ಯುಕೆ, ಯುಎಸ್ಎ, ಕೆನಡಾ, ಆಸ್ಟ್ರೇಲಿಯಾದಲ್ಲಿ ಐಪಿಎಲ್ ನೇರಪ್ರಸಾರ ವೀಕ್ಷಿಸುವುದು ಹೇಗೆ, ಲೈವ್ ಸ್ಟ್ರೀಮಿಂಗ್ ವಿವರ
ಐಪಿಎಲ್ ಜೋಶ್ ಶುರುವಾಗಿದ್ದು ಭಾರತದಲ್ಲಿ ಟೂರ್ನಿಯ ಅಬ್ಬರ ಆರಂಭವಾಗಿದೆ. ಇದೇ ವೇಳೆ ವಿದೇಶದಲ್ಲೂ ಐಪಿಎಲ್ ಪಂದ್ಯಾವಳಿ ವೀಕ್ಷಣೆಗೆ ಜೋಶ್ ಹೆಚ್ಚಾಗಿದೆ. ಹೀಗಾಗಿ ಯುಕೆ, ಯುಎಸ್ಎ, ಕೆನಡಾ, ಆಸ್ಟ್ರೇಲಿಯಾದಲ್ಲಿ ಐಪಿಎಲ್ ನೇರಪ್ರಸಾರ ವೀಕ್ಷಿಸುವುದು ಹೇಗೆ ಎಂದು ತಿಳಿಯೋಣ.

ಐಪಿಎಲ್ 18ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಇಂದಿನಿಂದ (ಮಾರ್ಚ್ 22) ಮೇ 25ರವರೆಗೆ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಕಲರವ ಮನೆ ಮಾಡಲಿದೆ. ಉದ್ಘಾಟನಾ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದ್ದು, ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಭಾರತದಲ್ಲಿ ಅಭಿಮಾನಿಗಳು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಐಪಿಎಲ್ 2025ರ ಎಲ್ಲಾ ಪಂದ್ಯಗಳನ್ನು ನೇರಪ್ರಸಾರ ವೀಕ್ಷಿಸಬಹುದು. ಇದೇ ವೇಳೆ ಜಿಯೋಹಾಟ್‌ಸ್ಟಾರ್ ಮೂಲಕ ಚಂದಾದಾರರಾಗಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.
ಐಪಿಎಲ್ ಪಂದ್ಯಾವಳಿಯಲ್ಲಿ ದೇಶ ವಿದೇಶಗಳ ಸ್ಟಾರ್ ಆಟಗಾರರು ಆಡುತ್ತಿದ್ದಾರೆ. ಹೀಗಾಗಿ ವಿದೇಶಗಳಲ್ಲಿಯೂ ಟೂರ್ನಿಯ ನೇರಪ್ರಸಾರ ಇರುತ್ತದೆ. ಹೀಗಾಗಿ ಬೇರೆ ಬೇರೆ ದೇಶಗಳಲ್ಲಿ ಐಪಿಎಲ್ ನೇರಪ್ರಸಾರ ಎಲ್ಲಿರಲಿದೆ ಎಂಬುದನ್ನು ನೋಡೋಣ.
ಭಾರತದಲ್ಲಿ ಐಪಿಎಲ್ ನೇರಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಭಾರತದಲ್ಲಿ ಐಪಿಎಲ್ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಸ್ಟಾರ್ ಸ್ಪೋರ್ಟ್ಸ್ ಪಂದ್ಯಾವಳಿಯ ಅಧಿಕೃತ ಪ್ರಸಾರಕವಾಗಿದ್ದು, ಬಹು ಭಾಷೆಗಳಲ್ಲಿ ಪ್ರಸಾರವನ್ನು ನೀಡುತ್ತದೆ. ಇದೇ ವೇಳೆ ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಹಾಗೂ ವೆಬ್‌ಸೈಟ್ ಮೂಲಕ ಡಿಜಿಟಲ್ ಸ್ಟ್ರೀಮಿಂಗ್ ಲಭ್ಯವಿರಲಿದೆ.
ಭಾರತ ಮಾತ್ರವಲ್ಲದೆ ಐಪಿಎಲ್ ಪಂದ್ಯಗಳನ್ನು ವಿದೇಶಗಳಿಂದಲೂ ಲೈವ್ ವೀಕ್ಷಿಸಬಹುದು. ಅದು ಹೇಗೆ ಎಂಬ ಮಾಹಿತಿ ಇಲ್ಲಿದೆ.
ಅಮೆರಿಕ, ಕೆನಡಾ, ಯುಕೆ ಮತ್ತು ಆಸ್ಟ್ರೇಲಿಯಾದಲ್ಲಿ ಐಪಿಎಲ್ 2025ರ ನೇರಪ್ರಸಾರ ವೀಕ್ಷಿಸುವುದು ಹೇಗೆ ?
ಯುನೈಟೆಡ್ ಸ್ಟೇಟ್ಸ್ (US): ಅಮೆರಿಕದಲ್ಲಿರುವ ಭಾರತೀಯರು ಹಾಗೂ ಕ್ರಿಕೆಟ್ ಫ್ಯಾನ್ಸ್ ವಿಲೋ ಟಿವಿ ಮೂಲಕ ಐಪಿಎಲ್ ಪಂದ್ಯಗಳನ್ನು ವೀಕ್ಷಿಸಬಹುದು. ಇದೇ ವೇಳೆ ವಿಲೋ ಟಿವಿ ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ಐಪಿಎಲ್ ಪಂದ್ಯಗಳನ್ನು ಮೊಬೈಲ್ ಮೂಲಕ ನೇರಪ್ರಸಾರ ವೀಕ್ಷಿಸಬಹುದು.
ಕೆನಡಾ: ಕೆನಡಾದಲ್ಲಿ ವಿಲೋ ಟಿವಿ ಮೂಲಕ ಪಂದ್ಯ ವೀಕ್ಷಿಸಬಹುದು. ಇದೇ ವೇಳೆ ವಿಲೋ ಟಿವಿ ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ಪಂದ್ಯಗಳನ್ನು ಲೈವ್ ಸ್ಟ್ರೀಮ್ ನೋಡಬಹುದು. ಇದೇ ವೇಳೆ ಫುಬೊಗೆ ಚಂದಾದಾರರಾಗಬಹುದು.
ಯುನೈಟೆಡ್ ಕಿಂಗ್‌ಡಮ್ (ಯುಕೆ): ಇಂಗ್ಲೆಂಡ್‌ನಲ್ಲಿ ಸ್ಕೈ ಸ್ಪೋರ್ಟ್ಸ್ ಕ್ರಿಕೆಟ್ ಮತ್ತು ಸ್ಕೈ ಸ್ಪೋರ್ಟ್ಸ್ ಮೈನ್ ಈವೆಂಟ್ ಐಪಿಎಲ್ ಪಂದ್ಯಗಳನ್ನು ಪ್ರಸಾರ ಮಾಡುತ್ತದೆ. ಸ್ಕೈ ಗೋ ಮೂಲಕ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.
ಆಸ್ಟ್ರೇಲಿಯಾ: ಫಾಕ್ಸ್ಟೆಲ್ ಐಪಿಎಲ್ ಪಂದ್ಯಗಳನ್ನು ಪ್ರಸಾರ ಮಾಡುತ್ತದೆ. ಕಯೋ ಸ್ಪೋರ್ಟ್ಸ್ ಮತ್ತು ಫಾಕ್ಸ್ಟೆಲ್ ಗೋ ಐಪಿಎಲ್ 2025ರ ಲೈವ್ ಸ್ಟ್ರೀಮಿಂಗ್ ಸೇವೆಗಳನ್ನು ಒದಗಿಸುತ್ತವೆ.
