ಐಸಿಸಿ ಚಾಂಪಿಯನ್ಸ್ ಟ್ರೋಫಿ 2025: ಪಂದ್ಯದ ಸಮಯ, ತಂಡಗಳು, ದಿನಾಂಕ, ಸ್ಥಳ, ಲೈವ್​ ಸ್ಟೀಮಿಂಗ್, ಸಂಪೂರ್ಣ ವೇಳಾಪಟ್ಟಿ
ಕನ್ನಡ ಸುದ್ದಿ  /  ಕ್ರಿಕೆಟ್  /  ಐಸಿಸಿ ಚಾಂಪಿಯನ್ಸ್ ಟ್ರೋಫಿ 2025: ಪಂದ್ಯದ ಸಮಯ, ತಂಡಗಳು, ದಿನಾಂಕ, ಸ್ಥಳ, ಲೈವ್​ ಸ್ಟೀಮಿಂಗ್, ಸಂಪೂರ್ಣ ವೇಳಾಪಟ್ಟಿ

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025: ಪಂದ್ಯದ ಸಮಯ, ತಂಡಗಳು, ದಿನಾಂಕ, ಸ್ಥಳ, ಲೈವ್​ ಸ್ಟೀಮಿಂಗ್, ಸಂಪೂರ್ಣ ವೇಳಾಪಟ್ಟಿ

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಮೊದಲ ಪಂದ್ಯ ಆರಂಭಕ್ಕೂ ಮುನ್ನ ತಂಡಗಳು, ಪಂದ್ಯದ ಸಮಯ, ಆತಿಥೇಯ ಸ್ಥಳಗಳು, ಸಂಪೂರ್ಣ ಪಂದ್ಯಗಳ ಪಟ್ಟಿ ಪರಿಶೀಲಿಸೋಣ.

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025: ಪಂದ್ಯದ ಸಮಯ, ತಂಡಗಳು, ದಿನಾಂಕ, ಸ್ಥಳ, ಲೈವ್​ ಸ್ಟೀಮಿಂಗ್, ಸಂಪೂರ್ಣ ವೇಳಾಪಟ್ಟಿ
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025: ಪಂದ್ಯದ ಸಮಯ, ತಂಡಗಳು, ದಿನಾಂಕ, ಸ್ಥಳ, ಲೈವ್​ ಸ್ಟೀಮಿಂಗ್, ಸಂಪೂರ್ಣ ವೇಳಾಪಟ್ಟಿ (ICC)

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 (ICC Champion Trophy 2025) ಫೆಬ್ರವರಿ 19 ರಿಂದ ಮಾರ್ಚ್ 9ರ ತನಕ ನಡೆಯಲಿದೆ. ಭಾರತ ತಂಡವು ಪಾಕ್​ಗೆ ಪ್ರಯಾಣಿಸಿದ ಹಿನ್ನೆಲೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಜರುಗಲಿದೆ. ಭಾರತ ತಂಡವು ದುಬೈನಲ್ಲಿ ತನ್ನೆಲ್ಲಾ ಪಂದ್ಯಗಳನ್ನು ಆಡಿದರೆ, ಉಳಿದ ಏಳು ತಂಡಗಳು ಪಾಕ್​ನಲ್ಲೇ ಕಣಕ್ಕಿಳಿಯಲಿವೆ. 2017ರ ನಂತರ ಆರಂಭವಾದ ಚಾಂಪಿಯನ್ಸ್ ಟ್ರೋಫಿಯು ಭಾರೀ ನಿರೀಕ್ಷೆ ಹುಟ್ಟಿಸಿದ್ದು, 8 ತಂಡಗಳ ನಡುವೆ ಒಂದು ಟ್ರೋಫಿ ಪೈಪೋಟಿ ನಡೆಯಲಿದೆ. 29 ವರ್ಷಗಳ ನಂತರ ಪಾಕಿಸ್ತಾನ ಐಸಿಸಿ ಟೂರ್ನಿಗೆ ಮೊದಲ ಬಾರಿಗೆ ಆತಿಥ್ಯ ವಹಿಸುತ್ತಿದೆ. ಮೊದಲ ಪಂದ್ಯ ಆರಂಭಕ್ಕೂ ಮುನ್ನ ತಂಡಗಳು, ಪಂದ್ಯದ ಸಮಯ, ಆತಿಥೇಯ ಸ್ಥಳಗಳು, ಸಂಪೂರ್ಣ ಪಂದ್ಯಗಳ ಪಟ್ಟಿ ಪರಿಶೀಲಿಸೋಣ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ತಂಡಗಳು

ಗುಂಪು ಎ: ಭಾರತ, ಪಾಕಿಸ್ತಾನ (ಆತಿಥೇಯ), ನ್ಯೂಜಿಲೆಂಡ್, ಬಾಂಗ್ಲಾದೇಶ

ಗುಂಪು ಬಿ: ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025: ಸ್ವರೂಪ

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗುಂಪು ಹಂತದಲ್ಲಿ ರೌಂಡ್-ರಾಬಿನ್ ಸ್ವರೂಪದಲ್ಲಿ ಆಡಲಾಗುವುದು. ನಂತರ ನಾಕೌಟ್ ಸುತ್ತುಗಳು ನಡೆಯುತ್ತವೆ. ಪ್ರತಿ ಗುಂಪಿನಿಂದ ಅಗ್ರ 2 ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ಇಲ್ಲಿ ಗೆದ್ದವರು ಫೈನಲ್​ಗೆ ಲಗ್ಗೆ ಇಡುತ್ತಾರೆ. ಏಕದಿನ ಮಾದರಿಯ ಟೂರ್ನಿ ಇದಾಗಿದೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜನೆ ಮಾಡಲಾಗುತ್ತದೆ.

ಪಂದ್ಯಗಳು ನಡೆಯುವ ಸ್ಥಳಗಳು

ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನದ ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣ, ಲಾಹೋರ್‌ನ ಗಡಾಫಿ ಕ್ರೀಡಾಂಗಣ ಮತ್ತು ರಾವಲ್ಪಿಂಡಿಯ ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಡಲಾಗುವುದು. ಆದಾಗ್ಯೂ, ಭಾರತ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.

ಲೈವ್​ಸ್ಟ್ರೀಮಿಂಗ್​ ವಿವರ

ಟಿವಿ ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಸ್ಪೋರ್ಟ್ಸ್-18 ಚಾನೆಲ್

ಲೈವ್ ಸ್ಟ್ರೀಮಿಂಗ್: ಜಿಯೋ ಹಾಟ್ ಸ್ಟಾರ್ ಅಪ್ಲಿಕೇಷನ್

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ವೇಳಾಪಟ್ಟಿ

ಪಂದ್ಯ 1: ಫೆಬ್ರವರಿ 19, ಪಾಕಿಸ್ತಾನ vs ನ್ಯೂಜಿಲೆಂಡ್, ಕರಾಚಿ, ಪಾಕಿಸ್ತಾನ

ಪಂದ್ಯ 2: ಫೆಬ್ರವರಿ 20, ಬಾಂಗ್ಲಾದೇಶ vs ಭಾರತ, ದುಬೈ

ಪಂದ್ಯ 3: ಫೆಬ್ರವರಿ 21, ಅಫ್ಘಾನಿಸ್ತಾನ vs ದಕ್ಷಿಣ ಆಫ್ರಿಕಾ, ಕರಾಚಿ, ಪಾಕಿಸ್ತಾನ

ಪಂದ್ಯ 4: ಫೆಬ್ರವರಿ 22, ಆಸ್ಟ್ರೇಲಿಯಾ vs ಇಂಗ್ಲೆಂಡ್, ಲಾಹೋರ್, ಪಾಕಿಸ್ತಾನ

ಪಂದ್ಯ 5: ಫೆಬ್ರವರಿ 23, ಪಾಕಿಸ್ತಾನ vs ಭಾರತ, ದುಬೈ

ಪಂದ್ಯ 6: ಫೆಬ್ರವರಿ 24, ಬಾಂಗ್ಲಾದೇಶ vs ನ್ಯೂಜಿಲೆಂಡ್, ರಾವಲ್ಪಿಂಡಿ, ಪಾಕಿಸ್ತಾನ

ಪಂದ್ಯ 7: ಫೆಬ್ರವರಿ 25, ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ, ರಾವಲ್ಪಿಂಡಿ, ಪಾಕಿಸ್ತಾನ

ಪಂದ್ಯ 8: ಫೆಬ್ರವರಿ 26, ಅಫ್ಘಾನಿಸ್ತಾನ vs ಇಂಗ್ಲೆಂಡ್, ಲಾಹೋರ್, ಪಾಕಿಸ್ತಾನ

ಪಂದ್ಯ 9: ಫೆಬ್ರವರಿ 27, ಪಾಕಿಸ್ತಾನ vs ಬಾಂಗ್ಲಾದೇಶ, ರಾವಲ್ಪಿಂಡಿ, ಪಾಕಿಸ್ತಾನ

ಪಂದ್ಯ 10: ಫೆಬ್ರವರಿ 28, ಅಫ್ಘಾನಿಸ್ತಾನ vs ಆಸ್ಟ್ರೇಲಿಯಾ, ಲಾಹೋರ್, ಪಾಕಿಸ್ತಾನ

ಪಂದ್ಯ 10: ಮಾರ್ಚ್ 1, ದಕ್ಷಿಣ ಆಫ್ರಿಕಾ vs ಇಂಗ್ಲೆಂಡ್, ಕರಾಚಿ, ಪಾಕಿಸ್ತಾನ

ಪಂದ್ಯ 11: 2 ಮಾರ್ಚ್, ನ್ಯೂಜಿಲೆಂಡ್ vs ಭಾರತ, ದುಬೈ

ಸೆಮಿಫೈನಲ್ 1: ಮಾರ್ಚ್ 4, ದುಬೈ

ಸೆಮಿಫೈನಲ್ 2: ಮಾರ್ಚ್ 5, ಲಾಹೋರ್, ಪಾಕಿಸ್ತಾನ

ಫೈನಲ್: ಮಾರ್ಚ್ 9, ಲಾಹೋರ್ (ಭಾರತ ಅರ್ಹತೆ ಪಡೆದರೆ ದುಬೈನಲ್ಲಿ ಆಡಲಾಗುತ್ತದೆ)

8 ತಂಡಗಳ ವಿವರ

ಬಾಂಗ್ಲಾದೇಶ ಕ್ರಿಕೆಟ್ ತಂಡ: ನಜ್ಮುಲ್ ಹೊಸೈನ್ ಶಾಂಟೋ (ನಾಯಕ), ಸೌಮ್ಯ ಸರ್ಕಾರ್, ತಂಜಿದ್ ಹಸನ್, ತೌಹಿದ್ ಹೃದಯ, ಮುಷ್ಫಿಕರ್ ರಹೀಮ್, ಮಹ್ಮದುಲ್ಲಾ, ಝಾಕರ್ ಅಲಿ ಅನಿಕ್, ಮೆಹದಿ ಹಸನ್ ಮಿರಾಜ್, ರಿಷದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಪರ್ವೇಜ್ ಹೊಸೈನ್ ಎಮನ್, ನಸುಮ್ ಅಹ್ಮದ್, ತಂಜಿಮ್ ಹಸನ್ ಸಕಿಬ್, ನಹಿದ್ ರಾಣಾ.

ಭಾರತ ಕ್ರಿಕೆಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್​ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಪಾಕಿಸ್ತಾನ ಕ್ರಿಕೆಟ್ ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ), ಬಾಬರ್ ಅಜಮ್, ಫಖರ್ ಜಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಆಘಾ, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್​ನೈನ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ.

ನ್ಯೂಜಿಲೆಂಡ್ ಕ್ರಿಕೆಟ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಕೈಲ್ ಜೆಮಿಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ವಿಲ್ ಒ'ರೂರ್ಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಜಾಕೋಬ್ ಡಫಿ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್.

ಅಫ್ಘಾನಿಸ್ತಾನ ಕ್ರಿಕೆಟ್ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಝದ್ರಾನ್, ರಹಮಾನಲ್ಲಾ ಗುರ್ಬಾಜ್, ಸೆಡಿಕುಲ್ಲಾ ಅಟಲ್, ರಹಮತ್ ಶಾ, ಇಕ್ರಮ್ ಅಲಿಖಿಲ್, ಗುಲ್ಬಾದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗ್ಯಾಲ್ ಖರೋಟಿ, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ಫರೀದ್ ಮಲಿಕ್, ನವೀದ್ ಝದ್ರಾನ್.

ಇಂಗ್ಲೆಂಡ್ ಕ್ರಿಕೆಟ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ಆಸ್ಟ್ರೇಲಿಯಾ ಕ್ರಿಕೆಟ್​​ ತಂಡ: ಸ್ಟೀವ್ ಸ್ಮಿತ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಥ್ಯೂ ಶಾರ್ಟ್, ಆಡಮ್ ಜಂಪಾ.

ದಕ್ಷಿಣ ಆಫ್ರಿಕಾ ಕ್ರಿಕೆಟ್​​ ತಂಡ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಜೋರ್ಜಿ, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕಗಿಸೊ ರಬಾಡ, ರಯಾನ್ ರಿಕಲ್ಟನ್, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡಸೆನ್, ಕಾರ್ಬಿನ್ ಬಾಷ್.

Prasanna Kumar P N

TwittereMail
ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner