ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ; ತನಿಖೆ ಚುರುಕು
ಕನ್ನಡ ಸುದ್ದಿ  /  ಕ್ರಿಕೆಟ್  /  ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ; ತನಿಖೆ ಚುರುಕು

ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ; ತನಿಖೆ ಚುರುಕು

ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಟೀಮ್‌ ಇಂಡಿಯಾ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (Sachin Tendulkar) ಭದ್ರತೆಗಾಗಿ ನಿಯೋಜಿಸಲಾಗಿದ್ದ ರಾಜ್ಯ ಮೀಸಲು ಪೊಲೀಸ್ ಪಡೆ (SRPF) ಸಿಬ್ಬಂದಿಯು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕಾಶ್ ಕಪ್ಡೆ ಎಂಬವರು ಮಹಾರಾಷ್ಟ್ರದ ಜಾಮ್ನರ್‌ ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಆಪ್ತ ಮೂಲಗಳು ಹಿಂದೂಸ್ತಾನ್ ಟೈಮ್ಸ್‌ಗೆ ದೃಢಪಡಿಸಿವೆ. ಕಪ್ಡೆ ಅವರು ಕರ್ತವ್ಯಕ್ಕಾಗಿ ನೀಡಲಾಗಿದ್ದ ಗನ್ ಬಳಸಿ ಕುತ್ತಿಗೆ ಭಾಗಕ್ಕೆ ಗುಂಡು ಹಾರಿಸಿಕೊಂಡಿದ್ದಾರೆ. ಕಳೆದ ಮಧ್ಯರಾತ್ರಿ 1:30ರ ವೇಳೆಗೆ ಈ ಘಟನೆ ನಡೆದಿದೆ ಎಂದು ಜಾಮ್ನರ್‌ನ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಕಿರಣ್ ಶಿಂಧೆ ತಿಳಿಸಿದ್ದಾರೆ.

ಘಟನೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಘಟನೆಗೆ ಕಾರಣ ತಿಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಕುರಿತು ತನಿಖೆ ನಡೆಸುತ್ತಿರುವ ಕುರಿತು ಶಿಂಧೆ ಮಾಹಿತಿ ನೀಡಿದ್ದಾರೆ.

“ಪ್ರಾಥಮಿಕ ವಿಚಾರಣೆಯ ಪ್ರಕಾರ, ಅವರು ಕೆಲವು ಖಾಸಗಿ ಕಾರಣಗಳಿಂದಾಗಿ ಆತ್ಮಹತ್ಯೆಯ ಕಠಿಣ ನಿರ್ಧಾರ ತೆಗೆದುಕೊಂಡಿರುವ ಸಾಧ್ಯತೆ ಇದೆ. ತನಿಖೆಯ ಸಂಪೂರ್ಣ ವಿವರಗಳಿಗಾಗಿ ನಾವು ಇನ್ನೂ ಕಾಯುತ್ತಿದ್ದೇವೆ” ಎಂದು ಶಿಂಧೆ ಹೇಳಿದ್ದಾರೆ.

ಇದನ್ನೂ ಓದಿ | ಮಳೆಯಿಂದಾಗಿ ಕೆಕೆಆರ್‌ vs ಗುಜರಾತ್ ಪಂದ್ಯ ರದ್ದು; ಜಿಟಿ ಟೂರ್ನಿಯಿಂದ ಔಟ್‌, ಕ್ವಾಲಿಫೈಯರ್‌ಗೆ ಲಗ್ಗೆ ಇಟ್ಟ ಕೋಲ್ಕತ್ತಾ

ಎಸ್ಆರ್‌ಪಿಎಫ್ ತನಿಖೆ ಸಾಧ್ಯತೆ

39 ವರ್ಷದ ಕಪ್ಡೆ ಅವರು ಅವರು ಪೋಷಕರು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ದೇಶದ ಗಣ್ಯ ವ್ಯಕ್ತಿಯೊಬ್ಬರ ಭದ್ರತೆಗೆ ನಿಯೋಜಿಸಲಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವುದರಿಂದ, ಎಸ್ಆರ್‌ಪಿಎಫ್ ಈ ಕುರಿತು ಸ್ವತಂತ್ರ ತನಿಖೆ ಆರಂಭಿಸುವ ಸಾಧ್ಯತೆ ಇದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಪಡೆದಿರುವ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರಿಗೆ, ಭಾರತ ಸರ್ಕಾರವು ಭಾರತ ರತ್ನ ಗೌರವ ನೀಡಿದೆ. ಪ್ರಸ್ತುತ ಅವರು ಮುಂಬೈ ಇಂಡಿಯನ್ಸ್‌ ತಂಡದ ಭಾಗವಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಹಾಗೂ ಶತಕ ಸಿಡಿಸಿರುವ ದಾಖಲೆ ಈಗಲೂ ತೆಂಡೂಲ್ಕರ್‌ ಹೆಸರಲ್ಲಿದೆ.

Whats_app_banner