ಎರಡನೇ ಸೆಮಿಫೈನಲ್ನಲ್ಲಿ ಟಾಸ್ ಸೋತ ಭಾರತ, ಇಂಗ್ಲೆಂಡ್ ಬೌಲಿಂಗ್ ಆಯ್ಕೆ; ಬಲಿಷ್ಠ ಪ್ಲೇಯಿಂಗ್ XI ಇಲ್ಲಿದೆ
India vs England : ಐಸಿಸಿ ಟಿ20 ವಿಶ್ವಕಪ್ 2024 ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಐಸಿಸಿ ಟಿ20 ವಿಶ್ವಕಪ್ 2024 ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಾಟ ನಡೆಸುತ್ತಿವೆ. ಗಯಾನಾದ ಪ್ರಾವಿಡೆನ್ಸ್ ಕ್ರಿಕೆಟ್ ಮೈದಾನದಲ್ಲಿ ಜಗುತ್ತಿರುವ ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇಲ್ಲಿ ಗೆದ್ದ ತಂಡವು ಜೂನ್ 29ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ.
2022ರ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಮಣಿಸಿ ಇಂಗ್ಲೆಂಡ್ ಫೈನಲ್ ಪ್ರವೇಶಿಸಿತ್ತು. ಈಗ ಆ ಪಂದ್ಯದ ಸೋಲಿನ ಸೇಡು ತೀರಿಸಿಕೊಳ್ಳಲು ರೋಹಿತ್ ಪಡೆ ಸಜ್ಜಾಗಿದೆ. ಟಾಸ್ ಪ್ರಕ್ರಿಯೆ 7.30ಕ್ಕೆ ಆರಂಭವಾಗಬೇಕಿತ್ತು. ನಿರಂತರ ಮಳೆಯ ಕಾರಣದಿಂದ ವಿಳಂಬವಾಯಿತು. ಹೀಗಾಗಿ 8.50ರ ಸಮಯಕ್ಕೆ ಟಾಸ್ ಪ್ರಕ್ರಿಯೆ ನಡೆಯಿತು. ಇದೀಗ ಕಳೆದ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ನಡೆಸಿಯೇ ಪಂದ್ಯಗಳನ್ನು ಗೆದ್ದುಕೊಂಡಿತ್ತು.
ಭಾರತ (ಪ್ಲೇಯಿಂಗ್ XI)
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ
ಇಂಗ್ಲೆಂಡ್ (ಪ್ಲೇಯಿಂಗ್ XI)
ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್/ನಾಯಕ), ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟನ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲಿ.
ಇನ್ನಷ್ಟು ಟಿ20 ವಿಶ್ವಕಪ್ 2024 ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ