IND Playing XI: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಿಂದ ಈ 5 ಆಟಗಾರರು ಔಟ್: ಆಡುವವರು ಇವರೇ ನೋಡಿ
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಬಿಸಿಸಿಐ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಿದೆ. ಆದಾಗ್ಯೂ, ಈ 15 ಆಟಗಾರರಲ್ಲಿ ಐವರು ಮೊದಲ ಟೆಸ್ಟ್‌ನಲ್ಲಿ ಆಡುವ XI ನ ಭಾಗವಾಗುವುದಿಲ್ಲ.
ಸೆಪ್ಟೆಂಬರ್ 19 ರಂದು ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲು ಭಾರತ ಸಿದ್ಧವಾಗಿದೆ. ಮೊದಲ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಹೊಸ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಮೊದಲ ಟೆಸ್ಟ್ ಪರೀಕ್ಷೆ ಇದಾಗಿರುವ ಕಾರಣ ಬಹಳ ಮುಖ್ಯವಾದ ಸರಣಿಯಾಗಿದೆ. ಸರಣಿಯ ಮೊದಲ ಪಂದ್ಯಕ್ಕೆ ಬಿಸಿಸಿಐ ಈಗಾಗಲೇ ತಂಡವನ್ನು ಪ್ರಕಟಿಸಿದೆ. ಆದಾಗ್ಯೂ, ಈ 15 ಆಟಗಾರರಲ್ಲಿ ಐವರು ಮೊದಲ ಟೆಸ್ಟ್‌ನಲ್ಲಿ ಆಡುವ XI ನ ಭಾಗವಾಗುವುದಿಲ್ಲ.
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಿಂದ ಈ 5 ಆಟಗಾರರು ಔಟ್
ಸರ್ಫರಾಜ್ ಖಾನ್: ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ, ಸರ್ಫರಾಜ್ ಖಾನ್ ಮೂರು ಪಂದ್ಯಗಳಲ್ಲಿ ಮೂರು ಅರ್ಧಶತಕ ಸೇರಿದಂತೆ 200 ರನ್ ಗಳಿಸಿ ಸ್ಟಾರ್ ಆಟಗಾರರಲ್ಲಿ ಒಬ್ಬರಾದರು. ಆದರೆ, ಕೆಎಲ್ ರಾಹುಲ್ ವಾಪಸಾತಿಯೊಂದಿಗೆ ಸರ್ಫರಾಜ್ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಪಡೆಯುವುದು ಅನುಮಾನ. ಅಲ್ಲದೆ ದುಲೀಪ್ ಟ್ರೋಫಿಯ ಎರಡನೇ ಸುತ್ತಿನ ತಂಡಗಳಲ್ಲಿ ಇವರ ಹೆಸರಿರುವ ಕಾರಣ ಮೊದಲ ಟೆಸ್ಟ್ ಅನ್ನು ಕಳೆದುಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ.
ಯಶ್ ದಯಾಳ್: ಆರ್‌ಸಿಬಿ ವೇಗದ ಬೌಲರ್ ಯಶ್ ದಯಾಳ್ ಅವರು ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ಗೆ ಭಾರತ ತಂಡದಲ್ಲಿ ತಮ್ಮ ಚೊಚ್ಚಲ ಕರೆ ಪಡೆದಿದ್ದಾರೆ. ಆದಾಗ್ಯೂ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರಂತಹ ಆಟಗಾರರ ಉಪಸ್ಥಿತಿಯಲ್ಲಿ ದಯಾಳ್ಗೆ ಪಂದ್ಯವನ್ನು ಆಡಲು ಅವಕಾಶ ಸಿಗುವುದು ಕಷ್ಟ.
ಆಕಾಶ್ ದೀಪ್: ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರು ಭಾರತದ ಪ್ಲೇಯಿಂಗ್ XI ನಲ್ಲಿ ಇಬ್ಬರು ಪ್ರಮುಖ ವೇಗದ ಬೌಲರ್‌ಗಳಾಗಿರುತ್ತಾರೆ. ಏಕೆಂದರೆ ತವರಿನ ಪಂದ್ಯ ಆಗಿರುವುದರಿಂದ ಭಾರತ 4 ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯಲಿದೆ. ಹೀಗಾಗಿ ಇಂಗ್ಲೆಂಡ್ ಸರಣಿಯಲ್ಲಿ ಅಮೋಘ ಚೊಚ್ಚಲ ಪಂದ್ಯವಾಡಿದ್ದ ಆಕಾಶ್ ದೀಪ್ ತಂಡದಿಂದ ಹೊರಗುಳಿಯಲಿದ್ದಾರೆ.
ಧ್ರುವ್ ಜುರೆಲ್: ಇಂಗ್ಲೆಂಡ್ ಸರಣಿಯು ವಿಕೆಟ್‌ಕೀಪರ್-ಬ್ಯಾಟರ್ ಧ್ರುವ್ ಜುರೆಲ್‌ಗೆ ಅದ್ಭುತ ಅಡಿಪಾಯ ಹಾಕಿಕೊಟ್ಟಿತು. ಅವರ 2ನೇ ಟೆಸ್ಟ್ ಪಂದ್ಯದಲ್ಲಿ, ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ಪಡೆದರು. ಆದಾಗ್ಯೂ, ರಿಷಭ್ ಪಂತ್ ಮರಳುವುದರೊಂದಿಗೆ, ಜುರೆಲ್ ಬ್ಯಾಕ್‌ಅಪ್ ವಿಕೆಟ್‌ಕೀಪರ್-ಬ್ಯಾಟರ್ ಆಯ್ಕೆಯಾಗುವ ಸಾಧ್ಯತೆಯಿದೆ.
ಅಕ್ಷರ್ ಪಟೇಲ್ ಅಥವಾ ಕುಲ್ದೀಪ್ ಯಾದವ್: ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಸ್ಪಿನ್ನರ್ಗಳಾಗಿ ಕಣಕ್ಕಿಳಿಯುವುದು ಖಚಿತವಾಗಿದೆ. ಉಳಿದಂತೆ ಅಕ್ಷರ್ ಪಟೇಲ್ ಮತ್ತು ಕುಲ್ದೀಪ್ ಯಾದವ್ ಇಬ್ಬರ ನಡುವೆ ಒಂದು ಸ್ಥಾನಕ್ಕೆ ಪೈಪೋಟಿ ಇದೆ. ಅಕ್ಷರ್ ಪಟೇಲ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್ನಲ್ಲೂ ಅದ್ಭುತ ಪ್ರದರ್ಶನ ನೀಡುವ ಹಿನ್ನೆಲೆ ಅವರಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆ ಹೆಚ್ಚಿದೆ.
ಆದರೆ, ನಾಲ್ವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯುವ ಯೋಜನೆ ಹೊಂದಿದ್ದರೆ ಕುಲ್ದೀಪ್ ಯಾದವ್ ಸಹ ಆಡುವ 11ರ ಬಳಗದಲ್ಲಿ ಅವಕಾಶ ಪಡೆಯುವುದು ಖಚಿತವಾಗಿದೆ. ತವರಿನಲ್ಲಿ ಸ್ಪಿನ್ನರ್ಗಳ ಜಾದೂ ನಡೆಯುವ ಕಾರಣ ನಾಲ್ವರು ಸ್ಪಿನ್ನರ್ಗಳು ಹಾಗೂ 2 ವೇಗಿಗಳ ಕಾಂಬಿನೇಷನ್ನಲ್ಲಿ ಕಣಕ್ಕಿಳಿದರೂ ಅಚ್ಚರಿ ಇಲ್ಲ. ಆದರೆ ಇದರ ಸಾಧ್ಯತೆ ತೀರಾ ಕಡಿಮೆ ಇದೆ. ಮೂವರು ವೇಗಿಗಳು, ಮೂವರು ಸ್ಪಿನ್ನರ್ಗಳ ಕಾಂಬಿನೇಷನ್ನಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್-ಕೀಪರ್), ಧ್ರುವ್ ಜುರೆಲ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.