T20 World Cup: ಭಾರತ ತಂಡ, ಅಭ್ಯಾಸ ಪಂದ್ಯ, ವೇಳಾಪಟ್ಟಿ, ದಿನಾಂಕ, ಸ್ಥಳ, ಲೈವ್ ಸ್ಟ್ರೀಮಿಂಗ್, ಯಾವಾಗ, ಎಲ್ಲಿ ವೀಕ್ಷಿಸಬೇಕು?
ICC T20 Cricket World Cup 2024 : ಐಸಿಸಿ ಟಿ20 ವಿಶ್ವಕಪ್ ಜೂನ್ 1 ರಿಂದ ಯುಎಸ್ ಮತ್ತು ವೆಸ್ಟ್ ಇಂಡೀಸ್ನಲ್ಲಿ ಪ್ರಾರಂಭವಾಗಲಿದೆ. ಟೀಮ್ ಇಂಡಿಯಾ ವೇಳಾಪಟ್ಟಿ, ದಿನಾಂಕ, ಸ್ಥಳ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ.
ICC T20 Cricket World Cup 2024: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2024 ಟೂರ್ನಿ ಜೂನ್ 1ರಿಂದ ಯುನೈಟೆಡ್ ಸ್ಟೇಟ್ಸ್ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ಪ್ರಾರಂಭವಾಗಲಿದೆ. ರೋಹಿತ್ ಶರ್ಮಾ ನೇತೃತ್ವದ ಮೆನ್ ಇನ್ ಬ್ಲೂ ತಂಡ ಐರ್ಲೆಂಡ್ ವಿರುದ್ಧದ ಮೊದಲ ಟಿ20 ವಿಶ್ವಕಪ್ ಪಂದ್ಯಕ್ಕೆ ಸುಮಾರು ಒಂದು ವಾರ ಮೊದಲು ಈಗಾಗಲೇ ನ್ಯೂಯಾರ್ಕ್ಗೆ ಆಗಮಿಸಿದೆ. 'ಎ' ಗುಂಪಿನಲ್ಲಿ ಅಮೆರಿಕ, ಕೆನಡಾ, ಪಾಕಿಸ್ತಾನ ಮತ್ತು ಐರ್ಲೆಂಡ್ ತಂಡಗಳು ಸ್ಥಾನ ಪಡೆದಿವೆ. ಪ್ರತಿ ಗುಂಪಿನಲ್ಲಿ ಅಗ್ರ 2 ಸ್ಥಾನ ಪಡೆಯುವ ತಂಡಗಳು ಸೂಪರ್-8ಕ್ಕೆ ಆಯ್ಕೆಯಾಗಲಿವೆ.
ಟಿ20 ವಿಶ್ವಕಪ್ 2024 ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ .
ಮೀಸಲು ಆಟಗಾರರು: ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್.
ಟೀಮ್ ಇಂಡಿಯಾ ವೇಳಾಪಟ್ಟಿ
ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಐಸಿಸಿ ಟಿ 20 ವಿಶ್ವಕಪ್ನಲ್ಲಿ ಐರ್ಲೆಂಡ್ ವಿರುದ್ಧ ತನ್ನ ಮೊದಲ ಟಿ20 ವಿಶ್ವಕಪ್ ಪಂದ್ಯವನ್ನು ನ್ಯೂಯಾರ್ಕ್ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಡಲಿದೆ. ಟಿ20 ವಿಶ್ವಕಪ್ ಅಭಿಯಾನ ಪ್ರಾರಂಭಿಸುವ ಮೊದಲು, ಮೆನ್ ಇನ್ ಬ್ಲೂ ಅದೇ ಸ್ಥಳದಲ್ಲಿ ಜೂನ್ 1ರಂದು ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲಿದೆ.
ಜೂನ್ 9ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಅಂತಿಮ ಲೀಗ್ ಹಂತದಲ್ಲಿ ಜೂನ್ 12 ರಂದು ಯುಎಸ್ ವಿರುದ್ಧ ಮತ್ತು ಜೂನ್ 15 ರಂದು ಕೆನಡಾ ವಿರುದ್ಧ ಸೆಣಸಲಿದೆ.
ಜೂನ್ 5: ಭಾರತ vs ಐರ್ಲೆಂಡ್, ನ್ಯೂಯಾರ್ಕ್ - ರಾತ್ರಿ 08:00 (ಭಾರತೀಯ ಕಾಲಮಾನ)
ಜೂನ್ 9: ಭಾರತ vs ಪಾಕಿಸ್ತಾನ, ನ್ಯೂಯಾರ್ಕ್ - ರಾತ್ರಿ 08:00 (ಭಾರತೀಯ ಕಾಲಮಾನ)
ಜೂನ್ 12: ಯುನೈಟೆಡ್ ಸ್ಟೇಟ್ಸ್ vs ಭಾರತ, ನ್ಯೂಯಾರ್ಕ್ - ರಾತ್ರಿ 08:00 (ಭಾರತೀಯ ಕಾಲಮಾನ)
ಜೂನ್ 15: ಭಾರತ vs ಕೆನಡಾ, ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್, ಫ್ಲೋರಿಡಾ - ರಾತ್ರಿ 08:00 (ಭಾರತೀಯ ಕಾಲಮಾನ)
ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಎಲ್ಲಿ ವೀಕ್ಷಿಸಬೇಕು?
ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಪಂದ್ಯವನ್ನು ಲೈವ್ ವೀಕ್ಷಿಸಲು ಬಯಸುವ ಬಳಕೆದಾರರು ಡಿಸ್ನಿ + ಹಾಟ್ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ ವೀಕ್ಷಿಸಬಹುದು. ಡಿಸ್ನಿ ಪ್ಲಸ್ ಹಾಟ್ಸ್ಟಾರ್ನಲ್ಲಿ ನೋಡುವ ಪಂದ್ಯಗಳು ಸಂಪೂರ್ಣ ಉಚಿತವಾಗಿರಲಿದೆ.
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)