ಪಿಂಕ್ ಬಾಲ್ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಅಶ್ವಿನ್ ವಾಪಸ್
ಕನ್ನಡ ಸುದ್ದಿ  /  ಕ್ರಿಕೆಟ್  /  ಪಿಂಕ್ ಬಾಲ್ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಅಶ್ವಿನ್ ವಾಪಸ್

ಪಿಂಕ್ ಬಾಲ್ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಅಶ್ವಿನ್ ವಾಪಸ್

India vs Australia 2nd test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಅಥವಾ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಪಿಂಕ್ ಬಾಲ್ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಪಿಂಕ್ ಬಾಲ್ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ (AP)

ಬಾರ್ಡರ್ ಗವಾಸ್ಕರ್ ಟ್ರೋಫಿಯ ಬಹುನಿರೀಕ್ಷಿತ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ಹಗಲು ರಾತ್ರಿ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿದೆ. 2020ರಲ್ಲಿ ಇದೇ ಮೈದಾನದಲ್ಲಿ ಆಡಿದ್ದ ಪಿಂಕ್ ಬಾಲ್ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲಿಗೆ ಶರಣಾಗಿತ್ತು. ಇದೀಗ ಸೇಡಿನ ಸಮರಕ್ಕೆ ಸಜ್ಜಾಗಿದೆ. ಮಹತ್ವದ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆಯಾಗಿದೆ.

ಭಾರತ ತಂಡದಲ್ಲಿ ಮೂರು ಬದಲಾವಣೆ

ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದಲ್ಲಿ ಮೂರು ಬದಲಾವಣೆಯಾಗಿದೆ. ಪರ್ತ್​​ ಟೆಸ್ಟ್​ಗೆ ಅಲಭ್ಯರಾಗಿದ್ದ ನಾಯಕ ರೋಹಿತ್​ ಶರ್ಮಾ, ಶುಭ್ಮನ್ ಗಿಲ್ ತಂಡಕ್ಕೆ ಮರಳಿದ್ದರೆ, ಮೊದಲ ಟೆಸ್ಟ್​ಗೆ ಅವಕಾಶ ಪಡೆಯದ ರವಿಚಂದ್ರನ್​ಗೆ ಪಿಂಕ್ ಬಾಲ್​ ಪಂದ್ಯಕ್ಕೆ ಚಾನ್ಸ್ ನೀಡಲಾಗಿದೆ. ಈ ಮೂವರಿಗಾಗಿ ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ ಮತ್ತು ವಾಷಿಂಗ್ಟನ್ ಸುಂದರ್​ ತಮ್ಮ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ರೋಹಿತ್ ಆರಂಭಿಕ ಬ್ಯಾಟಿಂಗ್ ಸ್ಥಾನವನ್ನು ಕೆಎಲ್ ರಾಹುಲ್​ಗೆ ತ್ಯಾಗ ಮಾಡಿದ್ದಾರೆ. ಅವರು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲಿದ್ದಾರೆ.

2020ರಲ್ಲಿ ಅಡಿಲೇಡ್‌ನಲ್ಲಿ ನಡೆದಿದ್ದ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಅಶ್ವಿನ್ ಅತ್ಯುತ್ತಮ ಪ್ರದರ್ಶನ ನೀಡಿದ್ದ ಕಾರಣ ಆರ್ ಅಶ್ವಿನ್​ಗೆ ಮಣೆ ಹಾಕಲಾಗಿದೆ. ಅಂದು ಅಶ್ವಿನ್ 5 ವಿಕೆಟ್ ಪಡೆದು ಗಮನ ಸೆಳೆದಿದ್ದರು. ಅಡಿಲೇಡ್‌ನ ಓವಲ್ ಮೈದಾನದಲ್ಲಿ ಅಶ್ವಿನ್ 3 ಟೆಸ್ಟ್‌ಗಳನ್ನು ಆಡಿದ್ದು, ಒಟ್ಟು 16 ವಿಕೆಟ್‌ಗಳನ್ನು ಪಡೆದಿದ್ದಾರೆ. ಹೀಗಾಗಿ, ಟೀಮ್ ಮ್ಯಾನೇಜ್​ಮೆಂಟ್ ವಾಷಿಂಗ್ಟನ್ ಸುಂದರ್‌ ಬದಲಿಗೆ ಅಶ್ವಿನ್‌ಗೆ ಆದ್ಯತೆ ನೀಡಿದೆ. ಆಸೀಸ್ ತಂಡವು ಜೋಶ್ ಹೇಜಲ್​ವುಡ್​ ಬದಲಿಗೆ ಸ್ಕಾಟ್ ಬೋಲ್ಯಾಂಡ್​ಗೆ ಮಣೆ ಹಾಕಿದೆ. ಹೇಜಲ್​ವುಡ್ ಗಾಯಗೊಂಡಿದ್ದಾರೆ.

ಆಸ್ಟ್ರೇಲಿಯಾ (ಪ್ಲೇಯಿಂಗ್ XI)

ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.

ಭಾರತ (ಪ್ಲೇಯಿಂಗ್ XI)

ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ನಿತೀಶ್ ರೆಡ್ಡಿ, ರವಿಚಂದ್ರನ್ ಅಶ್ವಿನ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಅಡಿಲೇಡ್‌ನಲ್ಲಿ ಭಾರತ ತಂಡದ ದಾಖಲೆ

ಭಾರತ ಅಡಿಲೇಡ್‌ನ ಓವಲ್ ಮೈದಾನದಲ್ಲಿ 13 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇಲ್ಲಿ ಕೇವಲ ಕೇವಲ 2ರಲ್ಲಿ ಗೆದ್ದಿರುವ ಭಾರತ ತಂಡ, 8 ಟೆಸ್ಟ್ ಪಂದ್ಯಗಳಲ್ಲಿ ಸೋತಿದೆ. 3 ಟೆಸ್ಟ್ ಪಂದ್ಯಗಳು ಡ್ರಾ ಆಗಿವೆ. ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ಒಟ್ಟು 82 ಟೆಸ್ಟ್‌ಗಳನ್ನು ಆಡಿದ್ದು, ಅದರಲ್ಲಿ 45ರಲ್ಲಿ ಗೆದ್ದಿದೆ, 18ರಲ್ಲಿ ಸೋತಿದೆ ಮತ್ತು 19 ಡ್ರಾ ಆಗಿದೆ.

ಭಾರತ-ಆಸ್ಟ್ರೇಲಿಯಾ ಹೆಡ್​ ಟು ಹೆಡ್ ರೆಕಾರ್ಡ್

ಒಟ್ಟು ಪಂದ್ಯ: 108

ಭಾರತ ಗೆಲುವು: 33

ಆಸ್ಟ್ರೇಲಿಯಾ ಗೆಲುವು: 45

ಡ್ರಾ ಪಂದ್ಯ: 29

ಟೈ - 01

Whats_app_banner