ಕನ್ನಡ ಸುದ್ದಿ  /  Cricket  /  Delhi Capitals Women Have Won The Toss And Have Opted To Bat Against Royal Challengers Bangalore In Wpl 2024 Prs

ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್​ ಆಯ್ಕೆ, ಆರ್​​ಸಿಬಿ ತಂಡದಲ್ಲಿ ಮೂರು ಬದಲಾವಣೆ; ಪ್ಲೇಆಫ್ ದೃಷ್ಟಿಯಿಂದ ಉಭಯ ತಂಡಗಳಿಗೂ ಮಹತ್ವ ಈ ಪಂದ್ಯ

RCB vs DC WPL 2024 : ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್​ ಆಯ್ಕೆ, ಆರ್​​ಸಿಬಿ ತಂಡದಲ್ಲಿ ಮೂರು ಬದಲಾವಣೆ
ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್​ ಆಯ್ಕೆ, ಆರ್​​ಸಿಬಿ ತಂಡದಲ್ಲಿ ಮೂರು ಬದಲಾವಣೆ

ಮಹಿಳಾ ಪ್ರೀಮಿಯರ್​​ ಲೀಗ್​-2024ರ 17ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯ ಜರುಗುತ್ತಿದ್ದು, ಎರಡೂ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ. ಮೆಗ್ ಲ್ಯಾನಿಂಗ್​ ಪಡೆಯ ವಿರುದ್ಧ ಕಳೆದ ಪಂದ್ಯದ ಮುಖಾಮುಖಿಯಲ್ಲಿ ಸೋತಿದ್ದ ಸ್ಮೃತಿ ಮಂಧಾನ ಪಡೆ, ಇದೀಗ ಸೇಡು ತೀರಿಸಿಕೊಳ್ಳಲು ಮುಂದಾಗಿದೆ.

ಉಭಯ ತಂಡಗಳ ಬದಲಾವಣೆ ಏನು?

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಪ್ರಮುಖ ಒಂದು ಬದಲಾವಣೆಯಾಗಿದೆ. ಖಡಕ್ ಆಲ್​ರೌಂಡರ್​ ಮಾರಿಜನ್ ಕಪ್​ ತಂಡಕ್ಕೆ ಮರಳಿದ್ದಾರೆ. ಮತ್ತೊಂದೆಡೆ ಆರ್​ಸಿಬಿ ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದೆ. ಶ್ರೇಯಾಂಕಾ ಪಾಟೀಲ್, ಶ್ರದ್ಧಾ ಪೋಖರ್ಕರ್, ದಿಶಾ ಕಸತ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಏಕ್ತಾ ಬಿಷ್, ಸಿಮ್ರಾನ್ ಬಹದ್ದೂರ್ ಮತ್ತು ಸಬ್ಬಿನೇನಿ ಮೇಘನಾ ಅವರನ್ನು ಕೈಬಿಡಲಾಗಿದೆ.

ಡೆಲ್ಲಿ ಗೆದ್ದರೆ ಪ್ಲೇ ಆಫ್​ಗೆ

ರಾಯಲ್ ಚಾಲೆಂಜರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಜಯಿಸಿದರೆ ನಾಕೌಟ್​ಗೆ ಅಧಿಕೃತವಾಗಿ ಪ್ರವೇಶಿಸಲಿದೆ. ಆ ಮೂಲಕ 2ನೇ ಆವೃತ್ತಿಯಲ್ಲಿ ಎರಡನೇ ತಂಡವಾಗಿ ಪ್ಲೇಆಫ್​ಗೆ ಎಂಟ್ರಿಕೊಡಲಿದೆ. ಆಡಿರುವ 6 ಪಂದ್ಯಗಳಲ್ಲಿ 4 ಗೆಲುವು, 2 ಸೋಲು ಕಂಡಿದೆ. ಇನ್ನು ಆರ್​​ಸಿಬಿ ಆಡಿರುವ 6 ಪಂದ್ಯಗಳಲ್ಲಿ 3 ಗೆಲುವು, 3 ಸೋಲು ಕಂಡಿದೆ. ಇಂದು ಜಯದ ನಗೆ ಬೀರಿದರೆ ಪ್ಲೇಆಫ್ ಸುಗಮವಾಗಿರಲಿದೆ.

ಮೊದಲ ಮುಖಾಮುಖಿಯಲ್ಲಿ ಗೆದ್ದಿತ್ತು ಡೆಲ್ಲಿ

ಈ ಲೀಗ್​​ನಲ್ಲಿ ಮುಖಾಮುಖಿಯಾದ ಮೊದಲ ಪಂದ್ಯದಲ್ಲಿ ಆರ್​​ಸಿಬಿ ವಿರುದ್ಧ ಡೆಲ್ಲಿ ಭರ್ಜರಿ 25 ರನ್​ಗಳ ಗೆಲುವು ಸಾಧಿಸಿತ್ತು. ಈ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿತ್ತು. ಮೊದಲು ಬ್ಯಾಟಿಂಗ್ ನಡೆಸಿದ್ದ ಡೆಲ್ಲಿ 20 ಓವರ್​​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 194 ರನ್ ಕಲೆ ಹಾಕಿತ್ತು. ಈ ಗುರಿ ಚೇಸ್ ಮಾಡಿದ ಬೆಂಗಳೂರು 5 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ ಸೋಲನುಭವಿಸಿತ್ತು. ಈಗ ಸೋಲಿನ ಸೇಡಿಗೆ ಸಜ್ಜಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI)

ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ದಿಶಾ ಕಸತ್, ಜಾರ್ಜಿಯಾ ವಾರೆಹಮ್, ಸೋಫಿ ಮೊಲಿನೆಕ್ಸ್, ಶ್ರೇಯಾಂಕಾ ಪಾಟೀಲ್, ಆಶಾ ಸೋಭಾನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಠಾಕೂರ್

ಡೆಲ್ಲಿ ಕ್ಯಾಪಿಟಲ್ಸ್ (ಆಡುವ XI)

ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸ್ಸೆನ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಶಿಖಾ ಪಾಂಡೆ, ರಾಧಾ ಯಾದವ್, ಟಿಟಾಸ್ ಸಾಧು.

ಲೈವ್‌ ಸ್ಟ್ರೀಮಿಂಗ್‌ ವಿವರ

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್‌ ತಂಡಗಳ ನಡುವಿನ ಡಬ್ಲ್ಯೂಪಿಎಲ್‌ ಪಂದ್ಯವನ್ನು ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಇಲ್ಲಿ ಪಂದ್ಯವನ್ನು ಸಂಪೂರ್ಣ ಉಚಿತವಾಗಿ ವೀಕ್ಷಿಸಬಹುದು. ಟಿವಿ ಮೂಲಕ ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಕ್ರಿಕೆಟ್‌ ಕುರಿತ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

(This copy first appeared in Hindustan Times Kannada website. To read more like this please logon to kannada.hindustantimes.com)