ಐಪಿಎಲ್ ಪ್ಲೇಆಫ್ ಲೆಕ್ಕಾಚಾರ ಶುರು; ಯಾವ ತಂಡ ಎಷ್ಟು ಪಂದ್ಯ ಗೆದ್ದರೆ ನಾಲ್ಕರ ಘಟ್ಟಕ್ಕೆ ಪ್ರವೇಶ?
ಕನ್ನಡ ಸುದ್ದಿ  /  ಕ್ರಿಕೆಟ್  /  ಐಪಿಎಲ್ ಪ್ಲೇಆಫ್ ಲೆಕ್ಕಾಚಾರ ಶುರು; ಯಾವ ತಂಡ ಎಷ್ಟು ಪಂದ್ಯ ಗೆದ್ದರೆ ನಾಲ್ಕರ ಘಟ್ಟಕ್ಕೆ ಪ್ರವೇಶ?

ಐಪಿಎಲ್ ಪ್ಲೇಆಫ್ ಲೆಕ್ಕಾಚಾರ ಶುರು; ಯಾವ ತಂಡ ಎಷ್ಟು ಪಂದ್ಯ ಗೆದ್ದರೆ ನಾಲ್ಕರ ಘಟ್ಟಕ್ಕೆ ಪ್ರವೇಶ?

2025 ಐಪಿಎಲ್ ಮುಕ್ತಾಯಕ್ಕೆ ಇನ್ನೂ ಬಹಳ ದೂರ ಇದೆ. ಆದರೆ ಅದಕ್ಕೂ ಮುನ್ನವೇ 10 ತಂಡಗಳ ಪ್ಲೇಆಫ್ ಲೆಕ್ಕಾಚಾರ ಶುರುವಾಗಿದೆ. ಯಾವ ತಂಡಕ್ಕೆ ಎಷ್ಟು ಅವಕಾಶ ಇದೆ? ಪ್ಲೇಆಫ್ ತಲುಪಲು ಒಂದು ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂದು ನೋಡೋಣ.

ಐಪಿಎಲ್ ಪ್ಲೇಆಫ್ ಲೆಕ್ಕಾಚಾರ ಶುರು; ಯಾವ ತಂಡ ಎಷ್ಟು ಪಂದ್ಯ ಗೆದ್ದರೆ ನಾಲ್ಕರ ಘಟ್ಟಕ್ಕೆ ಪ್ರವೇಶ?
ಐಪಿಎಲ್ ಪ್ಲೇಆಫ್ ಲೆಕ್ಕಾಚಾರ ಶುರು; ಯಾವ ತಂಡ ಎಷ್ಟು ಪಂದ್ಯ ಗೆದ್ದರೆ ನಾಲ್ಕರ ಘಟ್ಟಕ್ಕೆ ಪ್ರವೇಶ?

2025ರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 31 ಪಂದ್ಯಗಳು ಮುಕ್ತಾಯಗೊಂಡಿವೆ. ಡೆಲ್ಲಿ ಕ್ಯಾಪಿಟಲ್ಸ್ ಹೊರತುಪಡಿಸಿ ಎಲ್ಲಾ ತಂಡಗಳು 6 ಮತ್ತು 7 ಪಂದ್ಯಗಳನ್ನಾಡಿವೆ. ಇದರ ನಡುವೆ 10 ತಂಡಗಳ ಪ್ಲೇಆಫ್ ಲೆಕ್ಕಾಚಾರ ಶುರುವಾಗಿದೆ. ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಅಗ್ರಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನದಲ್ಲಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್​ ಕೊನೆಯ ಸ್ಥಾನದಲ್ಲಿದೆ. ಆದರೆ ಯಾವ ತಂಡಕ್ಕೆ ಎಷ್ಟು ಅವಕಾಶ ಇದೆ? ಪ್ಲೇಆಫ್ ತಲುಪಲು ಒಂದು ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂದು ನೋಡೋಣ.

ಗುಜರಾತ್ ಟೈಟಾನ್ಸ್: ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ 6 ಪಂದ್ಯಗಳಲ್ಲಿ 4 ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಗುಜರಾತ್ ತಂಡಕ್ಕೆ ಇನ್ನು 8 ಪಂದ್ಯಗಳು ಮಾತ್ರ ಉಳಿದಿವೆ. ಈ ಪೈಕಿ 4 ಗೆದ್ದರೆ 16 ಅಂಕಗಳೊಂದಿಗೆ ಮುಂದಿನ ಹಂತಕ್ಕೆ ಮುನ್ನಡೆಯಬಹುದು.

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ 5 ಪಂದ್ಯಗಳನ್ನು ಆಡಿ 4 ಪಂದ್ಯಗಳನ್ನು ಗೆದ್ದಿದೆ. ತಮ್ಮ ಮುಂದಿನ 9 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆದ್ದರೆ, ಅವರು 16 ಅಂಕಗಳೊಂದಿಗೆ ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಟಿದಾರ್ ನೇತೃತ್ವದ ಬೆಂಗಳೂರು 6 ಪಂದ್ಯಗಳಲ್ಲಿ 4 ರಲ್ಲಿ ಗೆಲುವು ಸಾಧಿಸಿದೆ. ಆರ್​ಸಿಬಿ ಇನ್ನೂ 8 ಪಂದ್ಯಗಳನ್ನು ಆಡಬೇಕಾಗಿದೆ. ಈ ಪಂದ್ಯಗಳಲ್ಲಿ 4 ಗೆದ್ದರೆ ಪ್ಲೇಆಫ್ ತಲುಪುತ್ತದೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ 6 ಪಂದ್ಯಗಳಲ್ಲಿ ನಾಲ್ಕು ಗೆಲುವು ಸಾಧಿಸಿದೆ. ಉಳಿದ 8 ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿ ಗೆದ್ದರೆ 16 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಲಿದೆ.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನೇತೃತ್ವದ ಲಕ್ನೋ ಆಡಿದ 7 ಪಂದ್ಯಗಳಲ್ಲಿ 4ರಲ್ಲಿ ಜಯ ಸಾಧಿಸಿದೆ. ಉಳಿದ 7ರಲ್ಲಿ 4 ಪಂದ್ಯಗಳನ್ನು ಗೆದ್ದರೆ, 16 ಅಂಕಗಳೊಂದಿಗೆ ಪ್ಲೇಆಫ್ ತಲುಪುತ್ತದೆ.

ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ ನೇತೃತ್ವದ ಕೆಕೆಆರ್ ತಂಡ ಇದುವರೆಗೆ ಆಡಿರುವ 7 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆದ್ದಿದೆ. ಉಳಿದ 7 ಪಂದ್ಯಗಳಲ್ಲಿ 5 ಗೆದ್ದರೆ ಅವರಿಗೆ 16 ಅಂಕಗಳು ಸಿಗುತ್ತವೆ. ಈ ರೀತಿಯಾಗಿ ಅದು ಟಾಪ್ 4 ರಲ್ಲಿ ಕಾಣಿಸಿಕೊಳ್ಳಬಹುದು.

ರಾಜಸ್ಥಾನ ರಾಯಲ್ಸ್: ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ 6 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ರಾಜಸ್ಥಾನ ತಂಡ ಇನ್ನೂ 8 ಪಂದ್ಯ ಆಡಬೇಕಾಗಿದೆ. 6 ಪಂದ್ಯ ಗೆದ್ದರೆ ಪ್ಲೇಆಫ್ ಪ್ರವೇಶಿಸಬಹುದು.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇದುವರೆಗೆ 6 ಪಂದ್ಯ ಆಡಿದ್ದು, 2ರಲ್ಲಿ ಗೆಲುವು ಸಾಧಿಸಿದೆ. ಉಳಿದ 8 ಪಂದ್ಯಗಳಲ್ಲಿ 6 ಪಂದ್ಯ ಗೆದ್ದರೆ, 16 ಅಂಕಗಳೊಂದಿಗೆ ಪ್ಲೇಆಫ್ ತಲುಪಬಹುದು.

ಸನ್‌ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಹೈದರಾಬಾದ್ ತಂಡ ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಎಸ್​ಆರ್​​ಹೆಚ್ ಉಳಿದ 8 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿದರೆ ಪ್ಲೇಆಫ್ ಪ್ರವೇಶಿಸಬಹುದು.

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಆಡಿರುವ 7 ಪಂದ್ಯಗಳಲ್ಲಿ ಕೇವಲ 2ರಲ್ಲಿ ಮಾತ್ರ ಗೆದ್ದಿದೆ. ಚೆನ್ನೈ ಇನ್ನೂ 7 ಪಂದ್ಯ ಆಡಬೇಕಿದೆ. ಈ ಪೈಕಿ 6 ಪಂದ್ಯಗಳನ್ನು ಗೆದ್ದರೆ, ಪ್ಲೇಆಫ್‌ಗೆ ಅರ್ಹತೆ ಪಡೆಯಬಹುದು.

Prasanna Kumar PN

TwittereMail
ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner