ಕನ್ನಡ ಸುದ್ದಿ  /  ಕ್ರಿಕೆಟ್  /  ಐರ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ; ರೋಹಿತ್​-ಕೊಹ್ಲಿ ಓಪನಿಂಗ್, ನಾಲ್ವರು ವೇಗಿಗಳು ಕಣಕ್ಕೆ

ಐರ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ; ರೋಹಿತ್​-ಕೊಹ್ಲಿ ಓಪನಿಂಗ್, ನಾಲ್ವರು ವೇಗಿಗಳು ಕಣಕ್ಕೆ

India vs Ireland: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯ 8ನೇ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಐರ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ; ರೋಹಿತ್​-ಕೊಹ್ಲಿ ಓಪನಿಂಗ್, ನಾಲ್ವರು ವೇಗಿಗಳು
ಐರ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ಕೆ; ರೋಹಿತ್​-ಕೊಹ್ಲಿ ಓಪನಿಂಗ್, ನಾಲ್ವರು ವೇಗಿಗಳು

ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ 8ನೇ ಗುಂಪು ಹಂತದ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಈ ಪಂದ್ಯಕ್ಕೆ ವೇದಿಕೆ ಕಲ್ಪಿಸುತ್ತಿದೆ. ಆದರೆ, ಹಾರ್ದಿಕ್ ಪಾಂಡ್ಯ ಸೇರಿ ನಾಲ್ವರು ವೇಗಿಗಳ ಸಂಯೋಜನೆಯೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿದೆ.

ಟ್ರೆಂಡಿಂಗ್​ ಸುದ್ದಿ

ಆರಂಭಿಕರಾಗಿ ವಿರಾಟ್-ರೋಹಿತ್​

ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್​ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ. ಐಪಿಎಲ್​ನಲ್ಲಿ ಅಬ್ಬರದ ಪ್ರದರ್ಶನ ನೀಡಿ 15 ಪಂದ್ಯಗಳಲ್ಲಿ 741 ರನ್ ಬಾರಿಸಿದ್ದ ಕಾರಣ ಕೊಹ್ಲಿ ಅವರನ್ನೇ ಓಪನಿಂಗ್ ಮಾಡಿಸಲು ಟೀಮ್ ಮ್ಯಾನೇಜ್​ಮೆಂಟ್ ನಿರ್ಧರಿಸಿದೆ. ಇನ್ನು 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬೇಕಿದ್ದ ಪಂತ್​ 3ನೇ ಸ್ಥಾನದಲ್ಲಿ ಬ್ಯಾಟ್ ಬೀಸಲಿದ್ದಾರೆ.

ಸಂಜು ಕಡೆಗಣನೆ; ಆಕ್ರೋಶ

ಐಪಿಎಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್​​ ಅವರನ್ನು ಮತ್ತೊಮ್ಮೆ ಕಡೆಗಣನೆ ಮಾಡಲಾಗಿದೆ. ಹೀಗಾಗಿ ಆಕ್ರೋಶ ವ್ಯಕ್ತವಾಗಿದೆ. ಅವರನ್ನು ಕೇವಲ ವಾಟರ್​​​ಬಾಯ್ ಆಗಿ ಬಳಕೆ ಮಾಡಲಾಗುತ್ತಿದೆ. ಒಮ್ಮೆಯೂ ಪ್ಲೇಯಿಂಗ್​ 11ನಲ್ಲಿ ಸರಿಯಾಗಿ ಸ್ಥಾನ ಪಡೆದುಕೊಂಡಿಲ್ಲ. ವಿಕೆಟ್ ಕೀಪರ್​ ಆಗಿ ರಿಷಭ್ ಪಂತ್ ಕಣಕ್ಕಿಳಿಯುತ್ತಿದ್ದಾರೆ.

ಅಲ್ಲದೆ, ಯುಜ್ವೇಂದ್ರ ಚಹಲ್, ಯಶಸ್ವಿ ಜೈಸ್ವಾಲ್, ಕುಲ್ದೀಪ್ ಯಾದವ್ ಸಹ ಅವಕಾಶ ಪಡೆದಿಲ್ಲ. ಹಾರ್ದಿಕ್ ಸೇರಿ ನಾಲ್ವರು ವೇಗಿಗಳು ಮತ್ತು ಇಬ್ಬರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸಲಾಗಿದೆ. ಅಕ್ಷರ್​ ಪಟೇಲ್, ರವೀಂದ್ರ ಜಡೇಜಾ ಅವರು ಸ್ಪಿನ್​ ಆಲ್​ರೌಂಡರ್​​ಗಳಾಗಿ ತಂಡದ ಪರ ಕಣಕ್ಕಿಳಿದಿದ್ದಾರೆ.

18 ತಿಂಗಳ ನಂತರ ಮೈದಾನಕ್ಕಿಳಿದ ಪಂತ್

2022ರ ಡಿಸೆಂಬರ್ 30ರಂದು ಭೀಕರ ಅಪಘಾತಕ್ಕೆ ಒಳಗಾಗಿದ್ದ ರಿಷಭ್ ಪಂತ್, ಒಟ್ಟಾರೆ 18 ತಿಂಗಳ ನಂತರ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಮಾರ್ಚ್​ 22ರಂದು ಆರಂಭಗೊಂಡ ಐಪಿಎಲ್​ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಿದ ಪಂತ್​, ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ, ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ಪಡೆಯಲು ಸಫಲರಾಗಿದ್ದರು. ಇದೀಗ ಪ್ಲೇಯಿಂಗ್​ Xನಲ್ಲೂ ಅವಕಾಶ ಪಡೆದಿದ್ದಾರೆ.

ಭಾರತ ಪ್ಲೇಯಿಂಗ್ XI

ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್​ ಸಿಂಗ್, ಮೊಹಮ್ಮದ್ ಸಿರಾಜ್.

ಐರ್ಲೆಂಡ್ ಪ್ಲೇಯಿಂಗ್ XI

ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಬೆಂಜಮಿನ್ ವೈಟ್.

ಟಿ20 ವರ್ಲ್ಡ್‌ಕಪ್ 2024