ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಎರಡನೇ ಮುಖಾಮುಖಿ; ದೆಹಲಿ ಪಿಚ್ ಹಾಗೂ ಹವಾಮಾನ ವರದಿ
ಕನ್ನಡ ಸುದ್ದಿ  /  ಕ್ರಿಕೆಟ್  /  ಡೆಲ್ಲಿ ಕ್ಯಾಪಿಟಲ್ಸ್ Vs ಮುಂಬೈ ಇಂಡಿಯನ್ಸ್ ಎರಡನೇ ಮುಖಾಮುಖಿ; ದೆಹಲಿ ಪಿಚ್ ಹಾಗೂ ಹವಾಮಾನ ವರದಿ

ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಎರಡನೇ ಮುಖಾಮುಖಿ; ದೆಹಲಿ ಪಿಚ್ ಹಾಗೂ ಹವಾಮಾನ ವರದಿ

Delhi Capitals vs Mumbai Indians: ಏಪ್ರಿಲ್ 27ರಂದು ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದ ಪಿಚ್‌ ಹಾಗೂ ಹವಾಮಾನ ವರದಿ ಇಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಎರಡನೇ ಮುಖಾಮುಖಿ; ದೆಹಲಿ ಪಿಚ್ ಹಾಗೂ ಹವಾಮಾನ ವರದಿ
ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಎರಡನೇ ಮುಖಾಮುಖಿ; ದೆಹಲಿ ಪಿಚ್ ಹಾಗೂ ಹವಾಮಾನ ವರದಿ

ಐಪಿಎಲ್‌ 17ನೇ ಆವೃತ್ತಿಯಲ್ಲಿ ಏಪ್ರಿಲ್ 27ರಂದು ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದು, ಡೆಲ್ಲಿ ಪಾಲಿಗೆ ಇದು ಸೇಡಿನ ಸಮರವಾಗಿದೆ. ಟೂರ್ನಿಯಲ್ಲಿ ಈಗಾಗಲೇ ಉಭಯ ತಂಡಗಳು ಒಂದು ಬಾರಿ ಎದುರಾಗಿವೆ. ಅದರಲ್ಲಿ ಮುಂಬೈ ಭರ್ಜರಿ ಜಯ ಸಾಧಿಸಿತ್ತು. ಇದೀಗ ಸೇಡಿನ ಸಮರಕ್ಕೆ ರಿಷಭ್‌ ಪಂತ್‌ ಬಳಗ ಸಜ್ಜಾಗಿದೆ. ಅತ್ತ ಡೆಲ್ಲಿ ವಿರುದ್ಧ ಎರಡಕ್ಕೆ ಎರಡೂ ಪಂದ್ಯ ಗೆಲ್ಲಲು ಹಾರ್ದಿಕ್‌ ಪಾಂಡ್ಯ ಪಡೆ ಎದುರು ನೋಡುತ್ತಿದೆ.

ಟೂರ್ನಿಯಲ್ಲಿ ಈವರೆಗೆ ಆಡಿದ 9 ಪಂದ್ಯಗಳಲ್ಲಿ 4ರಲ್ಲಿ ಗೆದ್ದಿರುವ ಡೆಲ್ಲಿ, ಸದ್ಯ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಅತ್ತ ಮುಂಬೈ ಇಂಡಿಯನ್ಸ್ 8 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 8ನೇ ಸ್ಥಾನದಲ್ಲಿದೆ. ಎರಡೂ ತಂಡಗಳು ಸ್ಥಿರ ಪ್ರದರ್ಶನ ನೀಡಲು ಪರದಾಡುತ್ತಿವೆ. ಏಪ್ರಿಲ್‌ 27ರ ಶನಿವಾರ ಎರಡು ಪಂದ್ಯಗಳು ನಡೆಯುತ್ತಿದ್ದು, ದಿನದ ಮೊದಲ ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.

ಡೆಲ್ಲಿ ಮತ್ತು ಮುಂಬೈ ತಂಡಗಳು ಐಪಿಎಲ್‌ನಲ್ಲಿ ಈವರೆಗೆ ಒಟ್ಟು 34 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಡೆಲ್ಲಿ 15ರಲ್ಲಿ ಗೆದ್ದರೆ, ಎಂಐ 19 ಪಂದ್ಯಗಳಲ್ಲಿ ಗೆದ್ದಿದೆ. ಉಭಯ ತಂಡಗಳು ಪ್ರಸಕ್ತ ಆವೃತ್ತಿಯಲ್ಲಿ ಏಪ್ರಿಲ್ 7ರಂದು ಮುಖಾಮುಖಿಯಾಗಿವೆ. ಮೊದಲು ಬ್ಯಾಟಿಂಗ್‌ ಮಾಡಿದ್ದ ಮುಂಬೈ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಡಲ್ಲಿ 205 ರನ್‌ ಗಳಿಸಲಷ್ಟೇ ಶಕ್ತವಾಯ್ತು.

ಇದನ್ನೂ ಓದಿ | ಐಪಿಎಲ್​ ಇತಿಹಾಸದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ; ಈ ಮೈಲಿಗಲ್ಲು ತಲುಪಿದ ವಿಶ್ವದ ಮೊದಲ ಆಟಗಾರ

ಅರುಣ್ ಜೇಟ್ಲಿ ಸ್ಟೇಡಿಯಂ ಪಿಚ್ ವರದಿ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ವರ್ಷ ಇಲ್ಲಿಯವರೆಗೆ ಕೇವಲ 2 ಪಂದ್ಯಗಳು ಮಾತ್ರ ನಡೆದಿವೆ. ಪಿಚ್‌ನಲ್ಲಿ ಹೆಚ್ಚು ರನ್‌ಗಳು ಹರಿದು ಬಂದಿವೆ. ಈ ಎರಡು ಪಂದ್ಯಗಳಲ್ಲಿ ನಾಲ್ಕು ತಂಡಗಳು ಬರೋಬ್ಬರಿ 57 ಸಿಕ್ಸರ್‌ಗಳನ್ನು ಸಿಡಿಸಿವೆ. ಮೂರು ಬಾರಿ 200ಕ್ಕೂ ಅಧಿಕ ರನ್‌ ಹರಿದಿವೆ. ಮೈದಾನದಲ್ಲಿ ದಾಖಲಾದ ಕಡಿಮೆ ಮೊತ್ತವೆಂದರೆ 199 ರನ್.

ಡೆಲ್ಲಿ ಹವಾಮಾನ ವರದಿ

ಶನಿವಾರ ಮಧ್ಯಾಹ್ನ ದೆಹಲಿಯಲ್ಲಿ ತಾಪಮಾನವು ಸುಮಾರು 38 ಡಿಗ್ರಿಗಳಷ್ಟಿರುವ ಸಾಧ್ಯತೆ ಇದೆ. ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇಲ್ಲ.

ಡೆಲ್ಲಿ ಕ್ಯಾಪಿಟಲ್ಸ್‌ ಸಂಭಾವ್ಯ ಆಡುವ ಬಳಗ

ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಶಾಯ್ ಹೋಪ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್‌ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಆನ್ರಿಚ್ ನಾರ್ಟ್ಜೆ / ಜೇ ರಿಚರ್ಡ್‌ಸನ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ರಸಿಖ್ ಸಲಾಂ (ಇಂಪ್ಯಾಕ್ಟ್‌ ಆಟಗಾರ).

ಮುಂಬೈ ಇಂಡಿಯನ್ಸ್‌ ಸಂಭಾವ್ಯ ತಂಡ

ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್‌ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಮೊಹಮ್ಮದ್ ನಬಿ, ಜೆರಾಲ್ಡ್ ಕೋಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ / ರೊಮಾರಿಯೋ ಶೆಫರ್ಡ್ (ಇಂಪ್ಯಾಕ್ಟ್‌ ಆಟಗಾರ).‌

Whats_app_banner