ಇಂಡೋ-ಆಸೀಸ್ 3ನೇ ಟೆಸ್ಟ್​ಗೆ ಮಳೆ ಅಡ್ಡಿ, ಆಸ್ಟ್ರೇಲಿಯಾ 28/0; ಭಾರತ ಪ್ಲೇಯಿಂಗ್​ 11ನಲ್ಲಿ ಎರಡು ಬದಲಾವಣೆ
ಕನ್ನಡ ಸುದ್ದಿ  /  ಕ್ರಿಕೆಟ್  /  ಇಂಡೋ-ಆಸೀಸ್ 3ನೇ ಟೆಸ್ಟ್​ಗೆ ಮಳೆ ಅಡ್ಡಿ, ಆಸ್ಟ್ರೇಲಿಯಾ 28/0; ಭಾರತ ಪ್ಲೇಯಿಂಗ್​ 11ನಲ್ಲಿ ಎರಡು ಬದಲಾವಣೆ

ಇಂಡೋ-ಆಸೀಸ್ 3ನೇ ಟೆಸ್ಟ್​ಗೆ ಮಳೆ ಅಡ್ಡಿ, ಆಸ್ಟ್ರೇಲಿಯಾ 28/0; ಭಾರತ ಪ್ಲೇಯಿಂಗ್​ 11ನಲ್ಲಿ ಎರಡು ಬದಲಾವಣೆ

India vs Australia 3rd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್​ ಪಂದ್ಯ ಆರಂಭಗೊಂಡಿದೆ. ಆದರೆ ಆರಂಭಿಕ ಸೆಷನ್​ನಲ್ಲಿ ಆರಂಭವಾದ ಮಳೆ ಇನ್ನೂ ನಿಂತಿಲ್ಲ.

ಮೂರನೇ ಟೆಸ್ಟ್​ ಪಂದ್ಯದ ವೇಳೆ ಮಳೆ ಕಾಣಿಸಿಕೊಂಡ ಹಿನ್ನೆಲೆ ಪೆವಿಲಿಯನ್​ನತ್ತ ಉಸ್ಮಾನ್ ಖವಾಜ ಓಡಿದ ಕ್ಷಣ.
ಮೂರನೇ ಟೆಸ್ಟ್​ ಪಂದ್ಯದ ವೇಳೆ ಮಳೆ ಕಾಣಿಸಿಕೊಂಡ ಹಿನ್ನೆಲೆ ಪೆವಿಲಿಯನ್​ನತ್ತ ಉಸ್ಮಾನ್ ಖವಾಜ ಓಡಿದ ಕ್ಷಣ. (AP)

ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಜಯಿಸಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ಆಸೀಸ್ ಬ್ಯಾಟಿಂಗ್ ಆರಂಭಿಸಿದೆ. ಆದರೆ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದೆ. ಕಾಂಗರೂ ಪಡೆ 13.2 ಓವರ್​​​ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 28 ರನ್ ಗಳಿಸಿದೆ. ಮಳೆ ಬಿಟ್ಟೂ ಬಿಡದೆ ಸುರಿಯುತ್ತಿರುವ ಕಾರಣ ಭೋಜನ ವಿರಾಮದ ಬಳಿಕ ಪಂದ್ಯ ಆರಂಭ ಮತ್ತಷ್ಟು ತಡವಾಗಲಿದೆ.

ಬ್ರಿಸ್ಬೇನ್​ನ ಗಬ್ಬಾ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆಸೀಸ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಥನ್ ಮೆಕ್‌ಸ್ವೀನಿ ಮತ್ತು ಉಸ್ಮಾನ್ ಖವಾಜ ಉತ್ತಮ ಅಡಿಪಾಯ ಹಾಕುವ ನಿರೀಕ್ಷೆಯಲ್ಲಿದ್ದರು. ಆದರೆ, ಅವರ ಕನಸಿಗೆ ಮಳೆ ಅಡ್ಡಿಪಡಿಸಿದೆ. ನಾಥನ್ 4 ರನ್, ಖವಾಜ 19 ರನ್ ಗಳಿಸಿ ಅಜೇಯರಾಗಿದ್ದಾರೆ. ಆರಂಭದಲ್ಲೇ ವಿಕೆಟ್ ಉರುಳಿಸಿ ಪಂದ್ಯದ ಮೇಲೆ ಹಿಡಿತ ಸಾಧಿಸಲು ಲೆಕ್ಕಾಚಾರ ಹಾಕಿಕೊಂಡಿದ್ದ ಟೀಮ್ ಇಂಡಿಯಾ ಬೌಲರ್​​ಗಳು ವಿಕಟ್ ಪಡೆಯಲು ವಿಫಲರಾದರು.

ಭಾರತ ತಂಡದಲ್ಲಿ ಎರಡು ಬದಲಾವಣೆ

ಮೂರನೇ ಟೆಸ್ಟ್​ ಪಂದ್ಯಕ್ಕೆ ಮಹತ್ವದ ಎರಡು ಬದಲಾವಣೆಯಾಗಿದೆ. ಹರ್ಷಿತ್ ರಾಣಾ ಮತ್ತು ಆರ್​​ ಅಶ್ವಿನ್ ಅವರನ್ನು ಕೈಬಿಟ್ಟು ಆಕಾಶ್ ದೀಪ್ ಮತ್ತು ರವೀಂದ್ರ ಜಡೇಜಾ ಅವರಿಗೆ ಅವಕಾಶ ನೀಡಲಾಗಿದೆ. ಅಲ್ಲದೆ, ರೋಹಿತ್​ ಶರ್ಮಾ ಆರಂಭಿಕ ಸ್ಥಾನಕ್ಕೆ ಮರಳುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಮತ್ತೆ ಮಧ್ಯಮ ಕ್ರಮಾಂಕದಲ್ಲೇ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಮೂರು ಪಂದ್ಯಗಳಿಗೆ ಮೂವರು ಸ್ಪಿನ್ನರ್

ಟೀಮ್ ಇಂಡಿಯಾ ಮೂರು ಪಂದ್ಯಗಳಿಗೂ ಮೂವರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸಿದೆ. ಪರ್ತ್​ ಟೆಸ್ಟ್​​​ನಲ್ಲಿ ವಾಷಿಂಗ್ಟನ್ ಸುಂದರ್​ಗೆ ಅವಕಾಶ ನೀಡಲಾಗಿತ್ತು. ಅಡಿಲೇಡ್​ ಟೆಸ್ಟ್​ಗೆ ಆರ್ ಅಶ್ವಿನ್ ಅವಕಾಶ ಪಡೆದಿದ್ದರು. ಇದೀಗ ರವೀಂದ್ರ ಜಡೇಜಾಗೆ ಮಣೆ ಹಾಕಲಾಗಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ XI

ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹೇಜಲ್​ವುಡ್.

ಭಾರತ ಪ್ಲೇಯಿಂಗ್ XI

ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

ಭಾರತ ಮೊದಲು ಬ್ಯಾಟಿಂಗ್ ಮಾಡಬೇಕಿತ್ತು ಎಂದ ವಾನ್

ಬ್ರಿಸ್ಬೇನ್‌ನ ಗಬ್ಬಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಕ್ಕೆ ಇಂಗ್ಲೆಂಡ್‌ನ ಮಾಜಿ ನಾಯಕ ಮೈಕೆಲ್ ವಾನ್ ಅಸಮಾಧಾನ ಹೊರಹಾಕಿದ್ದಾರೆ. ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿದ್ದರೆ ಚೆನ್ನಾಗಿರುತ್ತಿತ್ತು ಎಂದು ಹೇಳಿದ್ದಾರೆ.

Whats_app_banner