ಕನ್ನಡ ಸುದ್ದಿ  /  Cricket  /  Cricket Updates Today In Kannada March 28 Ipl 2024 Rr Vs Dc Rajasthan Royals Vs Delhi Capitals Latest News Jra

IPL 2024 Latest Updates: ರಾಜಸ್ಥಾನ vs ಡೆಲ್ಲಿ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಐಪಿಎಲ್ ಟಾಸ್, ಫಲಿತಾಂಶ ಸೇರಿ ಸಂಪೂರ್ಣ ವಿವರ

Indian Premier League 2024 Updates: ಐಪಿಎಲ್‌ 2024ರ ಆವೃತ್ತಿಯ 9ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಜೈಪುರದ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ಇಂದಿನ ಪಂದ್ಯ ನಡೆಯುತ್ತಿದು, ಪಂದ್ಯದ ಲೇಟೆಸ್ಟ್ ಅಪ್ಡೇಟ್‌ ಇಲ್ಲಿದೆ.

ರಾಜಸ್ಥಾನ್ ರಾಯಲ್ಸ್​ಗೆ ಸತತ 2ನೇ ಗೆಲುವು
ರಾಜಸ್ಥಾನ್ ರಾಯಲ್ಸ್​ಗೆ ಸತತ 2ನೇ ಗೆಲುವು (PTI)

ಇಂಡಿಯನ್‌ ಪ್ರೀಮಿಯರ್‌ ಲೀಗ್‌ 17ನೇ ಆವೃತ್ತಿಯಲ್ಲಿ ಮಾರ್ಚ್ 28ರ ಗುರುವಾರ ಸಂಜು ಸ್ಯಾಮ್ಸನ್‌ ನಾಯಕತ್ವದ ರಾಜಸ್ಥಾನ್‌ ರಾಯಲ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮುಖಾಮುಖಿಯಾಗುತ್ತಿವೆ. ರಾಜಸ್ಥಾನ ತಂಡವು ಟೂರ್ನಿಯಲ್ಲಿ ಗೆಲುವಿನೊಂದಿಗೆ ಅಭಿಯಾನ ಆರಂಭಿಸಿದ್ದು, ಅತ್ತ ಡೆಲ್ಲಿ ತಂಡವು ಮೊದಲ ಪಂದ್ಯದಲ್ಲಿ ಸೋತಿದೆ. ಅಪಘಾತದಿಂದ ಚೇತರಿಸಿಕೊಂಡಿರುವ ರಿಷಭ್‌ ಪಂತ್, ಬರೋಬ್ಬರಿ 14 ತಿಂಗಳ ಬಳಿಕ ಮೈದಾನಕ್ಕಿಳಿಯುತ್ತಿದ್ದು, ಪ್ರಸಕ್ತ ಆವೃತ್ತಿಯಲ್ಲಿ ಮೊದಲ ಗೆಲುವಿಗೆ ಎದುರು ನೋಡುತ್ತಿದ್ದಾರೆ.

ರಾಜಸ್ಥಾನ್ ರಾಯಲ್ಸ್​ಗೆ ಸತತ 2ನೇ ಗೆಲುವು

ರಿಯಾನ್ ಪರಾಗ್ (84*) ಅವರ ಭರ್ಜರಿ ಪ್ರದರ್ಶನದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ರಾಜಸ್ಥಾನ್ ರಾಯಲ್ಸ್ 12 ರನ್​​ಗಳ ಅಮೋಘ ಗೆಲುವು ಸಾಧಿಸಿದೆ. 17ನೇ ಆವೃತ್ತಿಯಲ್ಲಿ ಸತತ ಎರಡನೇ ಜಯ ಸಾಧಿಸಿದ ಆರ್​ಆರ್, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮತ್ತೊಂದೆಡೆ ರಿಷಭ್ ಪಂತ್ ನೇತೃತ್ವದ ತಂಡವುಯ ಸತತ ಎರಡನೇ ಸೋಲು ಕಂಡಿದ್ದು, 8ನೇ ಸ್ಥಾನದಲ್ಲಿದೆ. ಪ್ರಸಕ್ತ ಆವೃತ್ತಿಯ ಶ್ರೀಮಂತ ಲೀಗ್​ನಲ್ಲಿ ಈವರೆಗೂ ನಡೆದ ಪಂದ್ಯಗಳ ಪೈಕಿ ತವರಿನ ತಂಡಗಳೇ ಗೆದ್ದಿರುವುದು ವಿಶೇಷ. ಸಂಪೂರ್ಣ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ರಾಜಸ್ಥಾನ್ ರಾಯಲ್ ವಿರುದ್ಧ ಕಣಕ್ಕಿಳಿದು ವಿಶ್ವದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್​

ಐಪಿಎಲ್​ನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಕಣಕ್ಕಿಳಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. 26ರ ಹರೆಯದ ಆಟಗಾರ, ಡೆಲ್ಲಿ ಪರ 100 ಐಪಿಎಲ್ ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟಿಗನಾಗಿದ್ದಾರೆ. ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ರಾಜಸ್ಥಾನ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಫೀಲ್ಡಿಂಗ್‌; ತಂಡದಲ್ಲಿ ಎರಡು ಬದಲಾವಣೆ

ರಾಜಸ್ಥಾನ್ ರಾಯಲ್ಸ್ ತವರು ಮೈದಾನ ಜೈಪುರದ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಇಶಾನ್‌ ಕಿಶನ್‌ ಮತ್ತು ಶಾಯ್‌ ಹೋಪ್‌ ಗಾಯದಿಂದ ಹೊರಬಿದ್ದಿದ್ದಾರೆ. ಅನ್ರಿಚ್ ನಾರ್ಟ್ಜೆ ಮತ್ತು ಮುಖೇಶ್ ಕುಮಾರ್ ತಂಡ ಸೇರಿಕೊಂಡಿದ್ದಾರೆ. ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಡೆಲ್ಲಿ ಮತ್ತು ರಾಜಸ್ಥಾನ ಮುಖಾಮುಖಿ ದಾಖಲೆ ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ

ರಾಜಸ್ಥಾನ ರಾಯಲ್ಸ್‌ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ಪಿಚ್, ಹವಾಮಾನ ಹಾಗೂ ಲೈವ್‌ ಸ್ಟ್ರೀಮಿಂಗ್‌ ವಿವರ

ಮಾರ್ಚ್ 28ರಂದು ನಡೆಯಲಿರುವ ಐಪಿಎಲ್‌ 2024ರ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಜೈಪುರದಲ್ಲಿ ನಡೆಯುವ ಪಂದ್ಯದ ಪಿಚ್‌, ಹವಾಮಾನ ಹಾಗೂ ಲೈವ್‌ ಸ್ಟ್ರೀಮಿಂಗ್‌ ವಿವರ ಇಲ್ಲಿದೆ. ಸಂಪೂರ್ಣ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ