IPL 2024 Latest Updates: ಎಸ್‌ಆರ್‌ಎಚ್ vs ಸಿಎಸ್‌ಕೆ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಟಾಸ್, ಫಲಿತಾಂಶ ಸೇರಿ ಸಂಪೂರ್ಣ ವಿವರ
Indian Premier League 2024 Updates: ಐಪಿಎಲ್ 2024ರ ಆವೃತ್ತಿಯ 18ನೇ ಪಂದ್ಯದಲ್ಲಿ ಏಪ್ರಿಲ್ 5ರ ಶುಕ್ರವಾರ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿವೆ. ಪ್ಯಾಟ್ ಕಮಿನ್ಸ್ ನೇತೃತ್ವದ ಎಸ್‌ಆರ್‌ಎಚ್ ತವರು ಮೈದಾನ ಹೈದರಾಬಾದ್‌ನಲ್ಲಿ ಪಂದ್ಯ ನಡೆಯುತ್ತಿದೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯ 18ನೇ ಪಂದ್ಯದಲ್ಲಿ ಏಪ್ರಿಲ್ 5ರ ಶುಕ್ರವಾರ ಎಸ್‌ಆರ್‌ಎಚ್ ಹಾಗೂ ಸಿಎಸ್‌ಕೆ ತಂಡಗಳು ಎದುರಾಗುತ್ತಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಮತ್ತೊಂದು ಬೃಹತ್ ಮೊತ್ತ ದಾಖಲಾಗುವ ನಿರೀಕ್ಷೆ ಇದೆ. ಸನ್‌ರೈಸರ್ಸ್ ತಂಡವು ಕೊನೆಯ ಪಂದ್ಯದಲ್ಲಿ ಗುಜರಾತ್ ವಿರುದ್ಧ ಸೋತಿತ್ತು. ಅತ್ತ ಋತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ತಂಡವು ವಿಶಾಖಪಟ್ಟಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಗ್ಗರಿಸಿತ್ತು. ಇದೀಗ ಉಭಯ ತಂಡಗಳು ಕೂಡಾ ಗೆಲುವಿನ ಲಯ ಕಂಡುಕೊಳ್ಳಲು ರೋಚಕ ಹಣಾಹಣಿಯಲ್ಲಿ ಎದುರಾಗಲಿವೆ. ಪಂದ್ಯದ ಸಂಪೂರ್ಣ ಅಪ್ಡೇಟ್ ಇಲ್ಲಿದೆ.
ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದ ಎಸ್‌ಆರ್‌ಎಚ್ ಫೀಲ್ಡಿಂಗ್; ಬಲಿಷ್ಠ ಆಟಗಾರರು ಅಲಭ್ಯ
ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇಂದಿನ ಪಂದ್ಯಕ್ಕಾಗಿ ಉಭಯ ತಂಡಗಳಲ್ಲೂ ಹಲವು ಬದಲಾವಣೆ ಮಾಡಲಾಗಿದೆ. ಎರಡೂ ತಂಡಗಳು ಬದಲಾದ ತಂಡಗಳೊಂದಿಗೆ ಕಣಕ್ಕಿಳಿಯುತ್ತಿದೆ. ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
ಚೆನ್ನೈ ಸೂಪರ್ ಕಿಂಗ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI, ಮುಖಾಮುಖಿ ದಾಖಲೆ ವಿವರ
ಐಪಿಎಲ್ 2024ರ 18ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡದ ಸವಾಲಿಗೆ ಸಿದ್ಧವಾಗಿದೆ. ಉಭಯ ತಂಡಗಳು ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಗೆಲುವಿನ ಹಾದಿಗೆ ಮರಳಲು ಎದುರು ನೋಡುತ್ತಿವೆ. ಉಭಯ ತಂಡಗಳ ನಡುವಿನ ಹೆಡ್-ಟು-ಹೆಡ್ ರೆಕಾರ್ಡ್, ಪ್ಲೇಯಿಂಗ್ ಇಲೆವ್‌ನ ಸಂಪೂರ್ಣ ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ.
ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ ತಂಡ
ಮಯಾಂಕ್ ಅಗರ್ವಾಲ್, ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಜಯದೇವ್ ಉನದ್ಕತ್ .
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ
ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೇರಿಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮತೀಶ ಪತಿರಾಣ, ಮುಸ್ತಾಫಿಜುರ್ ರೆಹಮಾನ್/ಮಹೀಶಾ ತೀಕ್ಷಾಣ.