ಕನ್ನಡ ಸುದ್ದಿ  /  Cricket  /  Cricket Updates Of March 30 Ipl 2024 Gujarat Titans Vs Sunrisers Hyderabad Delhi Capitals Vs Chennai Super Kings Jra

IPL 2024 Latest Updates: ಭಾನುವಾರ ಡಬಲ್ ಮನರಂಜನೆ; ಗುಜರಾತ್‌ vs ಹೈದರಾಬಾದ್‌, ಡೆಲ್ಲಿ vs ಚೆನ್ನೈ ಪಂದ್ಯದ ಲೇಟೆಸ್ಟ್ ಅಪ್ಡೇಟ್

IPL 2024 Updates: ಐಪಿಎಲ್‌ 2024ರ ಆವೃತ್ತಿಯಲ್ಲಿ ಮಾರ್ಚ್‌ 31ರ ಭಾನುವಾರ 2 ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು ಮುಖಾಮುಖಿಯಾಗುತ್ತಿವೆ. 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಎದುರಾಗುತ್ತಿವೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್‌ ಇಲ್ಲಿದೆ.

ಗುಜರಾತ್‌ vs ಹೈದರಾಬಾದ್‌, ಡೆಲ್ಲಿ vs ಚೆನ್ನೈ ಪಂದ್ಯದ ಲೇಟೆಸ್ಟ್ ಅಪ್ಡೇಟ್
ಗುಜರಾತ್‌ vs ಹೈದರಾಬಾದ್‌, ಡೆಲ್ಲಿ vs ಚೆನ್ನೈ ಪಂದ್ಯದ ಲೇಟೆಸ್ಟ್ ಅಪ್ಡೇಟ್

ಇಂಡಿಯನ್‌ ಪ್ರೀಮಿಯರ್‌ ಲೀಗ್‌ (Indian Premier League 2024 17ನೇ ಆವೃತ್ತಿಯಲ್ಲಿ ಮಾರ್ಚ್ 31ರ ಭಾನುವಾರ ಅಭಿಮಾನಿಗಳಿಗೆ ಡಬಲ್ ಧಮಾಕಾ. ವಾರಾಂತ್ಯವಾದ ಇಂದು ಎರಡೆರಡು ಪಂದ್ಯಗಳು ನಡೆಯುತ್ತಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಿನದ ಮೊದಲ ಪಂದ್ಯದಲ್ಲಿ ಶುಭ್ಮನ್‌ ಗಿಲ್‌ ನೇತೃತ್ವದ ಗುಜರಾತ್‌ ಟೈಟಾನ್ಸ್‌ ತಂಡವು, ಪ್ಯಾಟ್ ಕಮಿನ್ಸ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಎರಡನೇ ಪಂದ್ಯವು ವಿಶಾಖಪಟ್ಟಣದಲ್ಲಿ ನಡೆಯುತ್ತಿದ್ದು, ರಿಷಭ್‌ ಪಂತ್‌ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಋತುರಾಜ್‌ ಗಾಯಕ್ವಾಡ್‌ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಕಾದಾಡುತ್ತಿವೆ. ಪಂದ್ಯದ ಲೇಟೆಸ್ಟ್‌ ಅಪ್ಡೇಟ್‌ ಇಲ್ಲಿದೆ.

ಸಿಎಸ್​ಕೆ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್

ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಐಪಿಎಲ್​ 2024ರ 13ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಪಂದ್ಯದ ವಿವರಗಳಿಗೆ ಇಲ್ಲಿ ಓದಿ.

ಹೈದರಾಬಾದ್ ವಿರುದ್ಧ ಗುಜರಾತ್‌ ಟೈಟಾನ್ಸ್‌ಗೆ ಗೆಲುವು

ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಸೋತಿದ್ದ ಗುಜರಾತ್‌ ಟೈಟಾನ್ಸ್, ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಗೆಲುವಿನ ಹಳಿಗೆ ಮರಳಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಲ್‌ರೌಂಡ್‌ ಪ್ರದರ್ಶನ ನೀಡಿದ ಶುಭ್ಮನ್‌ ಗಿಲ್‌ ಬಳಗವು 7 ವಿಕೆಟ್‌ಗಳಿಂದ ಜಯ ಸಾಧಿಸಿದೆ. ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಟೈಟಾನ್ಸ್‌ ವಿರುದ್ಧ ಟಾಸ್ ಗೆದ್ದ ಎಸ್‌ಆರ್‌ಎಚ್‌ ನಾಯಕ ಕಮಿನ್ಸ್ ಬ್ಯಾಟಿಂಗ್‌ ಆಯ್ಕೆ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ ಟಾಸ್‌ ಗೆದ್ದ ಎಸ್‌ಆರ್‌ಎಚ್‌ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳ ಆಡುವ ಬಳಗ ಹಾಗೂ ಇಂಪ್ಯಾಕ್ಟ್‌ ಆಟಗಾರರ ವಿವರಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ.

ಶುಭ್ಮನ್ ಗಿಲ್ ನಾಯಕತ್ವಕ್ಕೆ ಗ್ಯಾರಿ ಕರ್ಸ್ಟನ್ ಹೇಳಿದ್ದಿಷ್ಟು

ಗುಜರಾತ್ ಟೈಟಾನ್ಸ್ ತಂಡದ ಮುಖ್ಯ ಕೋಚ್ ಗ್ಯಾರಿ ಕರ್ಸ್ಟನ್, ಫ್ರಾಂಚೈಸಿಯ ನೂತನ ನಾಯಕ ಶುಭ್ಮನ್‌ ಗಿಲ್ ನಾಯಕತ್ವದ ಕುರಿತು ಮೊದಲ ಹಂತದ ಮೌಲ್ಯಮಾಪನ ಮಾಡಿದ್ದಾರೆ. ಚುಟುಕು ಸ್ವರೂಪದಲ್ಲಿ ತ್ವರಿತವಾಗಿ ಕಾರ್ಯತಂತ್ರ ರೂಪಿಸಿದ ನಿರ್ಧಾರ ತೆಗೆದುಕೊಳ್ಳುವ ಅಗತ್ಯತೆಯ ಕುರಿತು ಗ್ಯಾರಿ ಮಾತನಾಡಿದ್ದಾರೆ. ಆ ಕಲೆಯನ್ನು ಗಿಲ್ ಕಲಿಯುತ್ತಿದ್ದಾರೆ ಎಂದು ಕರ್ಸ್ಟನ್ ಹೇಳಿದ್ದಾರೆ.‌ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟ ಸಿಎಸ್​ಕೆ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ಪ್ಲೇಯಿಂಗ್ XI

17ನೇ ಆವೃತ್ತಿಯ ಐಪಿಎಲ್​ನಲ್ಲಿ 2 ಮೊದಲ ಗೆಲುವಿನ ನಿರೀಕ್ಷೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಕಠಿಣ ಸವಾಲಿಗೆ ಸಜ್ಜಾಗುತ್ತಿದೆ. ವಿಶಾಖಪಟ್ಟಣದ ಡಾ.ವೈಎಸ್ ರಾಜಶೇಖರ್​ ರೆಡ್ಡಿ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಸತತ 2 ಪಂದ್ಯಗಳನ್ನು ಗೆದ್ದಿರುವ ಸಿಎಸ್​ಕೆ ಹ್ಯಾಟ್ರಿಕ್ ಜಯದ ಮೇಲೆ ಕಣ್ಣಿಟ್ಟಿದೆ. ಪಂದ್ಯಕ್ಕೆ ಡೆಲ್ಲಿ ಆಡುವ ಬಳಗ ಹೀಗಿರಲಿದೆ. ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಗುಜರಾತ್ vs ಎಸ್ಆರ್‌ಎಚ್; ಅಹಮದಾಬಾದ್ ಪಿಚ್ ಹಾಗೂ ಹವಾಮಾನ ವರದಿ ಹೀಗಿದೆ

ಕೊನೆಯ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಸೋತಿರುವ ಗುಜರಾತ್‌, ತಂಡವು ಇಂದು ಎಸ್‌ಆರ್‌ಎಚ್‌ ತಂಡವನ್ನು ಎದುರಿಸುತ್ತಿದೆ. ಅತ್ತ ಮುಂಬೈ ವಿರುದ್ಧ ಭರ್ಜರಿ ಜಯ ಸಾಧಿಸಿದ ಹೈದರಾಬಾದ್‌ ತಂಡ, ಇದೀಗ ಗುಜರಾತ್‌ ಮಣಿಸಲು ಸಜ್ಜಾಗಿದೆ. ಉಭಯ ತಂಡಗಳು ಟೂರ್ನಿಯಲ್ಲಿ ಎರಡನೇ ಗೆಲುವಿಗೆ ಎದುರು ನೋಡುತ್ತಿವೆ. ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ವರದಿ ಹಾಗೂ ಅಹಮದಾಬಾದ್‌ ಹವಾಮಾನ ವರದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

IPL_Entry_Point