IPL 2024 Latest Updates: ಕೆಕೆಆರ್ vs ಆರ್‌ಸಿಬಿ, ಪಂಜಾಬ್ vs ಗುಜರಾತ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್
IPL 2024 Updates: ಐಪಿಎಲ್ 17ರ ಆವೃತ್ತಿಯಲ್ಲಿ ಏಪ್ರಿಲ್ 21ರ ಭಾನುವಾರ ಅಭಿಮಾನಿಗಳಿಗೆ ಡಬಲ್ ಮನರಂಜನೆ ಸಿಗಲಿದೆ. ವಾರಾಂತ್ಯದಲ್ಲಿ 2 ಪಂದ್ಯ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಆರ್‌ಸಿಬಿಗೆ ಕೆಕೆಆರ್ ಸವಾಲೊಡ್ಡುತ್ತಿದೆ. 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಎದುರಾಗುತ್ತಿವೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆವೃತ್ತಿಯಲ್ಲಿ ಏಪ್ರಿಲ್ 21ರ ಭಾನುವಾರ ಎರಡು ಪಂದ್ಯಗಳು ನಡೆಯುತ್ತಿವೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ದಿನದ ಮೊದಲ ಪಂದ್ಯದಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (KKR vs RCB) ತಂಡಗಳು ಎದುರಾಗುತ್ತಿವೆ. ಪಂದ್ಯವು ಮಧ್ಯಾಹ್ನ 3.30ಕ್ಕೆ ಆರಂಭವಾಗುತ್ತಿದೆ. ದಿನದ ಎರಡನೇ ಪಂದ್ಯವು ಸಂಜೆ 7.30ಕ್ಕೆ ಆರಂಭವಾಗುತ್ತಿದ್ದು, ಆತಿಥೇಯ ಪಂಜಾಬ್ ಕಿಂಗ್ಸ್‌ಗೆ ಗುಜರಾತ್ ಟೈಟಾನ್ಸ್ (PBKS vs GT) ಸವಾಲೆಸೆಯುತ್ತಿದೆ. ಮುಲ್ಲಾನ್‌ಪುರದಲ್ಲಿ ಪಂದ್ಯ ನಡೆಯುತ್ತಿದೆ. ವಾರಾಂತ್ಯ ದಿನವಾದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ದಿನಪೂರ್ತಿ ಮನರಂಜನೆ ಲಭ್ಯವಾಗಲಿದೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ.
ಪಂಜಾಬ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆಲುವು
ಪಂಜಾಬ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ರೋಚಕ ಜಯ ಸಾಧಿಸಿದೆ. ಮುಲ್ಲಾನ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಶುಭ್ಮನ್ ಗಿಲ್ ಪಡೆಯು 3 ವಿಕೆಟ್‌ಗಳ ಜಯ ತನ್ನದಾಗಿಸಿದೆ. ಐಪಿಎಲ್ 2024ರ ಆವೃತ್ತಿಯಲ್ಲಿ ನಾಲ್ಕನೇ ಗೆಲುವಿನೊಂದಿಗೆ ಟೈಟಾನ್ಸ್ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ.
ಗುಜರಾತ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡಕ್ಕೆ ಸ್ಯಾಮ್ ಕರನ್ ನಾಯಕನಾಗಿದ್ದಾರೆ. ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
ಕೆಕೆಆರ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ತಂಡದಲ್ಲಿ 3 ಬದಲಾವಣೆ
ಐಪಿಎಲ್ನ 36ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೇಸಿಂಗ್ ಆಯ್ಕೆ ಮಾಡಿಕೊಂಡಿದೆ. ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ
ಐಪಿಎಲ್ನ 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ರೋಚಕ ಕದನಕ್ಕೆ ಉಭಯ ತಂಡಗಳು ಬಲಿಷ್ಠ ಆಡುವ ಬಳಗವನ್ನು ಕಣಕ್ಕಿಳಿಸುವ ಯೋಚನೆಯಲ್ಲಿದೆ. ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿದೆ.
ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ ಪಂದ್ಯದ ಸಂಭಾವ್ಯ ತಂಡ, ಪಿಚ್ ಹಾಗೂ ಹವಾಮಾನ ವರದಿ
ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು ಸ್ಯಾಮ್ ಕರನ್ ನಾಯಕತ್ವದಲ್ಲಿ ಆಡಲಿದೆ. ಉಭಯ ತಂಡಡಗಳ ಮುಖಾಮುಖಿ ದಾಖಲೆ, ಮುಲ್ಲನ್‌ಪುರ ಸ್ಟೇಡಿಯಂ ಪಿಚ್ ವರದಿ, ಚಂಡೀಗಢ ಹವಾಮಾನ ವರದಿ ಹಾಗೂ ಸಂಭಾವ್ಯ ತಂಡಗಳ ವಿವರ ಹೀಗಿದೆ.