ಕನ್ನಡ ಸುದ್ದಿ  /  ಕ್ರಿಕೆಟ್  /  Ipl 2024 Latest Updates: ಡೆಲ್ಲಿ ಕ್ಯಾಪಿಟಲ್ಸ್ Vs ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್ Vs ರಾಜಸ್ಥಾನ ರಾಯಲ್ಸ್ ಲೈವ್ ಅಪ್ಡೇಟ್

IPL 2024 Latest Updates: ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್ vs ರಾಜಸ್ಥಾನ ರಾಯಲ್ಸ್ ಲೈವ್ ಅಪ್ಡೇಟ್

Indian Premier League 2024 Updates: ಐಪಿಎಲ್‌ 17ರ ಆವೃತ್ತಿಯ 43ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಏಪ್ರಿಲ್ 27ರ ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಎದುರಾಗುತ್ತಿವೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್‌ ಇಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್, ಎಲ್‌ಎಸ್‌ಜಿ vs ರಾಜಸ್ಥಾನ್ ಲೈವ್ ಅಪ್ಡೇಟ್
ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್, ಎಲ್‌ಎಸ್‌ಜಿ vs ರಾಜಸ್ಥಾನ್ ಲೈವ್ ಅಪ್ಡೇಟ್

ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆವೃತ್ತಿಯಲ್ಲಿ ಏಪ್ರಿಲ್ 27ರ ಶನಿವಾರ ಡಬಲ್ ಧಮಾಕ. ವಾರಾಂತ್ಯದಲ್ಲಿ ಎರಡೆರಡು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಮುಂಬೈ ಇಂಡಿಯನ್ಸ್‌ (Delhi Capitals vs Mumbai Indians) ಸವಾಲೆಸುತ್ತಿದೆ. ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಸೇಡಿನ ಸಮರ ನಡೆಯುತ್ತಿದೆ. ಪಂದ್ಯವು ಮಧ್ಯಾಹ್ನ 3.30ಕ್ಕೆ ಆರಂಭವಾಗುತ್ತಿದೆ. ದಿನದ ಎರಡನೇ ಪಂದ್ಯವು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸಂಜೆ 7.30ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ಕೆಎಲ್‌ ರಾಹುಲ್‌ ನೇತೃತ್ವದ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ ರಾಯಲ್ಸ್ (Lucknow Super Giants vs Rajasthan Royals) ಸವಾಲೆಸೆಯುತ್ತಿದೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ.

ಸೇಡಿನ ಸಮರದಲ್ಲಿ ಮುಂಬೈ ವಿರುದ್ಧ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್

ಮುಂಬೈ ಇಂಡಿಯನ್ಸ್ ವಿರುದ್ಧ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಜಯ ಗಳಿಸಿದೆ. ಕಳೆದ ಪಂದ್ಯದಲ್ಲಿ ಮುಂಬೈನಲ್ಲಿ ಎದುರಿಸಿದ ಸೋಲಿಗೆ ರಿಷಬ್‌ ಪಂತ್‌ ಬಳಗ ಸೇಡು ತೀರಿಸಿಕೊಂಡಿದೆ. ಪಂದ್ಯದ ಫಲಿತಾಂಶದ ಸಂಪೂರ್ಣ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ

ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗುತ್ತಿವೆ. ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್‌ ಪಾಂಡ್ಯ ಚೇಸಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳ ಆಡುವ ಬಳಗದ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಸಂಭಾವ್ಯ ತಂಡ

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಗಾಯದ ಸಮಸ್ಯೆ ಕಾಡುತ್ತಿದೆ. ಸ್ಫೋಟಕ ಬ್ಯಾಟರ್‌ ಹಾಗೂ ವೇಗದ ಬೌಲರ್‌ ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ.‌ ಉಭಯ ತಂಡಗಳ ಸಂಭಾವ್ಯ ತಂಡದ ವಿವರ ಇಲ್ಲಿದೆ. ಸಂಪೂರ್ಣ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಡೆಲ್ಲಿ ಪಿಚ್ ಹಾಗೂ ಹವಾಮಾನ ವರದಿ

ಏಪ್ರಿಲ್ 27ರಂದು ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿವೆ. ದೆಹಲಿಯಲ್ಲಿ ನಡೆಯುವ ಪಂದ್ಯದ ಪಿಚ್‌ ಹಾಗೂ ಹವಾಮಾನ ವರದಿ ಇಲ್ಲಿದೆ. ಸಂಪೂರ್ಣ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೆ ಲಕ್ನೋ ಪ್ಲೇಯಿಂಗ್ XI

ಐಪಿಎಲ್​ 2024ರ 44ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ಸೆಣಸಾಟ ನಡೆಸಲಿವೆ. ಉಭಯ ತಂಡಗಳ ಸಂಭಾವ್ಯ ಆಡುವ ಬಳಗ ಇಲ್ಲಿದೆ.

IPL_Entry_Point