಿಎಲ್ 17ರ ಆವೃತ್ತಿಯಲ್ಲಿ ಏಪ್ರಿಲ್ 20ರ ಶನಿವಾರ ಒಂದು ಪಂದ್ಯ ನಡೆಯುತ್ತಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆವೃತ್ತಿಯಲ್ಲಿ ಏಪ್ರಿಲ್ 20ರ ಶನಿವಾರ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪ್ಯಾಟ್ ಕಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ (DC vs SRH) ತಂಡವು ಸವಾಲು ಹಾಕಲು ಸಜ್ಜಾಗಿದೆ. ಪ್ರಸಕ್ತ ಆವೃತ್ತಿಯಲ್ಲಿ ಈವರೆಗೆ ಆಡಿರುವ 7 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿರುವ ಕ್ಯಾಪಿಟಲ್ಸ್, ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಅತ್ತ ಎಸ್‌ಆರ್‌ಎಚ್ ತಂಡವು ಪ್ರಚಂಡ ಫಾರ್ಮ್‌ನಲ್ಲಿದ್ದು, ಆಡಿದ 6 ಪಂದ್ಯಗಳಲ್ಲಿ 4ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಉಭಯ ತಂಡಗಳಲ್ಲೂ ಸ್ಫೋಟಕ ಆಟಗಾರರಿದ್ದಾರೆ. ಅಲ್ಲದೆ ಬೌಲಿಂಗ್‌ನಲ್ಲೂ ತಂಡಗಳು ಬಲಿಷ್ಠವಾಗಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಬಾರಿಯ ಮೊದಲ ಪಂದ್ಯ ನಡೆಯುತ್ತಿದ್ದು, ಕುತೂಹಲ ಮೂಡಿಸಿದೆ.
ಸನ್‌ರೈಸರ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್; ತಂಡದಲ್ಲಿ ಎರಡು ಬದಲಾವಣೆ
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ರೋಚಕ ಹಣಾಹಣಿ ನಡೆಯುತ್ತಿದೆ. ಪಂದ್ಯದ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಹೀಗಿದೆ. ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ಕದನಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ
ಐಪಿಎಲ್ನ 35ನೇ ಪಂದ್ಯದಲ್ಲಿ ಸೆಣಸಾಟ ನಡೆಸಲು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಸಜ್ಜಾಗಿವೆ. ಉಭಯ ತಂಡಗಳು ಬಲಿಷ್ಠ ಆಡುವ ಬಳಗವನ್ನು ಕಣಕ್ಕಿಳಿಸಲು ತಯಾರಿ ನಡೆಸಿವೆ. ತಂಡಗಳ ಸಂಭಾವ್ಯ ಆಡುವ ಬಳಗ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.
ಡೆಲ್ಲಿ ಕ್ಯಾಪಿಟಲ್ಸ್ vs ಸನ್‌ರೈಸರ್ಸ್ ಹೈದರಾಬಾದ್; ಮುಖಾಮುಖಿ ದಾಖಲೆ, ದೆಹಲಿ ಪಿಚ್ ಹಾಗೂ ಹವಾಮಾನ ವರದಿ
ಏಪ್ರಿಲ್ 20ರಂದು ನಡೆಯುತ್ತಿರುವ ಐಪಿಎಲ್ 2024ರ 35ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ರಿಷಭ್ ಪಂತ್ ನೇತೃತ್ವದ ತಂಡವು ಪ್ಯಾಟ್ ಕಮಿನ್ಸ್ ಬಳಗವನ್ನು ಮಣಿಸಲು ಎದುರು ನೋಡುತ್ತಿದೆ. ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಹಾಗೂ ದೆಹಲಿ ಹವಾಮಾನ ವರದಿ ಹೀಗಿದೆ. ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.