Virat Kohli: ವಿಶ್ವಕಪ್ ನಾಕೌಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ; ದಾಖಲೆಗಳು ಹೀಗಿವೆ
ಕನ್ನಡ ಸುದ್ದಿ  /  ಕ್ರಿಕೆಟ್  /  Virat Kohli: ವಿಶ್ವಕಪ್ ನಾಕೌಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ; ದಾಖಲೆಗಳು ಹೀಗಿವೆ

Virat Kohli: ವಿಶ್ವಕಪ್ ನಾಕೌಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ; ದಾಖಲೆಗಳು ಹೀಗಿವೆ

ವಿಶ್ವಕಪ್‌ ನಾಕೌಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ತುಂಬಾ ಕಳಪೆ ಪ್ರದರ್ಶನ ನೀಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಅಬ್ಬರಿಸುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ನಡೆದಿದ್ದ ನೆದರ್ಲೆಂಡ್ಸ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ 51 ರನ್ ಗಳಿಸಿ ಔಟಾಗಿದ್ದ ವಿರಾಟ್ ಕೊಹ್ಲಿ ಪೆವಿಲಿಯನ್ ಕಡೆಗೆ ಹೋಗುತ್ತಿರುವುದು.
ಬೆಂಗಳೂರಿನಲ್ಲಿ ನಡೆದಿದ್ದ ನೆದರ್ಲೆಂಡ್ಸ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ 51 ರನ್ ಗಳಿಸಿ ಔಟಾಗಿದ್ದ ವಿರಾಟ್ ಕೊಹ್ಲಿ ಪೆವಿಲಿಯನ್ ಕಡೆಗೆ ಹೋಗುತ್ತಿರುವುದು. (ANI)

ಮುಂಬೈ (ಮಹಾರಾಷ್ಟ್ರ): 2023ರ ಐಸಿಸಿ ಏಕದಿನ ವಿಶ್ವಕಪ್ ಸೆಮಿ ಫೈನಲ್ (ODI World Cup Semi Final) ಪಂದ್ಯದಲ್ಲಿ ಟೀಂ ಇಂಡಿಯಾ (Team India) ಮತ್ತು ನ್ಯೂಜಿಲೆಂಡ್ (New Zealand) ತಂಡಗಳು ಇದೇ ಬುಧವಾರ (ನವೆಂಬರ್ 15) ಮುಖಾಮುಖಿಯಾಗುತ್ತಿವೆ. ವಿಶ್ವಕಪ್‌ನಲ್ಲಿನ ಗ್ರೂಪ್ ಹಂತದಲ್ಲಿ 9ಕ್ಕೆ 9ರಲ್ಲೂ ಭರ್ಜರಿ ಗೆಲುವು ಪಡೆದಿರುವ ಏಕೈಕ ತಂಡ ಎನಿಸಿರುವ ಭಾರತ ತಂಡ ಬಲಿಷ್ಠವಾಗಿದೆ. ಬ್ಯಾಟಿಂಗ್ ಲೈನಪ್ ಅತ್ಯುತ್ತಮವಾಗಿದೆ. ಅದರಲ್ಲೂ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ರನ್ ಶಿಖರವನ್ನೇ ಕಟ್ಟಿದ್ದಾರೆ.

ಈ ಮಹಾ ಟೂರ್ನಿಯಲ್ಲಿ ಗರಿಷ್ಠ ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 594 ರನ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಆದರೆ ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿ ಫೈನಲ್‌ನಲ್ಲಿ ಕೊಹ್ಲಿ ಅವರ ಬ್ಯಾಟಿಂಗ್ ಹೇಗಿರಲಿದೆ ಎಂಬ ಕುತೂಹಲದ ನಡುವೆಯೇ ಹಿಂದಿನ ವಿಶ್ವಕಪ್‌ಗಳಲ್ಲಿ ವಿರಾಟ್ ಅವರು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ ಅನ್ನೋದು ಗಮನಾರ್ಹವಾದ ವಿಷಯವಾಗಿದೆ.

ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್‌ನಲ್ಲಿ ಇದುವರೆಗೆ ಒಟ್ಟು ಆರು ನಾಕೌಟ್ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ ಅವರು ನಾಲ್ಕು ಬಾರಿ ಎರಡಂಕಿಯನ್ನು ದಾಟಿಲ್ಲ ಅನ್ನೋದು ಈಗಿನ ಮಟ್ಟಕ್ಕೆ ಆತಂಕಕಾಗಿ ವಿಷಯವಾಗಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ 2011ರ ವಿಶ್ವಕಪ್ ಫೈನಲ್‌ನಲ್ಲಿ ವಿರಾಟ್ ಕೊಹ್ಲಿ 35 ರನ್ ಗಳಿಸಿದ್ದರು. ಇದು ಇವರೆಗಿನ ಪ್ರಮುಖ ಹಂತದಲ್ಲಿ ಗರಿಷ್ಠ ಸ್ಕೋರ್ ಎನಿಸಿದೆ. ಎರಡು ನಾಕೌಟ್ ಪಂದ್ಯಗಳಲ್ಲಿ ತಲಾ 1 ರನ್ ಗಳಿಸಿ ಔಟಾಗಿದ್ದಾರೆ. ಈ ಕಾರಣದಿಂದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಎಂತಹ ಪ್ರದರ್ಶನ ನೀಡುತ್ತಾರೆ ಅನ್ನೋದು ಮುಖ್ಯವಾಗಿದೆ.

ಐಸಿಸಿ ಏಕದಿನ ವಿಶ್ವಕಪ್‌ ನಾಕೌಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನ

1. 24 ರನ್ - ಆಸ್ಟ್ರೇಲಿಯಾ ವಿರುದ್ಧ, ಕ್ವಾರ್ಟರ್ ಫೈನಲ್, 2011

2. 09 ರನ್ - ಪಾಕಿಸ್ತಾನ ವಿರುದ್ಧ, ಸೆಮಿ ಫೈನಲ್, 2011

3. 35 ರನ್ - ಶ್ರೀಲಂಕಾ ವಿರುದ್ಧ, ಫೈನಲ್, 2011

4. 03 ರನ್ - ಬಾಂಗ್ಲಾದೇಶ ವಿರುದ್ಧ, ಕ್ವಾರ್ಟರ್ ಫೈನಲ್, 2015

5. 01 ರನ್ - ಆಸ್ಟ್ರೇಲಿಯಾ ವಿರುದ್ಧ, ಸೆಮಿ ಫೈನಲ್, 2015

6. 01 ರನ್ - ನ್ಯೂಜಿಲೆಂಡ್ ವಿರುದ್ಧ, ಸೆಮಿ ಫೈನಲ್, 2019

ವಿರಾಟ್ ಕೊಹ್ಲಿ ಅವರ ಹಿಂದಿನ ವಿಶ್ವಕಪ್ ನಾಕೌಟ್ ಪಂದ್ಯಗಳಲ್ಲಿನ ರನ್ ನೋಡಿದಾಗ ಒಂದು ಕ್ಷಣ ಅಚ್ಚರಿಯಾಗುತ್ತದೆ. ಆದರೆ ಈ ಬಾರಿ ಅವರು ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಜೊತೆಗೆ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಸೆಮಿ ಫೈನಲ್‌ನಲ್ಲಿ ವಿರಾಟ್ ಅಬ್ಬರಿಸಲಿದ್ದಾರೆ ಅನ್ನೋದು ಅವರ ಅಸಂಖ್ಯಾತ ಅಭಿಮಾನಿಗಳ ವಿಶ್ವಾಸವಾಗಿದೆ.

Whats_app_banner