ಗುಜರಾತ್ vs ಡೆಲ್ಲಿ, ರಾಜಸ್ಥಾನ್ vs ಲಕ್ನೋ ಐಪಿಎಲ್ ಪಂದ್ಯದ ಪಿಚ್-ಹವಾಮಾನ ವರದಿ ಹಾಗೂ ಸಂಭಾವ್ಯ ತಂಡ
ಕನ್ನಡ ಸುದ್ದಿ  /  ಕ್ರಿಕೆಟ್  /  ಗುಜರಾತ್ Vs ಡೆಲ್ಲಿ, ರಾಜಸ್ಥಾನ್ Vs ಲಕ್ನೋ ಐಪಿಎಲ್ ಪಂದ್ಯದ ಪಿಚ್-ಹವಾಮಾನ ವರದಿ ಹಾಗೂ ಸಂಭಾವ್ಯ ತಂಡ

ಗುಜರಾತ್ vs ಡೆಲ್ಲಿ, ರಾಜಸ್ಥಾನ್ vs ಲಕ್ನೋ ಐಪಿಎಲ್ ಪಂದ್ಯದ ಪಿಚ್-ಹವಾಮಾನ ವರದಿ ಹಾಗೂ ಸಂಭಾವ್ಯ ತಂಡ

ವಾರಾಂತ್ಯದಲ್ಲಿ ಐಪಿಎಲ್‌ನಲ್ಲಿ ಎರಡೆರಡು ಪಂದ್ಯಗಳು ನಡೆಯುತ್ತಿವೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಎರಡು ತಂಡಗಳ ನಡುವಿನ ಕಾದಾಟ ರೋಚಕವಾಗಿರುವ ನಿರೀಕ್ಷೆ ಇದೆ. ಅತ್ತ ಸ್ಥಿರ ಪ್ರದರ್ಶನ ನೀಡಲು ವಿಫಲವಾಗಿರುವ ತಂಡಗಳು ಅದೃಷ್ಟ ಪರೀಕ್ಷೆ ನಡೆಸಲಿವೆ.

ಗುಜರಾತ್ vs ಡೆಲ್ಲಿ, ರಾಜಸ್ಥಾನ್ vs ಲಕ್ನೋ; ಪಿಚ್-ಹವಾಮಾನ ವರದಿ ಹಾಗೂ ಸಂಭಾವ್ಯ ತಂಡ
ಗುಜರಾತ್ vs ಡೆಲ್ಲಿ, ರಾಜಸ್ಥಾನ್ vs ಲಕ್ನೋ; ಪಿಚ್-ಹವಾಮಾನ ವರದಿ ಹಾಗೂ ಸಂಭಾವ್ಯ ತಂಡ (PTI)

ಐಪಿಎಲ್‌ 16ನೇ ಆವೃತ್ತಿಯ ಮೊದಲಾರ್ಧದ ಪಂದ್ಯಗಳು ಮುಕ್ತಾಯ ಹಂತಕ್ಕೆ ಬಂದಿವೆ. ಟೂರ್ನಿಯಲ್ಲಿ ನಾಳೆ (ಏಪ್ರಿಲ್‌ 19) ವಾರಾಂತ್ಯ ದಿನ ಆಗಿರುವುದರಿಂದ 2 ಪಂದ್ಯಗಳು ನಡೆಯುತ್ತಿವೆ. ದಿನದ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ. ದಿನದ ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಸಂಜೆ 7:30 ಪಂದ್ಯ ನಡೆಯಲಿದೆ.

ಗುಜರಾತ್‌ ಹಾಗೂ ಡೆಲ್ಲಿ ತಂಡಗಳು ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದಿವೆ. ಉಭಯ ತಂಡಗಳು ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲ 2 ಸ್ಥಾನಗಳನ್ನು ಪಡೆದಿದೆ. ಅತ್ತ ಎಲ್‌ಎಸ್‌ಜಿ ತಂಡ ಪಾಯಿಂಟ್‌ ಟೇಬಲ್‌ನಲ್ಲಿ ಐದನೇ ಸ್ಥಾನದಲ್ಲಿದ್ದರೆ, ಕೊನೆಯ 3 ಪಂದ್ಯಗಳಲ್ಲಿ ಸೋತ ರಾಜಸ್ಥಾನ 8ನೇ ಸ್ಥಾನ ಪಡೆದಿದೆ.

ದಿನದ ಎರಡೂ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ. ಇದೇ ವೇಳೆ ಜಿಯೋಹಾಟ್‌ಸ್ಟಾರ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌ ಇರಲಿದೆ.

ನರೇಂದ್ರ ಮೋದಿ ಕ್ರೀಡಾಂಗಣದ ಹವಾಮಾನ ವರದಿ

ಪಂದ್ಯದ ದಿನ ಮಧ್ಯಾಹ್ನ ಅಹಮದಾಬಾದ್‌ನಲ್ಲಿ ತಾಪಮಾನವು 41 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುವ ನಿರೀಕ್ಷೆಯಿದೆ. ಆರ್ದ್ರತೆ ಪ್ರಮಾಣ ಕೇವಲ 16 ಶೇಕಡದಷ್ಟಿದ್ದು, ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇಲ್ಲ.

ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ವರದಿ

ರನ್‌ ಗಳಿಸಲು ಹೆಸರಾಗಿರುವ ಸ್ಟೇಡಿಯಂನಲ್ಲಿ, ತಂಡಗಳು ಹೆಚ್ಚು ರನ್‌ ಗಳಿಸಲು ಎದುರು ನೋಡುತ್ತವೆ. ಟಿ20 ಸ್ವರೂಪದಲ್ಲಿ ಇಲ್ಲಿ ಟಾಸ್ ಗೆಲ್ಲುವ ತಂಡಗಳು ಮೊದಲು ಬೌಲಿಂಗ್ ಮಾಡಲು ಆದ್ಯತೆ ನೀಡುತ್ತವೆ. ಇಲ್ಲಿ ಚೇಸಿಂಗ್ ಸುಲಭ ಎಂಬುದು ಅಂಕಿ-ಅಂಶಗಳು ಹೇಳುತ್ತವೆ. ಆದರೆ, ಈ ಬಾರಿ ಇಲ್ಲಿ ನಡೆದ ಮೂರು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಗೆದ್ದಿವೆ. ಮೊದಲ ಇನ್ನಿಂಗ್ಸ್ ಸರಾಸರಿ ಸ್ಕೋರ್ 219 ತಲುಪಿದೆ.

ಸವಾಯಿ ಮಾನ್ಸಿಂಗ್ ಕ್ರೀಡಾಂಗಣ ಪಿಚ್‌ ವರದಿ

ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಬ್ಯಾಟರ್‌ ಹೆಚ್ಚು ರನ್‌ ಗಳಿಸಲು ಮುಂದಾಗುತ್ತಾರೆ. ಆರ್‌ಸಿಬಿ ವಿರುದ್ಧದ ಕೊನೆಯ ಪಂದ್ಯದಲ್ಲಿ, ಆರಂಭದಲ್ಲಿ ಪಿಚ್ ಸ್ವಲ್ಪ ನಿಧಾನಗತಿಯಲ್ಲಿತ್ತು. ಮೊದಲು ಬ್ಯಾಟಿಂಗ್‌ ಮಾಡಿದ್ದ ರಾಜಸ್ಥಾನ ರನ್‌ ಕಲೆ ಹಾಕಲು ಪರದಾಡಿತ್ತು. ಆದರೆ, ಚೇಸಿಂಗ್‌ ವೇಳೆ ಆರ್‌ಸಿಬಿ ಸರಾಗವಾಗಿ ಬ್ಯಾಟ್‌ ಬೀಸಿತು. ಹೀಗಾಗಿ ಟಾಸ್‌ ಗೆಲ್ಲುವ ತಂಡವು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಬಹುದು.

ಜೈಪುರ ಹವಾಮಾನ ವರದಿ

ಪಂದ್ಯದ ದಿನದಂದು ಜೈಪುರದಲ್ಲಿ ಮಳೆ ಬರುವ ಮುನ್ಸೂಚನೆ ಇಲ್ಲ. ಹೀಗಾಗಿ ಸಂಪೂರ್ಣ ಪಂದ್ಯ ನಡೆಯುವ ನಿರೀಕ್ಷೆ ಇದೆ. ಪಂದ್ಯದ ಸಮಯದಲ್ಲಿ ತಾಪಮಾನವು 30ರ ಆಸುಪಾಸಿನಲ್ಲಿ ಇರಲಿದೆ.

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ

ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಯಾನ್ ಪರಾಗ್, ನಿತೀಶ್ ರಾಣಾ, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಕುಮಾರ್ ಕಾರ್ತಿಕೇಯ, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ

ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ತಂಡ

ಐಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್‌ ಕೀಪರ್), ಡೇವಿಡ್ ಮಿಲ್ಲರ್, ಅಬ್ದುಲ್ ಸಮದ್, ಶಾರ್ದೂಲ್ ಠಾಕೂರ್, ಅವೇಶ್ ಖಾನ್, ಪ್ರಿನ್ಸ್ ಯಾದವ್, ದಿಗ್ವೇಶ್ ರಾಠಿ.

ಗುಜರಾತ್ ಟೈಟಾನ್ಸ್ ಸಂಭಾವ್ಯ ತಂಡ

ಸಾಯಿ ಸುದರ್ಶನ್, ಶುಭ್ಮನ್ ಗಿಲ್ (ನಾಯಕ), ಜೋಸ್ ಬಟ್ಲರ್, ಶೆರ್ಫೇನ್ ರುದರ್‌ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಅರ್ಷದ್ ಖಾನ್, ಮಾನವ್ ಸುತಾರ್, ರಶೀದ್ ಖಾನ್, ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ

ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಕರುಣ್ ನಾಯರ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮೋಹಿತ್ ಶರ್ಮಾ.

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.