ಕನ್ನಡ ಸುದ್ದಿ  /  ಕ್ರಿಕೆಟ್  /  Ipl 2024 Latest Updates: ಮುಂಬೈ-ಡೆಲ್ಲಿ, ಲಕ್ನೋ-ಗುಜರಾತ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಭಾನುವಾರ ಡಬಲ್‌ ಮನರಂಜನೆ

IPL 2024 Latest Updates: ಮುಂಬೈ-ಡೆಲ್ಲಿ, ಲಕ್ನೋ-ಗುಜರಾತ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಭಾನುವಾರ ಡಬಲ್‌ ಮನರಂಜನೆ

IPL 2024 Updates: ಐಪಿಎಲ್‌ 2024ರ ಆವೃತ್ತಿಯಲ್ಲಿ ಏಪ್ರಿಲ್ 7ರ ಭಾನುವಾರ 2 ಪಂದ್ಯಗಳು ನಡೆಯುತ್ತಿವೆ. ದಿನದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮುಖಾಮುಖಿಯಾಗುತ್ತಿವೆ. ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌ ಕಾದಾಡುತ್ತಿವೆ. ಪಂದ್ಯಗಳ ಲೇಟೆಸ್ಟ್ ಅಪ್ಡೇಟ್‌ ಇಲ್ಲಿದೆ.

ಮುಂಬೈ-ಡೆಲ್ಲಿ, ಲಕ್ನೋ-ಗುಜರಾತ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್
ಮುಂಬೈ-ಡೆಲ್ಲಿ, ಲಕ್ನೋ-ಗುಜರಾತ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್

ಐಪಿಎಲ್‌ 17ನೇ ಆವೃತ್ತಿಯಲ್ಲಿ ಏಪ್ರಿಲ್ 7ರ ಭಾನುವಾರ ಎರಡು ಪಂದ್ಯಗಳು ನಡೆಯುತ್ತಿದೆ. ಪಂದ್ಯಾವಳಿಯ 20ನೇ ಪಂದ್ಯವು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿದ್ದು, ಹಾರ್ದಿಕ್‌ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್‌ಗೆ ರಿಷಬ್‌ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ (Mumbai Indians vs Delhi Capitals) ಸವಾಲೊಡ್ಡುತ್ತಿದೆ. ದಿನದ ಎರಡನೇ ಹಾಗೂ ಟೂರ್ನಿಯ 21ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌ (Lucknow Super Giants vs Gujarat Titans) ಎದುರಾಗುತ್ತಿವೆ. ಪಂದ್ಯವು ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಎಲ್ಲಾ ನಾಲ್ಕು ತಂಡಗಳು ಈವರೆಗೆ ಸೋಲು-ಗೆಲುವುಗಳ ಮಿಶ್ರಣವನ್ನು ಪಡೆದಿದ್ದು, ಮುಂದಿನ ಪಂದ್ಯಗಳಲ್ಲಿ ಜಯ ಸಾಧಿಸುವುದು ಅನಿವಾರ್ಯವಾಗಿದೆ.

ಟ್ರೆಂಡಿಂಗ್​ ಸುದ್ದಿ

ಗುಜರಾತ್ ವಿರುದ್ಧ ಲಕ್ನೋ ತಂಡಕ್ಕೆ ಭರ್ಜರಿ ಜಯ

17ನೇ ಆವೃತ್ತಿಯ ಐಪಿಎಲ್​ನ 21ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಭರ್ಜರಿ ಜಯ ಸಾಧಿಸಿತು. 33 ರನ್​ಗಳಿಂದ ಗೆದ್ದ ಲಕ್ನೋ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿತು. ಯಶ್ ಠಾಕೂರ್ 5 ವಿಕೆಟ್ ಉರುಳಿಸಿ ಜಿಟಿ ತಂಡದ ಗೆಲುವನ್ನು ಕಸಿದರು. ಕೃನಾಲ್ ಪಾಂಡ್ಯ 3 ವಿಕೆಟ್ ಪಡೆದು ಯಶ್​ಗೆ ಸಾಥ್ ನೀಡಿದರು. ಹೆಚ್ಚಿನ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ.

ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್; ಕರ್ನಾಟಕದ ಆಟಗಾರನಿಗೆ ಅವಕಾಶ ನೀಡಿದ ಗುಜರಾತ್

ಪ್ರಸಕ್ತ ಆವೃತ್ತಿಯ ಐಪಿಎಲ್​ನ 21ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್​ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಗುಜರಾತ್ ತಂಡದಲ್ಲಿ ಎರಡು ಬದಲಾವಣೆಯಾಗಿದೆ. ಸಂಪೂರ್ಣ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಕೊನೆಗೂ ಗೆಲುವಿನ ರುಚಿ ಕಂಡ ಮುಂಬೈ ಇಂಡಿಯನ್ಸ್; ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ನಿಟ್ಟುಸಿರು ಬಿಟ್ಟ ಪಾಂಡ್ಯ ಪಡೆ

ಮುಂಬೈ ಇಂಡಿಯನ್ಸ್‌ ತಂಡ ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಸತತ ಸೋಲಿನಿಂದ ಕಂಗಾಲಾಗಿದ್ದ ಹಾರ್ದಿಕ್‌ ಪಾಂಡ್ಯ ಬಳಗ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಸೋಲಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ಖಾತೆ ತೆರೆದಿದೆ. ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ‌ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ

ಮುಂಬೈನ ವಾಂಖೆಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳ ನಡುವೆ ಐಪಿಎಲ್‌ ಪಂದ್ಯ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ರಿಷಬ್‌ ಪಂತ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳಲ್ಲೂ ಮಹತ್ವದ ಬದಲಾವಣೆ ಮಾಡಲಾಗಿದೆ. ಪ್ಲೇಯಿಂಗ್‌ ಇಲೆವೆನ್‌ ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ.

ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್; ವಾಂಖೆಡೆ ಮೈದಾನ ಪಿಚ್, ಹವಾಮಾನ ವರದಿ ಹೀಗಿದೆ

ಮುಂಬೈನ ವಾಂಖೆಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಮಧ್ಯಾಹ್ನ 3.30ಕ್ಕೆ ಪಂದ್ಯ ಆರಂಭವಾಗಲಿದ್ದು, ಮುಂಬೈ ಹವಾಮಾನ ಹಾಗೂ ಪಿಚ್‌ ವರದಿ ಇಲ್ಲಿದೆ.

ಗುಜರಾತ್ ಟೈಟಾನ್ಸ್ ಕದನಕ್ಕೆ ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ತಂಡ

ಗುಜರಾತ್​ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಸಜ್ಜಾಗುತ್ತಿದೆ. ಇಂದಿನ ಪಂದ್ಯಕ್ಕೆ ನಾಯಕ ಕೆಎಲ್ ರಾಹುಲ್ ಅಲಭ್ಯರಾಗುತ್ತಾರಾ? ಹೇಗಿರಲಿದೆ ಪ್ಲೇಯಿಂಗ್ ಇಲೆವೆನ್? ಇಲ್ಲಿದೆ ವಿವರ.

ಸೂರ್ಯಕುಮಾರ್ ಇನ್-ಮೂವರು ಔಟ್, ಡೆಲ್ಲಿ ವಿರುದ್ಧ ಮುಂಬೈ ಸಂಭಾವ್ಯ ಪ್ಲೇಯಿಂಗ್ ಇಲೆವೆನ್

ಮುಂಬೈ ಇಂಡಿಯನ್ಸ್ ತಂಡ ಕೊನೆಯ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಮುಗ್ಗರಿಸಿತ್ತು. ಇದೀಗ ಮತ್ತೆ ಹೊಸ ಹುರುಪಿನೊಂದಿಗೆ ಪುಟಿದೆದ್ದು ಆಡುವ ಉತ್ಸಾಹದಲ್ಲಿದೆ. ಈ ಉತ್ಸಾಹಕ್ಕೆ ಕಾರಣವೂ ಇದೆ. ವಿಶ್ವದ ನಂಬರ್‌ ವನ್‌ ಟಿ20 ಆಟಗಾರ ಸೂರ್ಯಕುಮಾರ್‌ ಯಾದವ್‌ ತಂಡಕ್ಕೆ ಮರಳಿದ್ದು, ಡೆಲ್ಲಿ ವಿರುದ್ಧ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ತಂಡದಲ್ಲಿ ಯಾರ್ಯಾರು ಇರಲಿದ್ದಾರೆ. ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

IPL_Entry_Point