ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟನ್ಸ್: ಪಿಚ್, ಹವಾಮಾನ ವರದಿ ಹಾಗೂ ಸಂಭಾವ್ಯ ಆಡುವ ಬಳಗ
ಮುಂಬೈ ಇಂಡಿಯನ್ಸ್ ತಂಡವು ಈವರೆಗೆ ಆಡಿದ 11 ಪಂದ್ಯಗಳಲ್ಲಿ ಏಳು ಗೆಲುವು ಮತ್ತು ನಾಲ್ಕು ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿದೆ. ಅತ್ತ ಗುಜರಾತ್ ಟೈಟನ್ಸ್ ತಂಡವು ಆಡಿದ 10 ಪಂದ್ಯಗಳಲ್ಲಿ ಏಳು ಗೆಲುವು ಮತ್ತು ಮೂರು ಸೋಲುಗಳೊಂದಿಗೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಐಪಿಎಲ್ 18ನೇ ಆವೃತ್ತಿಯು ಅಂತಿಮ ಹಂತಕ್ಕೆ ಬಂದಿದ್ದು, ಕೆಲವು ತಂಡಗಳು ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕಣಕ್ಕಿಳಿಯುತ್ತಿವೆ. ಲೀಗ್‌ನ 56ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ. ಪಂದ್ಯವು ಎಂಐ ತವರು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಕಳಪೆ ಆರಂಭದ ಬಳಿಕ ಸತತ ಆರು ಪಂದ್ಯಗಳಲ್ಲಿ ಗೆದ್ದು ಕಂಬ್ಯಾಕ್ ಮಾಡಿರುವ ಮುಂಬೈ, ಇದೀಗ ಪ್ಲೇಆಫ್ ಹಂತಕ್ಕೇರಲು ಕೆಲವೇ ಹೆಜ್ಜೆಗಳಷ್ಟು ಹಿಂದಿದೆ. ಅತ್ತ ಗುಜರಾತ್ ಕೂಡಾ ಲೀಗ್‌ನಲ್ಲಿ ಪ್ರಬಲ ಫಾರ್ಮ್‌ನಲ್ಲಿದ್ದು, ಪ್ಲೇಆಫ್ ಹಂತಕ್ಕೇರುವ ಫೇವರೆಟ್ ತಂಡಗಳಲ್ಲಿ ಒಂದಾಗಿದೆ.
ಮುಂಬೈ ಇಂಡಿಯನ್ಸ್ ತಂಡವು ಈವರೆಗೆ ಆಡಿದ 11 ಪಂದ್ಯಗಳಲ್ಲಿ ಏಳು ಗೆಲುವು ಮತ್ತು ನಾಲ್ಕು ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿದೆ. ಕೊನೆಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಸತತ ಆರು ಪಂದ್ಯಗಳನ್ನು ಗೆದ್ದಿರುವ ಹಾರ್ದಿಕ್ ಪಾಂಡ್ಯ ಬಳಗವು ಆತ್ಮವಿಶ್ವಾಸದಿಂದ ಬೀಗುತ್ತಿದೆ.
ಗುಜರಾತ್ ಟೈಟನ್ಸ್ ತಂಡವು ಆಡಿದ 10 ಪಂದ್ಯಗಳಲ್ಲಿ ಏಳು ಗೆಲುವು ಮತ್ತು ಮೂರು ಸೋಲುಗಳೊಂದಿಗೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಕೊನೆಯ ಪಂದ್ಯದಲ್ಲಿ ಶುಭ್ಮನ್ ಗಿಲ್ ಬಳಗವು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಎರಡೂ ತಂಡಗಳು ಉತ್ತಮ ಫಾರ್ಮ್‌ನಲ್ಲಿದ್ದು, ಗೆಲುವು ಕೂಡಾ ಎರಡೂ ತಂಡಗಳಿಗೆ ಅನಿವಾರ್ಯವಾಗಿದೆ.
ವಾಂಖೆಡೆ ಕ್ರೀಡಾಂಗಣದ ಪಿಚ್ ವರದಿ
ವಾಂಖೆಡೆ ಕ್ರೀಡಾಂಗಣದ ಪಿಚ್ ಸಾಂಪ್ರದಾಯಿಕವಾಗಿ ಬ್ಯಾಟಿಂಗ್ ಸ್ನೇಹಿ ವಿಕೆಟ್ ಹೊಂದಿದ್ದು, ಬ್ಯಾಟರ್‌ಗಳು ಬೌನ್ಸ್ ಮತ್ತು ವೇಗದ ಆಧಾರದಲ್ಲಿ ದೊಡ್ಡ ಹೊಡೆತಗಳಿಗೆ ಮುಂದಾಗುತ್ತಾರೆ. ಪ್ರಸಕ್ತ ಆವೃತ್ತಿಯ ಐಪಿಎಲ್‌ನಲ್ಲಿ ಈ ಮೈದಾನದಲ್ಲಿ ಆಡಲಾದ ಪಂದ್ಯಗಳಲ್ಲಿ ಪಿಚ್ ಭಿನ್ನ ರೀತಿಯಲ್ಲಿ ವರ್ತಿಸಿದೆ. ಪಿಚ್ ಬ್ಯಾಟಿಂಗ್ ಮಾಡಲು ಕಷ್ಟಕರವಾಗಿರುವ ಸಂದರ್ಭಗಳೂ ಇವೆ. ಬ್ಯಾಟಿಂಗ್ ಸ್ನೇಹಿಯಾಗಿರುವ ಕೆಂಪು ಮಣ್ಣಿನ ವಿಕೆಟ್‌ಗೆ ಹೋಲಿಸಿದರೆ ಕಪ್ಪು ಮಣ್ಣಿನ ವಿಕೆಟ್ ಹೆಚ್ಚು ಬೌನ್ಸ್ ನೀಡುವುದಿಲ್ಲ.
ಮುಂಬೈನ ಹವಾಮಾನ ವರದಿ
ಕಡಲ ನಗರಿ ಮುಂಬೈನಲ್ಲಿ ಸಹಜವಾಗಿ ತಾಪಮಾನ ಹೆಚ್ಚು. ತಾಪಮಾನವು ಗರಿಷ್ಠ 35 ಡಿಗ್ರಿ ಮತ್ತು ಕನಿಷ್ಠ 27 ಡಿಗ್ರಿ ಇರುವ ಸಾಧ್ಯತೆ ಇದೆ. ಮಹತ್ವದ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ನಿರೀಕ್ಷೆಯಿಲ್ಲ. ಹೀಗಾಗಿ ಸಂಪೂರ್ಣ ಪಂದ್ಯ ನಡೆಯುವುದು ಬಹುತೇಕ ಖಚಿತ.
ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ
ರಿಯಾನ್ ರಿಕೆಲ್ಟನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ವಿಲ್ ಜಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧಿರ್, ಕಾರ್ಬಿನ್ ಬಾಷ್, ದೀಪಕ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.
ಗುಜರಾತ್ ಟೈಟನ್ಸ್ ಸಂಭಾವ್ಯ ತಂಡ
ಸಾಯಿ ಸುದರ್ಶನ್, ಶುಭ್ಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ಜೆರಾಲ್ಡ್ ಕೊಯೆಟ್ಜಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.