IPL 2024 Latest Updates: ಆರ್​​ಸಿಬಿ vs ಕೆಕೆಆರ್​ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಮಾರ್ಚ್ 29ರ ಐಪಿಎಲ್ ಸುದ್ದಿಗಳ ಗುಚ್ಛ ಇಲ್ಲಿದೆ
ಕನ್ನಡ ಸುದ್ದಿ  /  ಕ್ರಿಕೆಟ್  /  Ipl 2024 Latest Updates: ಆರ್​​ಸಿಬಿ Vs ಕೆಕೆಆರ್​ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಮಾರ್ಚ್ 29ರ ಐಪಿಎಲ್ ಸುದ್ದಿಗಳ ಗುಚ್ಛ ಇಲ್ಲಿದೆ

IPL 2024 Latest Updates: ಆರ್​​ಸಿಬಿ vs ಕೆಕೆಆರ್​ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಮಾರ್ಚ್ 29ರ ಐಪಿಎಲ್ ಸುದ್ದಿಗಳ ಗುಚ್ಛ ಇಲ್ಲಿದೆ

IPL 2024 Updates: ಐಪಿಎಲ್‌ 2024 ಆವೃತ್ತಿಯು 10ನೇ ಪಂದ್ಯದಲ್ಲಿ ಆರ್​​ಸಿಬಿ ಮತ್ತು ಕೆಕೆಆರ್​​ ತಂಡಗಳು ಮುಖಾಮುಖಿಯಾಗುತ್ತಿವೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಈ ಹೈವೋಲ್ಟೇಜ್ ಕದನ ನಡೆಯಲಿದ್ದು, ಪಂದ್ಯದ ಲೇಟೆಸ್ಟ್ ಅಪ್ಡೇಟ್‌ ಜೊತೆಗೆ ಐಪಿಎಲ್​​ಗೆ ಸಂಬಂಧಿಸಿದ ಅಪ್ಡೇಟ್​​ಗಳ ವಿವರ ಇಲ್ಲಿದೆ.

ಆರ್​​ಸಿಬಿ vs ಕೆಕೆಆರ್​ ಪಂದ್ಯದ ಲೇಟೆಸ್ಟ್ ಅಪ್ಡೇಟ್
ಆರ್​​ಸಿಬಿ vs ಕೆಕೆಆರ್​ ಪಂದ್ಯದ ಲೇಟೆಸ್ಟ್ ಅಪ್ಡೇಟ್

ಇಂಡಿಯನ್‌ ಪ್ರೀಮಿಯರ್‌ ಲೀಗ್‌ 17ನೇ ಆವೃತ್ತಿಯಲ್ಲಿ ಮಾರ್ಚ್ 29ರ ಶುಕ್ರವಾರ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಸೆಣಸಾಟ ನಡೆಸಲಿವೆ. ತಲಾ ಒಂದು ಸೋಲು-ಗೆಲುವು ಕಂಡಿರುವ ಆರ್​ಸಿಬಿ, ಸತತ ಎರಡನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಮತ್ತೊಂದೆಡೆ ಕೆಕೆಆರ್​ ಆಡಿದ ಮೊದಲ ಪಂದ್ಯದಲ್ಲೇ ಜಯದ ನಗೆ ಬೀರಿದೆ. ಅದೇ ಲಯ ಮುಂದುವರೆಸಲು ಸಜ್ಜಾಗಿದೆ. ಬ್ಯಾಟಿಂಗ್​ಗೆ ನೆರವಾಗಿರುವ ಬೆಂಗಳೂರು ಪಿಚ್​​ನಲ್ಲಿ ಹೈಸ್ಕೋರಿಂಗ್ ಗೇಮ್ ಅನ್ನು ನಿರೀಕ್ಷಿಸಲಾಗಿದೆ.

ಆರ್​ಸಿಬಿ ತಂಡವನ್ನು ಟೀಕಿಸಿದ ಗಂಭೀರ್​

ಇಂಡಿಯನ್ ಪ್ರೀಮಿಯರ್​ ಲೀಗ್​​ನಲ್ಲಿ ನಾನು ಸೋಲಿಸಲು ಬಯಸುವ ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಒಂದು ಎಂದು ಆರ್​ಸಿಬಿ ಎದುರಿನ ಪಂದ್ಯಕ್ಕೂ ಮುನ್ನ ಕೋಲ್ಕತ್ತಾ ನೈಟ್​ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಹೇಳಿದ್ದಾರೆ. ಸ್ಟಾರ್ ಸ್ಪೋರ್ಟ್ಸ್​ನಲ್ಲಿ ಮಾತನಾಡಿರುವ ಗಂಭೀರ್, ಹಿಂದೆಂದೂ ಮಾತನಾಡದ ವಿಷಯಗಳ ಕುರಿತು ಬಹಿರಂಗಪಡಿಸಿದ್ದಾರೆ. ಆ ಕುರಿತ ವಿವರ ಇಲ್ಲಿದೆ ನೋಡಿ.

ಆರ್​ಸಿಬಿ ವಿರುದ್ಧ ಟಾಸ್ ಗೆದ್ದ ಕೆಕೆಆರ್​ 

ಐಪಿಎಲ್​ 2024ರ 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಹೈವೋಲ್ಟೇಜ್ ಕದನಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನ ವೇದಿಕೆ ಕಲ್ಪಿಸುತ್ತಿದೆ. ಮೊದಲು ಬ್ಯಾಟಿಂಗ್ ನಡೆಸುವ ಆರ್​​ಸಿಬಿ ಬೃಹತ್ ಗುರಿ ನೀಡುವ ಲೆಕ್ಕಾಚಾರದಲ್ಲಿದೆ. ಪ್ಲೇಯಿಂಗ್ ಇಲೆವೆನ್, ಇಂಪ್ಯಾಕ್ಟ್ ಪ್ಲೇಯರ್ಸ್ ಸೇರಿದಂತೆ ಟಾಸ್ ಕುರಿತ ಸಂಪೂರ್ಣ ವರದಿ ಇಲ್ಲಿದೆ, ಕ್ಲಿಕ್​ ಮಾಡಿ

ಆರ್‌ಸಿಬಿ vs ಕೆಕೆಆರ್ ನಡುವೆ ಗೆಲ್ಲೋರ್ಯಾರು?

ಆರ್‌ಸಿಬಿ ತಂಡವು ಆಡಿರುವ 2 ಪಂದ್ಯಗಳಲ್ಲಿ, ಪಂಜಾಬ್‌ ವಿರುದ್ದದ ಕೊನೆಯ ಪಂದ್ಯ ಗೆದ್ದು 2 ಅಂಕ ಸಂಪಾದಿಸಿದೆ. ತಂಡವು ಸದ್ಯ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದರೆ, ಕೋಲ್ಕತಾ 1 ಪಂದ್ಯದಿಂದ 2 ಅಂಕ ಗಳಿಸಿ 4ನೇ ಸ್ಥಾನದಲ್ಲಿದೆ. ಉಭಯ ತಂಡಗಳು ಈವರೆಗೆ ಐಪಿಎಲ್‌ನಲ್ಲಿ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಬೆಂಗಳೂರು ತಂಡವು 14 ಪಂದ್ಯಗಳಲ್ಲಿ ಗೆದ್ದಿದ್ದರೆ, ಕೋಲ್ಕತಾ 18 ಪಂದ್ಯಗಳಲ್ಲಿ ಜಯಭೇರಿ ಬಾರಿಸಿ ಮುನ್ನಡೆ ಕಾಯ್ದುಕೊಂಡಿದೆ. ಈ ಕುರಿತು ಸಂಪೂರ್ಣ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಪ್ಲೇಯಿಂಗ್​ ಇಲೆವೆನ್ XI

ಹೈವೋಲ್ಟೇಜ್ ಕದನಕ್ಕೆ ಆರ್​ಸಿಬಿ, ತನ್ನ ಆಡುವ 11ರ ಬಳಗದಲ್ಲಿ ಒಂದು ಬದಲಾವಣೆ ಮಾಡುವುದು ಖಚಿತ. ಬೆಂಗಳೂರು ಆಡಿರುವ ಮೊದಲ 2 ಪಂದ್ಯಗಳಲ್ಲಿ ಅವಕಾಶ ಪಡೆದಿದ್ದ ವೇಗದ ಬೌಲರ್​ ಅಲ್ಜಾರಿ ಜೋಸೆಫ್ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ ವಿರುದ್ಧ 3.4 ಓವರ್​​ಗಳಲ್ಲಿ 38 ರನ್ ಚಚ್ಚಿಸಿಕೊಂಡಿದ್ದ ಜೋಸೆಫ್​, ಪಂಜಾಬ್ ಕಿಂಗ್ಸ್ ಎದುರು 43 ರನ್ ನೀಡಿದ್ದರು. ಆದರೆ ವಿಕೆಟ್ ಪಡೆದಿದ್ದು 1 ಮಾತ್ರ. ಬೌಲಿಂಗ್​​​ನಲ್ಲಿ ಪ್ರದರ್ಶನ ನೀಡದ ಕಾರಣ ಕೆಕೆಆರ್​ ವಿರುದ್ಧ ಕೈಬಿಡಲು ಆರ್​ಸಿಬಿ ನಿರ್ಧರಿಸಿದೆ. ಈ ಕುರಿತ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ.

ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ

ಫಿಲ್ ಸಾಲ್ಟ್ (ವಿಕೆಟ್ ಕೀಪರ್​), ಸುನಿಲ್ ನರೈನ್, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಆಂಡ್ರೆ ರಸೆಲ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಸುಯಶ್ ಶರ್ಮಾ.

ಆರ್​ಸಿಬಿ ಪ್ಲೇಯಿಂಗ್ ಸಂಭಾವ್ಯ ತಂಡ

ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಕ್ಯಾಮರೂನ್ ಗ್ರೀನ್, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್​ವೆಲ್, ಅನೂಜ್ ರಾವತ್, ದಿನೇಶ್ ಕಾರ್ತಿಕ್, ರೀಸ್ ಟೋಪ್ಲಿ/ಲಾಕಿ ಫರ್ಗ್ಯುಸನ್, ಮಯಾಂಕ್ ಡಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ಕಣ್ಣಲ್ಲೇ ಕದನಕ್ಕೆ ಕಹಳೆ ಊದಿದ ಕೊಹ್ಲಿ-ಗಂಭೀರ್

ಕೆಕೆಆರ್​ ಮತ್ತು ಆರ್​​ಸಿಬಿ ತಂಡಗಳು ಬೆಂಗಳೂರಿನಲ್ಲಿ ಮುಖಾಮುಖಿಯಾಗಲು ತಯಾರಿ ನಡೆಸುತ್ತಿರುವ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಗಂಭೀರವಾಗಿ ನೋಡುತ್ತಿರುವ ಫೋಟೋವನ್ನು ಕೋಲ್ಕತ್ತಾ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡು ಪೈಪೋಟಿಗೆ ಅನುಮೋದನೆ ನೀಡಿದೆ. ಇದರ ಸಂಪೂರ್ಣ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.

ಗಂಭೀರ್-ವಿರಾಟ್ ಕಾಳಗದ ಕುರಿತು ಹೇಳಿದ ವರುಣ್ ಆರೋನ್

ಕೊಹ್ಲಿ ಮತ್ತು ಗಂಭೀರ್ ನಡುವಿನ ಪೈಪೋಟಿ ವಿಚಾರವಾಗಿ ಆರ್​​ಸಿಬಿ ತಂಡದ ಮಾಜಿ ವೇಗಿ ವರುಣ್ ಆರೋನ್, ಪ್ರತಿಕ್ರಿಯಿಸಿದ್ದಾರೆ. ಕೊಹ್ಲಿ ಮತ್ತು ಗಂಭೀರ್ ಮುಖಾಮುಖಿಯಾದಾಗ ವಾತಾವರಣ ಹೇಗಿರುತ್ತದೆ ಎಂಬುದರ ಕುರಿತು ವಿವರಿಸಿದ್ದಾರೆ. ಇಬ್ಬರ ಮುಖಾಮುಖಿಗೆ ನಾನು ಕೂಡ ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ಇದರ ಸಂಪೂರ್ಣ ವಿವರಕ್ಕಾಗಿ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Whats_app_banner