ಕನ್ನಡ ಸುದ್ದಿ  /  Cricket  /  Cricket Updates Of March 30 Ipl 2024 Mumbai Indians Vs Rajasthan Royals Live Updates Mi Vs Rr Indian Premier League Jra

MI vs RR Latest Updates: ಮುಂಬೈ‌ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್

IPL 2024 Updates: ಐಪಿಎಲ್‌ 2024ರ ಆವೃತ್ತಿಯಲ್ಲಿ ಏಪ್ರಿಲ್‌ 1ರಂದು ಮುಂಬೈ ಇಂಡಿಯನ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ತಂಡಗಳು ಮುಖಾಮುಖಿಯಾಗುತ್ತಿವೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಪ್ರಸಕ್ತ ಆವೃತ್ತಿಯ ಮೊದಲ ಪಂದ್ಯ ನಡೆಯುತ್ತಿದ್ದು, ಮೊದಲ ಗೆಲುವಿಗೆ ಹಾರ್ದಿಕ್‌ ಪಾಂಡ್ಯ ಬಳಗ ಎದುರು ನೀಡುತ್ತಿದೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್‌ ಇಲ್ಲಿದೆ.

ಮುಂಬೈ‌ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್
ಮುಂಬೈ‌ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್

ಇಂಡಿಯನ್‌ ಪ್ರೀಮಿಯರ್‌ ಲೀಗ್‌ (Indian Premier League 2024) 17ನೇ ಆವೃತ್ತಿಯಲ್ಲಿ ಏಪ್ರಿಲ್‌ 1ರ ಸೋಮವಾರ ಒಂದು ಪಂದ್ಯ ನಡೆಯುತ್ತಿದೆ. ವಾಣಿಜ್ಯ ನಗರಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪ್ರಸಕ್ತ ಆವೃತ್ತಿಯ ಮೊದಲ ಪಂದ್ಯ ನಡೆಯುತ್ತಿದ್ದು, ತವರು ಮೈದಾನದಲ್ಲಿ ಮುಂಬೈ ಇಂಡಿಯನ್ಸ್‌ ತಂಡಕ್ಕೆ ರಾಜಸ್ಥಾನ್‌ ರಾಯಲ್ಸ್‌ (Mumbai Indians vs Rajasthan Royals) ತಂಡ ಸಾವಾಲೆಸೆಯಲು ಸಜ್ಜಾಗಿದೆ. ಟೂರ್ನಿಯಲ್ಲಿ ಉಭಯ ತಂಡಗಳು ಭಿನ್ನ ಫಲಿತಾಂಶ ಪಡೆದಿವೆ. ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ ತಂಡವು ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಹಾರ್ದಿಕ್‌ ಪಾಂಡ್ಯ ಬಳಗವು ಟೂರ್ನಿಯ ಮೊದಲ ಗೆಲುವಿಗೆ ಎದುರು ನೋಡುತ್ತಿದೆ. ತವರು ನೆಲದಲ್ಲಿ ಜಯದ ಹಳಿಗೆ ಮರಳುವ ನಿರೀಕ್ಷೆಯಲ್ಲಿದೆ.

ಮುಂಬೈ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್

ಐಪಿಎಲ್‌ 2024ರ ಆವೃತ್ತಿಯ 14ನೇ ಪಂದ್ಯದಲ್ಲಿಮುಂಬೈ ಇಂಡಿಯನ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ನಾಯಕ ಸಂಜು ಸ್ಯಾಮ್ಸನ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳ ಆಡುವ ಬಳಗದ ವಿವರ ಇಲ್ಲಿದೆ. ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ರಾಜಸ್ಥಾನ್ ರಾಯಲ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ

ಮೊದಲ ಗೆಲುವಿನ ನಿರೀಕ್ಷೆಯಲ್ಲಿರುವ ಎಂಐ, ತನ್ನ ತಂಡದಲ್ಲಿ ಹಲವು ಬದಲಾವಣೆ ಮಾಡಲು ನಿರ್ಧರಿಸಿದೆ. ಮೊದಲ ತವರಿನ ಪಂದ್ಯದಲ್ಲಿಉತ್ತಮ ಪ್ರದರ್ಶನ ನೀಡಲು ಎದುರು ನೋಡುತ್ತಿದೆ. ತನ್ನ ಚೊಚ್ಚಲ ಐಪಿಎಲ್ ಪಂದ್ಯದಲ್ಲಿ 66 ರನ್‌ ಬಿಟ್ಟುಕೊಟ್ಟ ದಕ್ಷಿಣ ಆಫ್ರಿಕಾದ 17 ವರ್ಷದ ಯುವ ಆಟಗಾರ ಕ್ವೆನಾ ಮಫಕಾ, ಆಡುವ 11ರ ಬಳಗದಲ್ಲಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ. ರೊಮಾರಿಯೋ ಶೆಫರ್ಡ್ ಆತನ ಸ್ಥಾನ ತುಂಬುವ ಸಾಧ್ಯತೆ ಇದೆ. ತಂಡದ ಸಂಭಾವ್ಯ ಆಡುವ ಬಳಗ ನೋಡಲು ಇಲ್ಲಿ ಕ್ಲಿಕ್‌ ಮಾಡಿ.

ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್; ವಾಂಖೆಡೆ ಸ್ಟೇಡಿಯಂ ಪಿಚ್, ಹವಾಮಾನ ವರದಿ ಹೀಗಿದೆ

ಮುಂಬೈ ಹಾಗೂ ರಾಜಸ್ಥಾನ್ ತಂಡಗಳು ಏಪ್ರಿಲ್ 1ರಂದು ಮುಖಾಮುಖಿಯಾಗುತ್ತಿವೆ. ಹಾರ್ದಿಕ್‌ ಪಾಂಡ್ಯ ನೇತೃತ್ವದ ಎಂಐ ತಂಡಕ್ಕೆ ತವರು ನೆಲದಲ್ಲಿ ಮೊದಲ ಪಂದ್ಯವಾಗಿದೆ. ವಾಂಖೆಡೆ ಕ್ರೀಡಾಂಗಣದ ಪಿಚ್ ಹಾಗೂ ವಾಣಿಜ್ಯ ನಗರಿ ಮುಂಬೈ ಹವಾಮಾನ ವರದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

IPL_Entry_Point