ಸೌತ್ ಆಫ್ರಿಕಾ ವಿರುದ್ಧ 6ನೇ ಏಕದಿನ ಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ; ಹರ್ಮನ್ ದಾಖಲೆಯೂ ಉಡೀಸ್
- Smriti Mandhana Records: ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು ವಿಶ್ವದಾಖಲೆ ನಿರ್ಮಿಸಿದ್ದಾರೆ.
- Smriti Mandhana Records: ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು ವಿಶ್ವದಾಖಲೆ ನಿರ್ಮಿಸಿದ್ದಾರೆ.
(1 / 8)
ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ದ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು ಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ.(PTI)
(2 / 8)
ಮಹಿಳೆಯರ ಏಕದಿನ ಕ್ರಿಕೆಟ್‌ನಲ್ಲಿ ಆರನೇ ಸೆಂಚುರಿ ಸಿಡಿಸಿದ ಸ್ಮೃತಿ ಮಂಧಾನ, ಇದೇ ಮೊದಲ ಬಾರಿಗೆ ತವರಿನ ಮೈದಾನದಲ್ಲಿ ಶತಕ ಸಿಡಿಸಿದ್ದಾರೆ. ಹರ್ಮನ್ಪ್ರೀತ್ ಕೌರ್ ದಾಖಲೆಯನ್ನೂ ಮುರಿದಿದ್ದಾರೆ.(PTI)
(3 / 8)
ಭಾರತ ಮಹಿಳಾ ಕ್ರಿಕೆಟ್ ತಂಡದ ಎಡಗೈ ಬ್ಯಾಟ್ಸ್‌ಮನ್ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 7000 ರನ್ ಗಡಿ ದಾಟಿ ವಿಶೇಷ ಮೈಲಿಗಲ್ಲು ತಲುಪಿದ್ದಾರೆ. 59 ರನ್ ಗಳಿಸಿದಾಗ ಈ ದಾಖಲೆ ಬರೆದರು.
(4 / 8)
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಥಾಲಿ ರಾಜ್ ಬಳಿಕ 7000 ರನ್‌ಗಳ ಗಡಿ ದಾಟಿದ ಭಾರತದ ಮಹಿಳಾ ತಂಡದ ಎರಡನೇ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ. ಮಿಥಾಲಿ 10868 ರನ್ ಸಿಡಿಸಿದ್ದಾರೆ.(PTI)
(5 / 8)
ಇದಲ್ಲದೆ ಮಹಿಳಾ ಕ್ರಿಕೆಟ್‌ನಲ್ಲಿ ಆರಂಭಿಕ ಆಟಗಾರ್ತಿಯಾಗಿ ಅತ್ಯಧಿಕ 50+ ಸ್ಕೋರ್ ಗಳಿಸಿದ 3ನೇ ಆಟಗಾರ್ತಿ ಎನಿಸಿದ್ದಾರೆ. ನ್ಯೂಜಿಲೆಂಡ್ನ ಸೂಜಿ ಬೇಟ್ಸ್ ಏಕದಿನ ಕ್ರಿಕೆಟ್‌ನಲ್ಲಿ 32 ಬಾರಿ ಈ ಸಾಧನೆ ಮಾಡಿದ್ದಾರೆ.(PTI)
(6 / 8)
ಚಾರ್ಲೊಟ್ ಎಡ್ವರ್ಡ್ಸ್ (28 ಬಾರಿ) 2ನೇ ಸ್ಥಾನದಲ್ಲಿದ್ದರೆ, ಮಂಧಾನ (27 ಬಾರಿ) 3ನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಡ್ಟ್ ಕೂಡ 27 ಸಲ 50+ ಸ್ಕೋರ್ ಮಾಡಿದ್ದಾರೆ.(PTI)
(7 / 8)
116 ಎಸೆತಗಳನ್ನು ಎದುರಿಸಿ ವೃತ್ತಿಜೀವನದ 6ನೇ ಶತಕ ದಾಖಲಿಸಿದ ಸ್ಮೃತಿ ಅವರ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ, 1 ಸಿಕ್ಸರ್ ಇದೆ. ಅಲ್ಲದೆ ಭಾರತ ಮಹಿಳಾ ತಂಡದ ಪರ ಅಧಿಕ ಶತಕ ಸಿಡಿಸಿದ 2ನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. (PTI)
ಇತರ ಗ್ಯಾಲರಿಗಳು