IND vs SA Final: ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲುವಿಗಾಗಿ ವಿವಿಧ ದೇವಾಲಯಗಳಲ್ಲಿ ಅಭಿಮಾನಿಗಳಿಂದ ಪೂಜೆ; ಹನುಮಾನ್ ಚಾಲೀಸಾ ಪಠಣ
ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ನಲ್ಲಿ ದಕ್ಷಿಣ ಆಫಿಕಾ ವಿರುದ್ಧ ಪ್ರಶಸ್ತಿ ಗೆಲ್ಲಲಿ ಎಂದು ಕೆಲವೆಡೆ ಅಭಿಮಾನಿಗಳು ದೇವಾಲಯಗಳಲ್ಲಿ ಪೂಜೆ ಮಾಡಿದರೆ ಮತ್ತೊಂದೆಡೆ ರೋಹಿತ್ ಪಡೆ ಚಾಂಪಿಯನ್ ಪಟ್ಟಕ್ಕಾಗಿ ಹನುಮಾನ್ ಚಾಲೀಸಾ ಪಠಣ ಮಾಡಲಾಗಿದೆ.
ಬಾರ್ಬಡೊಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ಐಸಿಸಿ ಟಿ20 ವಿಶ್ವಕಪ್ ಫೈನಲ್ (ICC T20 World Cup Final 2024) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ (India vs South Africa Final) ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿ ಎಂದು ಹಾರೈಸಿ ಕ್ರಿಕೆಟ್ ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದ್ದಾರೆ. ರೋಹಿತ್ ಪಡೆಯ ಗೆಲುವಿಗಾಗಿ ಧಾರ್ಮಿಕ ವಿಧಿಗಳನ್ನು ನಡೆಸುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಭಾರತದ ಗೆಲುವಿಗಾಗಿ ಬಿಹಾರದ ಶಾಲೆಯೊಂದರಲ್ಲಿ ಹನುಮಾನ್ ಚಾಲೀಸಾ ಪಠಣವನ್ನು ಮಾಡಿದ್ದಾರೆ. ಪಟ್ನಾದ ವೇದ ವಿದ್ಯಾಲಯದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡಿರುವ ವಿಡಿಯೊ ವೈರಲ್ ಆಗಿದ್ದು, ಸಖತ್ ಟ್ರೆಂಡ್ ಆಗಿದೆ. ವೇದ ವಿದ್ಯಾಲಯದ ವಿದ್ಯಾರ್ಥಿಗಳು ಹಳದಿ ಮತ್ತು ಕೇಸರಿ ಬಣ್ಣದ ಬಟ್ಟೆಗಳನ್ನು ಧರಿಸಿ ಟೀಂ ಇಂಡಿಯಾ ಆಟಗಾರರ ಭಾವಚಿತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ಹನುಮಾನ್ ಚಾಲೀಸಾ ಪಠಣ ಮಾಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಐಎಎನ್‌ಎಸ್ ಸುದ್ದಿ ಸಂಸ್ಥೆ ವಿಡಿಯೊವನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
ಐಸಿಸಿ ಟಿ20 ವಿಶ್ವಕಪ್ 2024 ರಲ್ಲಿ ರೋಹಿತ್ ಅಂಡ್ ಟೀಂ ಸಂಘಟಿತ ಹೋರಾಟದ ಪರಿಣಾಮವಾಗಿ ಆಡಿರುವ ಎಲ್ಲಾ ಪಂದ್ಯಗಳನ್ನು ಗೆದ್ದು ಫೈನಲ್ ತಲುಪಿತ್ತು. ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿದೆ. ಆರಂಭಿಕ ಬ್ಯಾಟರ್ ವಿರಾಟ್ ಕೊಹ್ಲಿ 76 ರನ್ ಗಳಿಸಿದರೆ, ಅಕ್ಸರ್ ಪಟೇಲ್ 47 ಹಾಗೂ ಶಿವಂ ದುಬೆ 27 ರನ್‌ಗಳ ಉಪಯುಕ್ತ ಕಾಣಿಕೆ ನೀಡಿದ್ದಾರೆ.
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)