IPL 2024: ಐಪಿಎಲ್ಗೆ ಕೆಲವೇ ದಿನಗಳು ಬಾಕಿ ಇರುವಾಗ ಸಹಾಯಕ ಕೋಚ್ ನೇಮಿಸಿದ ಲಕ್ನೋ ಸೂಪರ್ ಜೈಂಟ್ಸ್
- Lucknow Super Giants : ಲಕ್ನೋ ಸೂಪರ್ ಜೈಂಟ್ಸ್ ತಂಡವು ಐಪಿಎಲ್ಗೆ ಕೆಲವೇ ದಿನಗಳು ಬಾಕಿ ಇರುವಾಗ ಸಹಾಯಕ ಕೋಚ್ ಆಗಿ ಲ್ಯಾನ್ಸ್ ಕ್ಲೂಸ್ನರ್ ಅವರನ್ನು ನೇಮಕ ಮಾಡಿದೆ.
- Lucknow Super Giants : ಲಕ್ನೋ ಸೂಪರ್ ಜೈಂಟ್ಸ್ ತಂಡವು ಐಪಿಎಲ್ಗೆ ಕೆಲವೇ ದಿನಗಳು ಬಾಕಿ ಇರುವಾಗ ಸಹಾಯಕ ಕೋಚ್ ಆಗಿ ಲ್ಯಾನ್ಸ್ ಕ್ಲೂಸ್ನರ್ ಅವರನ್ನು ನೇಮಕ ಮಾಡಿದೆ.
(1 / 5)
ಇಂಡಿಯನ್ ಪ್ರೀಮಿಯರ್ ಲೀಗ್ನ ಮುಂಬರುವ ಆವೃತ್ತಿಗೆ ದಕ್ಷಿಣ ಆಫ್ರಿಕಾದ ಮಾಜಿ ಆಲ್ರೌಂಡರ್ ಲ್ಯಾನ್ಸ್ ಕ್ಲೂಸ್ನರ್ ಅವರು ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದಾರೆ. ಮುಖ್ಯಕೋಚ್ ಜಸ್ಟಿನ್ ಲ್ಯಾಂಗರ್, ಇನ್ನೊಬ್ಬ ಸಹಾಯಕ ಕೋಚ್ ಎಸ್. ಶ್ರೀರಾಮ್ಗೆ ಜೋಡಿಯಾಗಿ ಕೆಲಸ ಮಾಡಲಿದ್ದಾರೆ.
(2 / 5)
2022 ರಿಂದ ಎರಡು ಆವೃತ್ತಿಗಳಲ್ಲಿ ಕಣಕ್ಕಿಳಿದಿರುವ ಎಲ್ಎಸ್ಜಿ, ಎರಡೂ ಬಾರಿಯೂ ಪ್ಲೇ ಆಫ್ಗೆ ಪ್ರವೇಶಿಸಿದೆ. ಕ್ಲೂಸ್ನರ್ ಅವರು ಎಲ್ಎಸ್ಜಿ ತಂಡದ ಮಾಲೀಕರ ದಕ್ಷಿಣ ಆಫ್ರಿಕಾದ ಫ್ರಾಂಚೈಸಿ ಡರ್ಬನ್ ಸೂಪರ್ ಜೈಂಟ್ಸ್ ಮುಖ್ಯ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
(3 / 5)
ಕ್ಲೂಸ್ನರ್ ವಿಶ್ವದಾದ್ಯಂತದ ಹಲವು ತಂಡಗಳಿಗೆ ತರಬೇತುದಾರರಾಗಿದ್ದಾರೆ. ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದರು.
(4 / 5)
ಕಳೆದ ವರ್ಷ ಮೊದಲ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಅಮೆಜಾನ್ ವಾರಿಯರ್ಸ್ ತಂಡಕ್ಕೆ ಪ್ರಶಸ್ತಿ ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವರು ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆಯ ಬ್ಯಾಟಿಂಗ್ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದಾರೆ.
ಇತರ ಗ್ಯಾಲರಿಗಳು