India vs Australia: ವಿಶ್ವಕಪ್‌ಗೆ ಅಂತಿಮ ಸಿದ್ಧತೆ; ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಏಕದಿನ ಫೈಟ್; ಯಾವ ತಂಡ ಬಲಿಷ್ಠ?
ಕನ್ನಡ ಸುದ್ದಿ  /  ಕ್ರಿಕೆಟ್  /  India Vs Australia: ವಿಶ್ವಕಪ್‌ಗೆ ಅಂತಿಮ ಸಿದ್ಧತೆ; ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಏಕದಿನ ಫೈಟ್; ಯಾವ ತಂಡ ಬಲಿಷ್ಠ?

India vs Australia: ವಿಶ್ವಕಪ್‌ಗೆ ಅಂತಿಮ ಸಿದ್ಧತೆ; ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಏಕದಿನ ಫೈಟ್; ಯಾವ ತಂಡ ಬಲಿಷ್ಠ?

ನಾಳೆ (ಸೆಪ್ಟೆಂಬರ್ 22, ಶುಕ್ರವಾರ) ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ನಡೆಯಲಿದೆ. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಎರಡೂ ತಂಡಗಳು ಒಟ್ಟು 146 ಬಾರಿ ಮುಖಾಮುಖಿಯಾಗಿದ್ದು, ಪ್ರಸ್ತುತ ಯಾವ ತಂಡ ಬಲಿಷ್ಠವಾಗಿದೆ ಅನ್ನೋದರ ಮಾಹಿತಿ ಇಲ್ಲಿದೆ.

ಸೆಪ್ಟೆಂಬರ್ 22 ರಂದ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ನಡೆಯಲಿದೆ
ಸೆಪ್ಟೆಂಬರ್ 22 ರಂದ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ನಡೆಯಲಿದೆ

ಮೊಹಾಲಿ (ಪಂಜಾಬ್): ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ 3 ಪಂದ್ಯಗಳ ಏಕದಿನ ಸರಣಿ (3 ODI Series) ಸೆಪ್ಟೆಂಬರ್ 22 ರಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ (Mohali) ಇರುವ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಮುಂಬರುವ ಐಸಿಸಿ ಏಕದಿನ ವಿಶ್ವಕಪ್ (ICC ODI World Cup 2023) ದೃಷ್ಟಿಯಿಂದ ಎರಡೂ ತಂಡಗಳಿಗೆ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಬಿಸಿಸಿಐ (BCCI) ಇತ್ತೀಚೆಗೆ ಆಸ್ಟ್ರೇಲಿಯಾ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ.

ಮೊದಲೆರಡು ಪಂದ್ಯಗಳಿಂದ ಟೀಂ ಇಂಡಿಯಾದ (Team India) ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಕನ್ನಡಿಗ ಕೆಎಲ್ ರಾಹುಲ್ (KL Rahul) ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ, ಮೊಹಾಲಿಯಲ್ಲಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಹಣಾಹಣಿ ಕಂಡುಬರುವ ಸಾಧ್ಯತೆ ಇದೆ. ಮೊಹಾಲಿಯಲ್ಲಿ ಯಾವ ತಂಡಕ್ಕೆ ಸಂಕಷ್ಟ, ಯಾವ ತಂಡ ಮೇಲುಗೈ ಸಾಧಿಸಬಹುದು ಎಂಬುದರ ಲೆಕ್ಕಾಚಾರವನ್ನು ನೋಡೋಣ.

ಆಸ್ಟ್ರೇಲಿಯಾ ತಂಡ ಬಲಿಷ್ಠ ಆದರೆ ಭಾರತವನ್ನ ಸೋಲಿಸುವುದ ಕಷ್ಟ

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಇದುವರೆಗೆ ಒಟ್ಟು 146 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಆಸ್ಟ್ರೇಲಿಯಾ 84 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಭಾರತ ತಂಡ 54 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. 10 ಪಂದ್ಯಗಳಲ್ಲಿ ಫಲಿತಾಂಶ ಬಂದಿಲ್ಲ. ಬೇರೆ ರೀತಿಯಲ್ಲಿ ಹೇಳುವುದಾದರೆ ಹೆಡ್ ಟು ಹೆಡ್ ಆಸ್ಟ್ರೇಲಿಯಾ ಪ್ರದರ್ಶನ ಇಲ್ಲಿಯವರೆಗೆ ಚೆನ್ನಾಗಿದೆ.

ಭಾರತದ ಪಿಚ್‌ಗಳಲ್ಲಿ ಟೀಂ ಇಂಡಿಯಾವನ್ನು ಸೋಲಿಸುವುದು ಸುಲಭವಲ್ಲ. ಇಂತಹ ಪರಿಸ್ಥಿತಿಯಲ್ಲಿ ಪಂದ್ಯ 50-50 ಆಗಬಹುದು. ಆದರೂ ಈ ವರ್ಷದ ಆರಂಭದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆದಿದೆ. ಆಸ್ಟ್ರೇಲಿಯಾ ಆ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತ್ತು.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ

ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಇಶಾನ್‌ ಕಿಶನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್,

3 ಪಂದ್ಯಗಳ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್‌ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮೆಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮೆಚೆಲ್ ಮಾರ್ಷ್ ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.

Whats_app_banner