ICC ODI World Cup 2023: ಇಂದಿನಿಂದ ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳು; ಪಾಕಿಸ್ತಾನ vs ನ್ಯೂಜಿಲೆಂಡ್,ಶ್ರೀಲಂಕಾ vs ಬಾಂಗ್ಲಾ ಫೈಟ್
ಇಂದಿನಿಂದ ಐಸಿಸಿ ವಿಶ್ವಕಪ್ 2023ರ ಅಭ್ಯಾಸ ಪಂದ್ಯಗಳು ಆರಂಭವಾಗುತ್ತಿದೆ. ಮೊದಲ ದಿನವಾದ ಇಂದು ಪಾಕ್ತಿಸ್ತಾನ-ನ್ಯೂಜಿಲೆಂಡ್, ಶ್ರೀಲಂಕಾ-ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗುತ್ತಿವೆ.
ಬೆಂಗಳೂರು: ಐಸಿಸಿ ಪುರುಷರ ಏಕದಿನ ವಿಶ್ವಕಪ್ (ICC ODI World Cup 2023) ಆರಂಭಕ್ಕೆ ಇನ್ನ 5 ದಿನಗಳು ಮಾತ್ರ ಬಾಕಿದ್ದು, ಇಂದಿನಿಂದ (ಸೆಪ್ಟೆಂಬರ್ 29, ಶುಕ್ರವಾರ) ಅಭ್ಯಾಸ ಪಂದ್ಯಗಳು (ICC ODI World Cup Warm up Matches) ನಡೆಯಲಿವೆ.
ಒಟ್ಟು ನಾಲ್ಕು ದಿನ ಅಭ್ಯಾಸ ಪಂದ್ಯಗಳು ನಡೆಯಲಿದ್ದು, ಮೊದಲ ದಿನವಾದ ಇಂದು ಹೈದರಾಬಾದ್‌ನಲ್ಲಿ ಮಧ್ಯಾಹ್ನ 2 ಗಂಟೆಗೆ ಪಾಕಿಸ್ತಾನ-ನ್ಯೂಜಿಲೆಂಡ್ (Pakistan vs New Zealand) ನಡುವಿನ ಪಂದ್ಯ ಆರಂಭವಾದರೆ, ಗುವಾಹಟಿಯಲ್ಲಿ ಶ್ರೀಲಂಕಾ-ಬಾಂಗ್ಲಾದೇಶ ಮುಖಾಮುಖಿಯಾಗುತ್ತಿದೆ.
ಪಾಕಿಸ್ತಾನ ಕ್ರಿಕೆಟ್ ತಂಡ ಅಭ್ಯಾಸ ಪಂದ್ಯ ಆರಂಭಕ್ಕೂ ಎರಡು ದಿನಗಳ ಹಿಂದಷ್ಟೇ ಅಂದರೆ ಸೆಪ್ಟೆಂಬರ್ 27 ರಂದು ಹೈದರಾಬಾದ್‌ಗೆ ಬಂದಿಳಿದಿತ್ತು. ಇಲ್ಲಿ ಪಾಕಿಸ್ತಾನ ತಂಡಕ್ಕೆ ಅದ್ಧೂರಿ ಸ್ವಾಗತ ಕೂಡ ದೊರೆತಿತ್ತು. 7 ವರ್ಷಗಳ ಬಳಿಕ ಈ ತಂಡಕ್ಕೆ ಭಾರತಕ್ಕೆ ಇದೇ ಮೊದಲ ಬಾರಿಗೆ ಆಗಮಿಸಿದೆ.
ಅಕ್ಟೋಬರ್ 3ರವರೆಗೆ ನಡೆಯಲಿದೆ. ಅಕ್ಟೋಬರ್ ಮೂರರ ಒಂದೇ ದಿನ ಮೂರು ಅಭ್ಯಾಸ ಪಂದ್ಯಗಳು ನಡೆಯಲಿವೆ. ಹೈದರಾಬಾದ್‌ನ ಉಪ್ಪಲ್ ಸ್ಟೇಡಿಯಂ, ಗುವಾಹಟಿ ಹಾಗೂ ತಿರುವನಂತಪುರಂನಲ್ಲಿ ಪ್ರಾಕ್ಟೀಸ್ ಮ್ಯಾಚ್‌ಗಳು ನಡೆಯಲಿದೆ.
ಇಂದು ಅಭ್ಯಾಸ ಪಂದ್ಯಗಳನ್ನು ಆಡಲಿರುವ ತಂಡಗಳು
ಪಾಕಿಸ್ತಾನ ಕ್ರಿಕೆಟ್ ತಂಡ
ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಇಮಾಮ್ ಉಲ್ ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಇಫ್ತಿಕರ್ ಅಹ್ಮದ್, ಸೌದ್ ಶಕೀಲ್, ಸಲ್ಮಾನ್ ಅಲಿ ಅಘಾ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಶಾಹೀನ್ ಶಾ ಅಫ್ರಿದಿ, ಹಸನ್ ಅಲಿ, ಹ್ಯಾರಿಸ್ ರೌಫ್, ಮೊಹಮ್ಮದ್ ವಾಸಿಂ.
ನ್ಯೂಜಿಲೆಂಡ್ ಕ್ರಿಕೆಟ್ ತಂಡ
ಕೇನ್ ವಿಲಿಯಮ್ಸನ್ (ನಾಯಕ), ಬೋಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮೆಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.
ಶ್ರೀಲಂಕಾ ಕ್ರಿಕೆಟ್ ತಂಡ
ಶ್ರೀಲಂಕಾ ತಂಡ: ದಸುನ್ ಶನಕ (ನಾಯಕ), ಕುಸಾಲ್ ಮೆಂಡಿಸ್ (ಉಪ ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರಾ (ವಿಕೆಟ್ ಕೀಪರ್), ದಿಮುತ್ ಕುರುಣಾರತ್ನೆ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಸದೀರ ಸಮರವಿಕ್ರಮ (ವಿಕೆಟ್ ಕೀಪರ್), ದುಶನ್ ಹೇಮಂತ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶನ್ ಮಧುಶಂಕ, ಮತೀಶ ಪತಿರಣ, ಲಹಿರು ಕುಮಾರ.
ಬಾಂಗ್ಲಾದೇಶ ಕ್ರಿಕೆಟ್ ತಂಡ
ಶಕೀಬ್ ಅಲ್ ಹಸನ್ (ನಾಯಕ), ಲಿಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೋ, ತಂಝಿದ್ ಹಸನ್, ತೌಹಿದ್ ಹೃದಯೋ, ಮಹಮ್ಮದುಲ್ಲಾ ರಿಯಾದ್, ಮುಶ್ಪೀಕರ್ ರಹೀಮ್, ಮೆಹದಿ ಹಸನ್ ಮಿರಾಜ್, ಮೆಹದಿ ಹಸ್ನ್, ತಂಝಿಮ್ ಸಾಕಿಬ್, ನಸುಮ್ಮ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹದೂದ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್.
ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ನಾಳಿನ (ಸೆಪ್ಟೆಂಬರ್ 30, ಶನಿವಾರ) ಅಭ್ಯಾಸ ಪಂದ್ಯಗಳ ಪಟ್ಟಿ
ಭಾರತ vs ಇಂಗ್ಲೆಂಡ್, ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
ಆಸ್ಟ್ರೇಲಿಯಾ vs ನೆದರ್ಲ್ಯಾಂಡ್ಸ್, ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
ಅಕ್ಟೋಬರ್ 2 - ಸೋಮವಾರ
ಇಂಗ್ಲೆಂಡ್ vs ಬಾಂಗ್ಲಾದೇಶ, ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ, ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ
ಅಕ್ಟೋಬರ್ 3 - ಮಂಗಳವಾರ
ಪಾಕಿಸ್ತಾನ vs ಆಸ್ಟ್ರೇಲಿಯಾ - ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್
ಅಫ್ಘಾನಿಸ್ತಾನ vs ಶ್ರೀಲಂಕಾ, ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ
ಭಾರತ vs ನೆದರ್‌ಲ್ಯಾಂಡ್, ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂ, ತಿರುವನಂತಪುರಂ
ಅಭ್ಯಾಸ ಪಂದ್ಯಗಳು ಯಾವಾಗ? ಎಲ್ಲಿ ನೋಡುವುದು?
ವಿಶ್ವಕಪ್ ಅಭ್ಯಾಸ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಈ ಎಲ್ಲಾ ಪಂದ್ಯಗಳು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ.
ಈ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ. ಜೊತೆಗೆ ನೀವು ಈ ಅಭ್ಯಾಸ ಪಂದ್ಯಗಳನ್ನು ಹಾಟ್‌ಸ್ಟಾರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಆ ಬಳಿಕ ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಪಂದ್ಯಗಳನ್ನೂ ಉಚಿತವಾಗಿ ವೀಕ್ಷಿಸುವ ಅವಕಾಶವನ್ನೂ ಹಾಟ್‌ಸ್ಟಾರ್ ಕಲ್ಪಿಸಿದೆ.